ಸಾರಿಗೆ ನೌಕರರಿಗೆ ಶೀಘ್ರ ವೇತನ: ಸಚಿವ ಬಿ.ಶ್ರೀರಾಮುಲು

ಬೆಂಗಳೂರು, ಮಾ.18: ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಒಂದೂವರೆ ಎರಡು ತಿಂಗಳ ಅಂತರದಲ್ಲಿ ವೇತನ ಪಾವತಿಯಾಗುತ್ತಿದ್ದು, ಅದನ್ನು ಪ್ರತಿ ತಿಂಗಳು ಪಾವತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಅವರು, ಸಾರಿಗೆ ನೌಕರರಿಗೆ ಆರೇಳು ತಿಂಗಳಿಗೆ ವೇತನ ಪಾವತಿಯಾಗುತ್ತಿದ್ದು, ತಾವು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ನಂತರ ಇದನ್ನು ಒಂದೂವರೆಯಿಂದ ಎರಡು ತಿಂಗಳಿಗೆ ಇಳಿಸಿದ್ದೇವೆ. ಮುಂದಿನ ದಿನಗಳಲ್ಲಿ ಪ್ರತಿ ತಿಂಗಳು ನೌಕರರಿಗೆ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 

ನೌಕರರಿಗೆ ವೇತನ ನೀಡಲು ಸರಕಾರ 3 ಸಾವಿರ ಕೋಟಿ ರೂ. ನೀಡಿದೆ. ಇದರಿಂದಾಗಿ ಆರೇಳು ತಿಂಗಳಿಗೆ ನೀಡುತ್ತಿದ್ದ ವೇತನವನ್ನು ಒಂದೂವರೆಯಿಂದ ಎರಡು ತಿಂಗಳಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಪ್ರತಿ ತಿಂಗಳು ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ: ತುಮಕೂರು ಜಿಲ್ಲೆಯ ಪಾವಗಡ ಬಳಿ ಬಸ್ ಪಲ್ಟಿ: 8 ಸಾವು, 20 ಜನರಿಗೆ ಗಾಯ!

Sat Mar 19 , 2022
ದುರದೃಷ್ಟಕರ ಘಟನೆಯಲ್ಲಿ, ತುಮಕೂರು ಜಿಲ್ಲೆಯ ಪಾವಗಡ ಬಳಿ ಬಸ್ ಪಲ್ಟಿಯಾದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ವಿದ್ಯಾರ್ಥಿಗಳು ಸೇರಿದಂತೆ 20 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತಕ್ಕೀಡಾದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ವಿದ್ಯಾರ್ಥಿಗಳೂ ಇದ್ದಾರೆ ಎಂದು ತುಮಕೂರು ಪೊಲೀಸರು ತಿಳಿಸಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, 60 ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು, ಚಾಲಕನ ನಿಯಂತ್ರಣ ತಪ್ಪಿದ ನಂತರ ಆಮೆಯಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ […]

Advertisement

Wordpress Social Share Plugin powered by Ultimatelysocial