ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ :

 

ಮಡಿಕೇರಿ : ರಾಜ್ಯದ 33 ಲಕ್ಷ ಹೊಸ ರೈತರಿಗೆ ಸಾಲ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಬಜೆಟಿನಲ್ಲಿ ಪ್ರಕಟಿಸಿದ್ದಾರೆ. ಸ್ವಸಹಾಯ ಗುಂಪುಗಳಿಗೆ ಹಾಗೂ ಇತರರಿಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತ ಸಹಕಾರ ಭವನದಲ್ಲಿ ಸೋಮವಾರ ನಡೆದ ‘ಕುಶಾಲನಗರ ಸಹಕಾರ ಸಂಘದ ಶತಮಾನೋತ್ಸವ’ ಸಮಾರಂಭ ಹಾಗೂ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಮಾದರಿಯಲ್ಲಿ ಕೆಲವು ಬದಲಾವಣೆಗಳೊಂದಿಗೆ ಸುಲಭ ವ್ಯವಸ್ಥೆಯಲ್ಲಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲು ಯೋಚಿಸಲಾಗಿದೆ ಎಂದು ಸಹಕಾರ ಸಚಿವರು ನುಡಿದರು. ರಾಜ್ಯದಲ್ಲಿ ಸುಮಾರು 9 ಲಕ್ಷ ಮಹಿಳಾ ಹಾಲು ಉತ್ಪಾದಕರು ಸೇರಿದಂತೆ ಒಟ್ಟು 26 ಲಕ್ಷ ಹಾಲು ಉತ್ಪಾದಕರಿಗೆ ಸುಗಮವಾಗಿ ಸಾಲ ಸೌಲಭ್ಯ ದೊರೆಯುವಂತಾಗಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.

ರಾಜ್ಯದಲ್ಲಿ 6 ಸಾವಿರ ಕೋಟಿ ರೂ. ಗೂ ಹೆಚ್ಚು ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾಕ್ಕೆ ಬಾಕಿ ಇದ್ದು, ಈ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ ಎಂದು ಸಹಕಾರ ಸಚಿವರು ಹೇಳಿದರು. ರಾಜ್ಯದಲ್ಲಿ 21 ಡಿಸಿಸಿ ಬ್ಯಾಂಕ್‍ಗಳು ಇದ್ದು, 5,477 ಪ್ಯಾಕ್ಸ್ ಸಹಕಾರ ಸಂಘಗಳು ಇವೆ. ಎಲ್ಲಾ ಸಹಕಾರ ಸಂಘಗಳು ಉತ್ತಮವಾಗಿ ನಡೆಯುತ್ತಿದ್ದು, ಶೇ.99 ರಷ್ಟು ಸಾಲವನ್ನು ಮರುಪಾವತಿ ಮಾಡಲಾಗುತ್ತಿದೆ ಎಂದರು.

33 ಲಕ್ಷ ಹೊಸ ರೈತರಿಗೆ ಸಾಲ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಬಜೆಟಿನಲ್ಲಿ ಪ್ರಕಟಿಸಿದ್ದಾರೆ. ಸ್ವಸಹಾಯ ಗುಂಪುಗಳಿಗೆ ಹಾಗೂ ಇತರರಿಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರ ಸಚಿವರು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲಂಚ ಪಡೆಯುತ್ತಿದ್ದ ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಸಸ್ಪೆಂಡ್

Tue Jun 28 , 2022
  ಬೆಂಗಳೂರು: ಕಾರಿನಲ್ಲಿ ವಾಶ್ ಬೇಸಿನ್ ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದು 2,500 ರೂಪಾಯಿ ಲಂಚ ಪಡೆದಿದ್ದಕ್ಕಾಗಿ ಬೆಂಗಳೂರಿನಲ್ಲಿ ಇಬ್ಬರು ಟ್ರಾಫಿಕ್ ಪೊಲೀಸ್ (Bengaluru Traffic Police) ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೂನ್ 10 ರಂದು, ಕೇರಳ ಮೂಲದ ಸಂತೋಷ್ ಕುಮಾರ್ ಎಂಬ ವ್ಯಕ್ತಿ ಕೇರಳ ನೋಂದಣಿಯ ತಮ್ಮ ಕಾರಿನಲ್ಲಿ ಬೆಂಗಳೂರು ನಗರದಲ್ಲಿ (Bengaluru Traffic) ಪ್ರಯಾಣಿಸುತ್ತಿದ್ದರು. ಇದೇ ವೇಳೆ ಹಲಸೂರು ಗೇಟ್ ನಿಲ್ದಾಣದ ಬಳಿ ಇಬ್ಬರು ಟ್ರಾಫಿಕ್ ಸಿಬ್ಬಂದಿ ಅವರನ್ನು […]

Advertisement

Wordpress Social Share Plugin powered by Ultimatelysocial