ಮೇ 20ಕ್ಕೆ “ಸಕುಟುಂಬ ಸಮೇತ” ಚಿತ್ರಮಂದಿರಕ್ಕೆ ಬನ್ನಿ .

 

ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳಿಗೆ ಸಕುಟುಂಬ ಸಮೇತರಾಗಿ ಬನ್ನಿ ಎಂದು ಕರೆಯುವುದು ವಾಡಿಕೆ. ಆದರೆ ಮನೆಯಲ್ಲಿ ಶುಭ ಸಮಾರಂಭ ನಡೆದರೆ ಮನಸ್ಸಿಗೆ ಎಷ್ಟು ಸಂತೋಷವಾಗುವುದೊ, ಅಷ್ಟೇ ಖುಷಿ ಕೊಡುವ “ಸಕುಟುಂಬ ಸಮೇತ” ಎಂಬ ಸಿನಿಮಾ ತೆರೆಗೆ ಬರುತ್ತಿದೆ ಮೇ 20 ರಂದು.

ನಾಯಕನಾಗಿ ರಕ್ಷಿತ್ ಶೆಟ್ಟಿ ಎಷ್ಟು ಹೆಸರು ಮಾಡಿದ್ದಾರೋ, ಅಷ್ಟೇ ಹೆಸರು ನಿರ್ಮಾಪಕರಾಗೂ ಮಾಡುತ್ತಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.

ಪ್ರಸ್ತುತ ರಕ್ಷಿತ್ ಶೆಟ್ಟಿ ತಮ್ಮ ಪರಂ ವಾ ಸ್ಟುಡಿಯೋ ಮೂಲಕ ನಿರ್ಮಿಸಿರುವ “ಸಕುಟುಂಬ ಸಮೇತ” ಚಿತ್ರ ಮೇ ಇಪ್ಪತ್ತರಂದು ತೆರೆಗೆ ಬರುತ್ತಿದೆ.

“ಸಕುಟುಂಬ ಸಮೇತ” ಕುಟುಂಬ ಸಮೇತ ನೋಡುವ ಸಿನಿಮಾ. ಮದುವೆ ನಿಶ್ಚಯವಾದ ಹುಡುಗಿಯೊಬ್ಬಳು ಮದುವೆಗೆ ಒಂದು ವಾರ ಇರುವಾಗ, ಮದುವೆ ಬೇಡ ಎಂದು ಹುಡುಗನ ಮನೆಗೆ ಬಂದು ಹೇಳುತ್ತಾಳೆ. ಮುಂದೇನಾಗುತ್ತದೆ? ಎಂದು ತಿಳಿಯಲು ಸಿನಿಮಾ ನೋಡಬೇಕು ಎಂದರು ನಿರ್ದೇಶಕ ರಾಹುಲ್.

ನಾನು ರಾಹುಲ್ ಅವರನ್ನು “ಉಳಿದವರು ಕಂಡಂತೆ” ಸಿನಿಮಾದಿಂದಲೂ ಬಲ್ಲೆ. ಅಸಿಸ್ಟೆಂಟ್ ಡೈರೆಕ್ಟರ್ ಅಗಿದ್ದ ರಾಹುಲ್ ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ನಾನು ಚಿತ್ರ ನೋಡಿದ್ದೇನೆ. ಚೆನ್ನಾಗಿದೆ. ಕಲರ್ಸ್ ವಾಹಿನಿಯವರು ಈ ಚಿತ್ರದ ಸ್ಯಾಟಲೈಟ್ ಹಾಗೂ ಓಟಿಟಿ ಹಕ್ಕು ಪಡೆದುಕೊಂಡಿದ್ದಾರೆ. ಚಿತ್ರಮಂದಿರಗಳಲ್ಲೂ ಈ ಚಿತ್ರ ಬಿಡುಗಡೆಯಾಗುತ್ತಿದೆ. ಜಿ.ಎಸ್.ಗುಪ್ತ ಅವರು ನನ್ನ ಜೊತೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಬಿಡುಗಡೆಗೂ ಮುನ್ನವೇ ನಾವು ಹಾಕಿರುವ ದುಡ್ಡು ನಮಗೆ ವಾಪಸ್ ಬಂದಿರುವುದಕ್ಕೆ ಖುಷಿಯಿದೆ ಎಂದರು ರಕ್ಷಿತ್ ಶೆಟ್ಟಿ.

ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ ಮುಂತಾದ ಗೆಳೆಯರ ಬಳಗದಿಂದ ಬಂದವರು ಈಗ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರದ ನಿರ್ದೇಶಕ ರಾಹುಲ್ ಸಹ ನನಗೆ ಪರಿಚಯ. ಅವರು ಈ ಚಿತ್ರದ ಕಥೆ ಹೇಳಿದಾಗ ಸ್ವಲ್ಪ ಭಯವಾಯಿತು. ಹೆಚ್ಚು ಮನೆಯಲ್ಲೇ ನಡೆಯುವ ಕಥೆಯಿದು. ಆದರೆ ನಿರ್ದೇಶಕರು ಚಿತ್ರವನ್ನು ಅಂದುಕೊಂಡದ್ದಕ್ಕಿಂತ
ಚೆನ್ನಾಗಿ ನಿರ್ದೇಶಿಸಿದ್ದಾರೆ ಅಂದರು ಅಚ್ಯುತಕುಮಾರ್.

ರೆಡಿಯೋ, ನಾಟಕಗಳಲ್ಲಿ ಅನುಭವವಿದ್ದ ನನಗೆ ಇದು ಮೊದಲ ಚಿತ್ರ. ನನ್ನ ಪಾತ್ರ ಚೆನ್ನಾಗಿದೆ. ಅವಕಾಶ ನೀಡದ್ದ ನಿರ್ಮಾಪಕ, ನಿರ್ದೇಶಕರಿಗೆ ಧನ್ಯವಾದ ಎಂದರು ನಾಯಕಿ‌ ಸಿರಿ ರವಿಕುಮಾರ್.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಾರಣಾಸಿಯ ಜ್ಞಾನವಾಪಿ ಮಸೀದಿ ಸರ್ವೆ ನಿಲ್ಲಿಸ್ಬೇಡಿ; ಕೋರ್ಟ್ ಖಡಕ್ ಸೂಚನೆ!

Thu May 12 , 2022
ವಾರಣಾಸಿ: ವಿಶ್ವಪ್ರಸಿದ್ಧ ಐತಿಹಾಸಿಕ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಸರ್ವೆ ಮುಂದುವರೆಸುವಂತೆ (Survey Of Varanasi) ಸ್ಥಳೀಯ ನ್ಯಾಯಾಲಯ ಇಂದು (ಮೇ 12) ನಿರ್ದೇಶನ ನೀಡಿದೆ. ಈ ಆದೇಶ ದೇಶದಾದ್ಯಂತ ಸಂಚಲನ ಮೂಡಿಸುವ ಎಲ್ಲ ಲಕ್ಷಣಗಳಿದ್ದು ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಹಿಂದೂ ದೇಗುಲದಲ್ಲಿ ವರ್ಷಪೂರ್ತಿ ಪ್ರಾರ್ಥನೆ ಸಲ್ಲಿಸಲು ಐದು ಹಿಂದೂ ಮಹಿಳೆಯರು ಸಲ್ಲಿಸಿದ ಅರ್ಜಿಗಳಿಗೆ ಬಲ ದೊರೆತಂತಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ […]

Advertisement

Wordpress Social Share Plugin powered by Ultimatelysocial