ಸಾಯಿಧರಮ್ ತೇಜ್ ಅಭಿನಯದ ‘ವಿರೂಪಾಕ್ಷ’ ಚಿತ್ರದ ಟೈಟಲ್​ ಗ್ಲಿಂಪ್ಸ್​ ಬಿಡುಗಡೆ.

ಸುಪ್ರೀಂ ಹೀರೋ’ ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ ‘ವಿರೂಪಾಕ್ಷ’ ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ.’ವಿರೂಪಾಕ್ಷ’ ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್‌ಎಲ್‌ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ.ಇದು 1990ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು, ಕಾಡಿಗೆ ಅಂಟಿಕೊಂಡಿರುವ ಹಳ್ಳಿಯೊಂದರಲ್ಲಿ ಮೂಢನಂಬಿಕೆಗಳ ಹೆಸರಿನಲ್ಲಿ ನಡೆಯುವ ಕೆಲವು ವಿಲಕ್ಷಣ ಘಟನೆಗಳನ್ನು ನಾಯಕ ಹೇಗೆ ನಿಭಾಯಿಸುತ್ತಾನೆ ಎಂಬುದು ತೋರಿಸಲಾಗಿದೆ.ಕಳೆದ ವರ್ಷ ಹೈದರಾಬಾದ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದ ಚೇತರಿಸಿಕೊಂಡಿರುವ ಸಾಯಿಧರಮ್​ ತೇಜ್ ಈ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಕಾರ್ತಿಕ್​ ದಂಡು ನಿರ್ದೇಶಿಸಿದ್ದು, ಶ್ಯಾಮ್​ ದತ್​ ಅವರ ಛಾಯಾಗ್ರಹಣ ಮತ್ತು ಕನ್ನಡದ ಅಜನೀಶ್​ ಲೋಕನಾಥ್​ ಸಂಗೀತವಿದೆ.’ವಿರೂಪಾಕ್ಷ’ ಚಿತ್ರವು ಏಪ್ರಿಲ್ 21, 2023ರಂದು ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಪ್ಯಾನ್​ ಇಂಡಿಯಾ ಚಿತ್ರವಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಟ ದೇವರಾಜ್ ಅವರಿಂದ ಬಿಡುಗಡೆಯಾಯಿತು "ಪ್ರಜಾರಾಜ್ಯ"ಚಿತ್ರದ ಟೀಸರ್.

Wed Dec 14 , 2022
ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ ” ಪ್ರಜಾರಾಜ್ಯ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್ ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ.ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ. ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ. ಟೀಸರ್ ಚೆನ್ನಾಗಿದೆ. ಇನ್ನು, ಈ ಚಿತ್ರದ ನಿರ್ಮಾಪಕರಾದ ವರದರಾಜು ಅವರು ವೈದ್ಯರಾಗಿದ್ದು, ಸಾಮಾಜಿಕ ಕಾಳಜಿಯಿರುವ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರ […]

Advertisement

Wordpress Social Share Plugin powered by Ultimatelysocial