ಸಚಿನ್ ತೆಂಡಲ್ಕೂರ್ ಗೆ ಕೊರೊನಾ ಪಾಸಿಟಿವ್

ಮಾಜಿ ಕ್ರಿಕೆಟಿಗ ಸಚಿನ್ ತೆಂಡಲ್ಕೂರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಸೋಂಕು ತಗುಲಿರುವ ವಿಚಾರವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿಕೊಂಡಿದ್ದು, ಕೊರೊನಾ ನಿಯಮಗಳನ್ನ ಪಾಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಸಣ್ಣ ಪ್ರಮಾಣದ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ಇಂದು ವರದಿಯಲ್ಲಿ ಸೋಂಕು ತಗುಲಿರೋದು ದೃಢವಾಗಿದ್ದು, ಮನೆಯ ಇತರೆ ಸದಸ್ಯರ ವರದಿ ನೆಗೆಟಿವ್ ಬಂದಿದೆ. ಕೋವಿಡ್ ನಿಯಮಗಳನ್ನ ಪಾಲಿಸಿ, ವೈದ್ಯರ ಸಲಹೆ ಪಡೆದು ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದೇನೆ ಎಂದು ತಿಳಿಸಿದ್ದಾರೆ. ಅಭಿಷೇಕ್ ಬಚ್ಚನ್ ಸೇರಿದಂತೆ ಅಪಾರ ಸೆಲೆಬ್ರಿಟಿಗಳು ಗುಣಮುಖವಾಗಿ ಬನ್ನಿ ಎಂದು ಹಾರೈಸಿದ್ದಾರೆ. ಅಭಿಮಾನಿಗಳು ಸಹ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದು, ಸಚಿನ್ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಅಕ್ರಮ ಗಾಂಜಾ ಬೆಳಗಾರರ ಬಂಧನ

Sat Mar 27 , 2021
ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಶಿವಪುರ ಗ್ರಾಮದ ಬೀರಪ್ಪ ದೊಡ್ಡಪ್ಪ ಹೊಕ್ರಾಣಿ ಅವರ  ಜಮೀನಿನಲ್ಲಿ ಅಕ್ರಮವಾಗಿ ಬೆಳೆದ 900 ಗ್ರಾಮ ಗಾಂಜಾವನ್ನು ಜಪ್ತಿ ಮಾಡಲಾಗಿದೆ ಖಚಿತ ಮಾಹಿತಿ ಆದರಿಸಿ  ಡಿವೈಎಸ್ಪಿ ಅರುಣ ಕುಮಾರ್ ಕೋಳೂರು. ಸಿಪಿಐ ಆನಂದ ವಾಗ್ಮೊಡೆ. ಪಿಎಸ್ಐ ಶಿವಾಜಿ ಪವಾರ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿ ಹಸಿ ಗಾಂಜಾವನ್ನು  ಪಡಿಸಿಕೊಂಡು  ಆರೋಪಿ ಬೀರಪ್ಪ ದೊಡ್ಡಪ್ಪ ಹೊಕ್ರಾಣಿ ಅವನನ್ನು ಬಂಧಿಸಲಾಗಿದೆ.ಈ ಕುರಿತು ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

Advertisement

Wordpress Social Share Plugin powered by Ultimatelysocial