ಎಸ್ ಬಾಲಿ

ಪ್ರಖ್ಯಾತ ಸುಗಮ ಸಂಗೀತ ಕಾರ್ಯಕ್ರಮಗಳನ್ನು ಕಂಡು ಅನುಭಾವಿಸಿದವರಿಗೆ ಆ ಕಾರ್ಯಕ್ರಮಗಳಲ್ಲಿ ಕಾಣಬರುತ್ತಿದ್ದ ಒಬ್ಬ ತೇಜೋಮಯ ಪ್ರತಿಭಾವಂತ ವಾದ್ಯಗಾರರು ಕಣ್ತಪ್ಪಿರಲು ಸಾಧ್ಯವಿಲ್ಲ. ಅವರೇ ಬಹುವಾದ್ಯ ಪರಿಣಿತರಾಗಿ ಎಸ್. ಬಾಲಿ ಎಂದೇ ಪ್ರಖ್ಯಾತರಾಗಿರುವ ಎಸ್ ಬಾಲಸುಬ್ರಹ್ಮಣ್ಯಂ.
ಬಾಲಿ ಅವರು 1953ರ ಜನವರಿ 9ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬಯಾಲಜಿ ಸುಂದರೇಶನ್ ಎಂದೇ ಖ್ಯಾತರಾಗಿದ್ದ ಎಂ.ವಿ. ಸುಂದರೇಶನ್. ತಾಯಿ ಸಾವಿತ್ರಿ. ಚಿಕ್ಕಂದಿನಿಂದಲೇ ಸಂಗೀತದತ್ತ ಒಲವು ಮೂಡಿಸಿಕೊಂಡ ಬಾಲಿ ಪಾಲಕ್ಕಾಡು ಶ್ರೀ ರವೀಂದ್ರನಾಥ ವಾರಿಯರ್ ಬಳಿ ಮೃದಂಗ ಕಲಿತರು. ಮುಂದೆ ಅವರು ಹಲವಾರು ಶಾಸ್ತ್ರೀಯ ಸಂಗೀತಗಾರರಿಗೆ ಮೃದಂಗ ಪಕ್ಕವಾದ್ಯ ಸಹಕಾರದಲ್ಲಿ ಭಾಗಿಯಾಗುತ್ತಾ ಬಂದರು.
ಬಾಲಿಯವರು ಮೃದಂಗ ಕಲಿತ ತೆರದ ಶ್ರದ್ಧೆಯಲ್ಲೇ ತಬಲ, ಢೋಲಕ್, ಢೋಲ್ಕಿ, ಖೋಲ್, ಖಂಜಿರ ಮುಂತಾದ ಹಲವಾರು ವಾದ್ಯಗಳನ್ನು ನುಡಿಸುವ ಪರಿಣತಿಯನ್ನು ಸಾಧಿಸಿದರು. ಹೀಗೆ ಸಕಲ ಲಯ ವಾದ್ಯಗಳ ನುಡಿಸುವಿಕೆಯಲ್ಲಿ ಪರಿಣತಿ ಪಡೆದ ಅಪರೂಪದ ಲಯವಾದ್ಯಗಾರರೆಂಬ ಹೆಗ್ಗಳಿಕೆಗೆ ಪಾತ್ರರಾಗಿ ‘ರಿದಮ್ ಕಿಂಗ್’ ಎಂದೇ ಬಿರುದಾಂಕಿತರಾದರು.
ಹೆಸರಾಂತ ಗಾಯಕರುಗಳಾದ ಬಾಳಪ್ಪ ಹುಕ್ಕೇರಿ, ಕಾಳಿಂಗರಾವ್, ಮೈಸೂರು ಅನಂತಸ್ವಾಮಿ, ಶ್ಯಾಮಲಭಾವೆ, ಅಶ್ವತ್ಥ್, ರತ್ನಮಾಲಾ ಪ್ರಕಾಶ್, ಮಾಲತಿ ಶರ್ಮ ಮುಂತಾದವರ ಕಾರ್ಯಕ್ರಮಗಳಲ್ಲೆಲ್ಲ ಇವರ ವಾದ್ಯಲಯ ಅನುರಣಿಸುತ್ತಿತ್ತು.
ಚಲನಚಿತ್ರ, ನೃತ್ಯ, ನಾಟಕ, ಕಿರುತೆರೆ, ಧ್ವನಿಮುದ್ರಣ ಕಾರ್ಯಗಳಲ್ಲಿ ಖ್ಯಾತ ಸಂಗೀತಗಾರರುಗಳಾದ ಜಿ.ಕೆ. ವೆಂಕಟೇಶ್, ವಿಜಯಭಾಸ್ಕರ್, ಎಂ. ರಂಗರಾವ್, ರಾಜನ್-ನಾಗೇಂದ್ರ, ಟಿ.ಜಿ. ಲಿಂಗಪ್ಪ, ಅನಂತಸ್ವಾಮಿ, ಅಶ್ವತ್ಥ್-ವೈದಿ ಮುಂತಾದವರ ಸಂಗೀತ ಸಂಯೋಜನೆಗಳಿಗೆ ಬಾಲಿ ಅವರ ಲಯ ಸಂಯೋಜನೆ ಒಂದುಗೂಡಿದೆ.‍‍ ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್-ಅರೇಂಜರ್-ಕಂಡಕ್ಟರ್ ಎಂಬ ಹೆಗ್ಗಳಿಕೆ ಅವರದ್ದಾಗಿದೆ. ಶಂಕರನಾಗ್‌ ಅವರ ಸಂಕೇತ್‌ ಸ್ಟುಡಿಯೊ ಆರಂಭದ ಸವಾಲುಗಳನ್ನು ಎದುರಿಸಲು ಬಾಲಿ ಹೆಗಲು ನೀಡಿದರು.
ಬಾಲಿ ಅವರು ಕನ್ನಡದ ಮೊಟ್ಟಮೊದಲ ಧ್ವನಿಸುರಳಿ ಕವಿ ನಿಸಾರ ಅಹಮ್‌ದರವರ ನಿತ್ಯೋತ್ಸವದಿಂದ ಮೊದಲುಗೊಂಡು ಮೈಸೂರು ಅನಂತಸ್ವಾಮಿಯವರ ಸಂಯೋಜನೆಗಳಿಗೆ ಸಹಾಯಕರಾಗಿ ವಾದ್ಯದ ನೆರವು ನೀಡಿದವರು. ಬಾಲಿ ಅವರು ಹಲವಾರು ಧ್ವನಿಸುರುಳಿಗಳು, ಕಿರುತೆರೆ, ನಾಟಕಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಶ್ವದೆಲ್ಲೆಡೆ ಬಾಲಿ ಅವರ ಲಯ ಸಂಗೀತ ಮೊಳಗುತ್ತ ಸಾಗಿದೆ.

ಬಾಲಿ ಅವರಿಗ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಗೌರವ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಒಳಗೊಂಡಂತೆ ಅನೇಕ ಪ್ರಶಸ್ತಿ ಗೌರವಗಳು ಸಂದಿವೆ. ಈ ಹಿರಿಯರಿಗೆ ಹಾರ್ದಿಕ ಶುಭಹಾರೈಕೆಗಳು.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸುಂದರಲಾಲ್ ಬಹುಗುಣ

Wed Mar 9 , 2022
  ಸುಂದರಲಾಲ್ ಬಹುಗುಣ ಮಹತ್ವದ ಪರಿಸರ ಹೋರಾಟಗಾರರಾಗಿ ಜನರಲ್ಲಿ ಪರಿಸರದ ಉಳಿಕೆಯ ಮಹತ್ವವನ್ನು ಆಳವಾಗಿ ಬಿತ್ತಿದ ಪ್ರಮುಖರು. ಗರ್ವಾಲಿ ಪರಿಸರವಾದಿಯಾಗಿ ಹಾಗೂ ಚಿಪ್ಕೊ ಚಳುವಳಿಯ ನಾಯಕರಾಗಿ ಅವರು ಮಾಡಿದ ಕಾಯಕ ವಿಶ್ವದೆಲ್ಲೆಡೆಯ ಜನರನ್ನು ಪ್ರೇರಿಸುತ್ತಾ ಬಂದಿದೆ. ಸುಂದರಲಾಲ್ ಬಹುಗುಣ ಉತ್ತರಖಂಡದ ತೆಹ್ರಿ ಬಳಿಯ ಮರೊಡ ಎಂಬ ಹಳ್ಳಿಯಲ್ಲಿ 1927ರ ಜನವರಿ 9ರಂದು ಜನಿಸಿದರು. ಅವರ ಪೂರ್ವಜರು ಬಂಡೋಪಾಧ್ಯಾಯ ಎಂಬ ವಂಶಾವಳಿಗೆ ಸೇರಿದವರಾಗಿದ್ದು ಸುಮಾರು 800 ವರ್ಷದ ಹಿಂದೆ ಬಂಗಾಳದಿಂದ ತೆಹ್ರಿ […]

Advertisement

Wordpress Social Share Plugin powered by Ultimatelysocial