25 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ : ಸಾಲದ ನಿರೀಕ್ಷೆಯಲ್ಲಿದ್ದ ಎಲ್ಲಾ ವರ್ಗದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಾಲದ ನಿರೀಕ್ಷೆಯಲ್ಲಿದ್ದ ಎಲ್ಲಾ ವರ್ಗದವರಿಗೆ ಇಲ್ಲಿದೆ ಗುಡ್ ನ್ಯೂಸ್: 25 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ: 2021-22 ನೇ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ(ಪಿಎಂಇಜಿಪಿ) ಕಾರ್ಯಕ್ರಮದಡಿ ಕೈಗಾರಿಕೆ, ಉತ್ಪಾದನ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಸ್‍ಸಿ, ಎಸ್‍ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಾಜಿ ಸೈನಿಕ, ಅಂಗವಿಕಲರು, ಮಹಿಳೆಯರು, ಸಾಮಾನ್ಯ ವರ್ಗ, ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ವಉದ್ಯೋಗ ಕೈಗೊಳ್ಳುವವರಿಗೆ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನೀಂದ ಗರಿಷ್ಟ 25 ಲಕ್ಷ ರೂ.ವರೆಗೆ ಸಾಲ ನೀಡಿ ಗರಿಷ್ಟ ಶೇ.25 ರಿಂದ 35 ರವರೆಗೆ ಸಹಾಯಧನವನ್ನು ನೀಡಲಾಗುವುದು. ಈ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ www.kvic.org.in(ಪಿಎಂಇಜಿಪಿ ಆನ್‍ಲೈನ್ ಅಪ್ಲಿಕೇಶನ್)ನಲ್ಲಿ ಅರ್ಜಿ ಸಲ್ಲಿಸುವಾಗ (ಏಜೆನ್ಸಿ ಕೋಡ್ ಕೆವಿಐಬಿ) ಎಂದು ಅರ್ಜಿಯಲ್ಲಿ ಅಳವಡಿಸಿ ಅದರ ಪ್ರತಿಯೊಂದಿಗೆ 2 ಸೆಟ್ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸುವುದು. ಅಪೂರ್ಣವಾಗಿ ಭರ್ತಿ ಮಾಡಿದ ಅರ್ಜಿ ಪರಿಗಣಿಸುವುದಿಲ್ಲ.

ಹೆಚ್ಚಿನ ವಿವರಗಳಿಗೆ ಎಚ್.ಆರ್.ರಾಮಕೃಷ್ಣ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕೈಗಾರಿಕ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ, ಹಾಗೂ ದೂ.ಸಂ.08272-225946, 9480825630 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಧುಮೇಹಿಗಳಲ್ಲಿ ನೋವಿನಿಂದ ಕೂಡಿದ ನರದೌರ್ಬಲ್ಯ ಮತ್ತು ಲೇಸರ್‌ ಚಿಕಿತ್ಸೆ

Sun Jan 2 , 2022
ಫಿಸಿಯೋಥೆರಪಿಯ ಮಧುಮೇಹ ಪಾದದ ಚಿಕಿತ್ಸೆಯ ವಿಭಾಗದಲ್ಲಿ ಪಾದಗಳ ನರದೌರ್ಬಲ್ಯಕ್ಕೆ ಲೇಸರ್‌ ಚಿಕಿತ್ಸೆ ನೀಡಲಾಗುತ್ತದೆ. ಇದರಿಂದ ನರದೌರ್ಬಲ್ಯದ ಲಕ್ಷಣಗಳಾದ ಉರಿ, ಜುಮ್ಮೆನಿಸುವಿಕೆ, ನೋವು, ಸಂವೇದನಶೀಲತೆ ಗಳು ಕಡಿಮೆಯಾಗುತ್ತವೆ. ಈ ಚಿಕಿತ್ಸೆಯಲ್ಲಿ ಉಪಯೋಗಿಸುವ ಲೇಸರ್‌ ಕಿರಣಗಳು ಸಾಮಾನ್ಯ ಕಿರಣಗಳಾಗಿರದೆ ನೋವುಗಳ ಚಿಕಿತ್ಸೆಗೆಂದೇ ವಿಶೇಷವಾಗಿ ರೂಪುಗೊಂಡದ್ದಾಗಿರುತ್ತವೆ. ಇವುಗಳಿಂದ ಯಾವುದೇ ವಿಧವಾದ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ. ಇಪ್ಪತ್ತೂಂದನೇ ಶತಮಾನದಲ್ಲಿ ಪ್ರಪಂಚದಾದ್ಯಂತ ಅಸಾಂಕ್ರಾಮಿಕ ರೋಗಗಳು ಒಂದು ಹೊರೆಯಾಗಿ ಪರಿಣಮಿಸಿವೆ. ಅವುಗಳೆಂದರೆ ರಕ್ತದೊತ್ತಡ, ಹೃದಯ ಸಂಬಂಧಿ ತೊಂದರೆಗಳು, ಕ್ಯಾನ್ಸರ್‌, […]

Advertisement

Wordpress Social Share Plugin powered by Ultimatelysocial