ಭಾರತದ ಉದ್ಯೋಗಿಗಳಿಗೆ ಶೇ.15ರಿಂದ 30ರಷ್ಟು ವೇತನ ಏರಿಕೆ.

 

ವದೆಹಲಿ: ಭಾರತೀಯ ನೌಕರ ವರ್ಗಕ್ಕೆ ಇದೊಂದು ಗುಡ್ ನ್ಯೂಸ್. ಆರ್ಥಿಕ ಹಿಂಜರಿತದ ಭೀತಿಯ ನಡುವೆಯೂ ಪ್ರಸಕ್ತ ಸಾಲಿನಲ್ಲಿ ಭಾರತದಲ್ಲಿ ಪ್ರತಿಭಾನ್ವಿತ ನೌಕರರು ಶೇ.15ರಿಂದ 30ರವರೆಗೆ ವೇತನ ಹೆಚ್ಚಳವನ್ನು ಪಡೆಯಲಿದ್ದಾರೆ ಎಂಬ ಸಂಗತಿ ಸಮೀಕ್ಷೆಯೊಂದರಿಂದ ಗೊತ್ತಾಗಿದೆ.

ಕೋರ್ನ್ ಫೆರಿ ಎಂಬ ಸಲಹಾ ಸಂಸ್ಥೆಯು ಈ ಕುರಿತು ಸಮೀಕ್ಷೆ ನಡೆಸಿದ್ದು, ಏಷ್ಯಾದಲ್ಲೇ ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವೇತನ ಹೆಚ್ಚಳವಾಗುವ ಸಾಧ್ಯತೆಗಳಿವೆ. ಕಳೆದ ವರ್ಷ ಸರಾಸರಿ ಶೇ.9.4 ರಷ್ಟು ಏರಿಕೆ ಕಂಡಿದ್ದ ಭಾರತದಲ್ಲಿ ಪ್ರಸಕ್ತ ವರ್ಷದಲ್ಲಿ ಸರಾಸರಿ ಶೇ.9.8% ರಷ್ಟು ವೇತನ ಹೆಚ್ಚಾಗುತ್ತದೆ. ಹೈಟೆಕ್ ಕೈಗಾರಿಕೆಗಳು, ಜೀವ ವಿಜ್ಞಾನಗಳು ಮತ್ತು ಆರೋಗ್ಯ ಸೇವೆ ವಲಯದಲ್ಲಿ ಸರಾಸರಿ ಶೇ.10ಕ್ಕಿಂತ ಹೆಚ್ಚಿನ ವೇತನವನ್ನು ಕಾಣಬಹುದಾಗಿದೆ.

ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ. ಇದು ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವುದರಿಂದ ಪ್ರತಿ ವರ್ಷ ಹೊಸ ಹೊಸ ಉದ್ಯೋಗಿಗಳು ಪ್ರವೇಶಿಸುವುದರಿಂದ ನಿರುದ್ಯೋಗ ಹೆಚ್ಚಳಕ್ಕೆ ಕಾರಣವಾಗಿದೆ. ಇಷ್ಟಾಗಿಯೂ ಪ್ರತಿಭಾನ್ವಿತ ಉದ್ಯೋಗಿಗಳಿಗೆ ಮನ್ನಣೆ ಇದ್ದೇ ಇದೆ ಎಂದು ಸಲಹಾ ಸಂಸ್ಥೆಯು ತನ್ನ ವರದಿಯಲ್ಲಿ ತಿಳಿಸಿದೆ.

ನವದೆಹಲಿ: ಪಾಕಿಸ್ತಾನ- ಭಾರತದ ನಡುವಿನ ಕಾಶ್ಮೀರ ಸಮಸ್ಯೆ (Kashmir) ಬಗೆಹರಿಸಲು ಯುಎಇ ಮಧ್ಯಸ್ಥಿಕೆ ವಹಿಸಬೇಕೆಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಯುಎಇ (ದುಬೈ) ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರಿಗೆ, ಎರಡು ದೇಶಗಳನ್ನು ಮಾತುಕತೆ ಟೇಬಲ್‌ಗೆ ಕರೆತರುವಂತೆ ಮನವಿ ಮಾಡಿರುವುದಾಗಿ ಶೆಹಬಾಜ್ ಷರೀಫ್ ಹೇಳಿದ್ದಾರೆ.

ನಾನು ಯುಎಇ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಅವರು ಪಾಕಿಸ್ತಾನದ ಸಹೋದರ. ಹಾಗೆಯೇ ಭಾರತದೊಂದಿಗೂ ಅವರು ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಮಾತುಕತೆ ಯಶಸ್ವಿಯಾಗಲು ಅವರು ಪ್ರಮುಖ ಪಾತ್ರ ನಿರ್ವಹಣೆ ಮಾಡಬಹುದು ಎಂದು ನಾನು ಹೇಳಿದ್ದೇನೆ.

ನಾವು(ಭಾರತ-ಪಾಕಿಸ್ತಾನ) ಅಣ್ವಸ್ತ್ರ ರಾಷ್ಟ್ರಗಳಾಗಿದ್ದೇವೆ. ಒಂದೊಮ್ಮೆ ಯುದ್ಧ ಸಂಭವಿಸಿದರೆ, ಏನಾಗಿತ್ತು ಎಂದು ಹೇಳಲು ಯಾರೂ ಉಳಿದಿರುವುದೇ ಇಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದಕ್ಕೂ ಮೊದಲು ಅವರು, ಭಾರತದ ಜತೆಗೆ ಯುದ್ಧ ಬದಲಿಗೆ ಮಾತುಕತೆ ಪಾಕಿಸ್ತಾನವು ಸಿದ್ಧವಾಗಿದೆ ಎಂದು ಹೇಳಿದ್ದರು. ಅಲ್-ಅರೇಬಿಯಾ ಟೆಲಿವಿಷನ್‌ಗೆ ನೀಡಿದ ಸಂದರ್ಶನದಲ್ಲಿ, ಷರೀಫ್ ಅವರು, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಒಟ್ಟಿಗೆ ಕುಳಿತು ಕಾಶ್ಮೀರ ಸೇರಿದಂತೆ ಸಮಸ್ಯೆಗಳನ್ನು ಪರಿಹರಿಸಲು ಅವಕಾಶ ಕೋರಿದ್ದರು.

ನವದೆಹಲಿ: ಪಂಜಾಬ್‌ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್‌ ಸಿಂಗ್‌ ಬಾದಲ್‌ (Manpreet Singh Badal) ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ನೇತೃತ್ವದಲ್ಲಿ ಬಾದಲ್‌ ಅವರು ಬಿಜೆಪಿ ಸೇರ್ಪಡೆಯಾದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಬಾದಲ್‌ ಅವರು ರಾಜೀನಾಮೆ ಪತ್ರ ರವಾನಿಸಿದ್ದು, ‘ಪಕ್ಷದ ಆಂತರಿಕ ಚಟುವಟಿಕೆಗಳಿಂದ ಬೇಸತ್ತು ರಾಜೀನಾಮೆ ಸಲ್ಲಿಸಿದ್ದೇನೆ’ ಎಂಬುದಾಗಿ ತಿಳಿಸಿದ್ದಾರೆ. ‘ಕಳೆದ ಏಳು ವರ್ಷದಲ್ಲಿ ಕಾಂಗ್ರೆಸ್‌ಗಾಗಿ ದುಡಿದಿದ್ದೇನೆ. ಅದರಂತೆ ಪಕ್ಷವೂ ನನಗೆ ಹಲವು ಜವಾಬ್ದಾರಿ ನೀಡಿದೆ. ಆದರೆ, ಇತ್ತೀಚಿನ ಬೆಳವಣಿಗೆಗಳಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.

‘ಕಳೆದ ಏಳು ವರ್ಷಗಳ ಹಿಂದೆ ಪೀಪಲ್ಸ್‌ ಪಾರ್ಟಿ ಆಫ್‌ ಪಂಜಾಬ್‌ಅನ್ನು ಕಾಂಗ್ರೆಸ್‌ ಜತೆ ವಿಲೀನಗೊಳಿಸಿದೆ. ಇದಾದ ಬಳಿಕ ನಾನು ಹಲವು ಜವಾಬ್ದಾರಿಗಳನ್ನು ನಿಭಾಯಿಸಿದೆ. ಆದರೆ, ಇತ್ತೀಚೆಗೆ ಪಕ್ಷದಲ್ಲಿ ನಡೆಯುತ್ತಿರುವ ಚಟುವಟಿಕೆಗಳು, ಸಂಸ್ಕೃತಿ ಕಂಡು ಬೇಸರಗೊಂಡಿದ್ದೇನೆ’ ಎಂದು ಹೇಳಿದ್ದಾರೆ.

ಕೋಲ್ಕೊತಾ:ಪಾಕಿಸ್ತಾನ ಆಕ್ರಮಿತ ಪ್ರದೇಶ(ಪಿಒಕೆ)ವು ಭಾರತಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ವಿವಾದಲ್ಲಿರುವ ಭೂಮಿ. ಭಾರತವು ಆ ಸ್ಥಳವನ್ನು ಭಾರತದ ಅವಿಭಾಜ್ಯ ಅಂಗವೆಂದು ಗುರುತಿಸಿ, ಅದಕ್ಕೆ ಪಿಒಕೆ ಎಂದು ಕರೆಯುತ್ತಿದ್ದರೆ, ಪಾಕಿಸ್ತಾನ ಅದನ್ನು ತಮ್ಮ ಸ್ಥಳವೆಂದು ಹೇಳುತ್ತಿದ್ದು, ಅದಕ್ಕೆ ಆಜಾದ್‌ ಕಾಶ್ಮೀರ್‌(ಸ್ವತಂತ್ರ ಕಾಶ್ಮೀರ) ಎಂದು ಕರೆಯುತ್ತಿದೆ. ಹೀಗಿರುವ ಪಶ್ಚಿಮ ಬಂಗಾಳದ (West Bengal) ಶಿಕ್ಷಣ ಇಲಾಖೆಯು ಹತ್ತನೇ ತರಗತಿ ವಿದ್ಯಾರ್ಥಿಗಳ ಮಾದರಿ ಪ್ರಶ್ನೆ ಪತ್ರಿಕೆಯಲ್ಲಿ ಪಿಒಕೆಯನ್ನು ಆಜಾದ್‌ ಕಾಶ್ಮೀರ ಎಂದು ಹೆಸರಿಸುವ ಮೂಲಕ ವಿವಾದವನ್ನು ಸೃಷ್ಟಿಸಿಕೊಂಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕೆ ಆರ್ ಎಸ್ ಸಿದ್ಧಾಂತಗಳನ್ನು ಒಪ್ಪಿಕೊಂಡು ಯುವಕರು ಸೇರ್ಪಡೆಯಾದರು.

Wed Jan 18 , 2023
ಕಲ್ಬುರ್ಗಿ ಜಿಲ್ಲಾ ಅಧ್ಯಕ್ಷ ವಿಜಯ ಜಾಧವರ ನೇತೃತ್ವದಲ್ಲಿ ಯಡ್ರಾಮಿ ತಾಲೂಕಿನ ಯುವಕರುಕಾಂಗ್ರೆಸ್ ಮತ್ತು ಬಿಜೆಪಿ ಜೆಡಿಎಸ್ ತೊರೆದು ಇಂದು ಕೆ ಆರ್ ಎಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಅನೇಕ ಯುವಕರು ಇಂದು ಕೆ ಆರ್ ಎಸ್ ಪಕ್ಷ ಸೇರ್ಪಡೆಯಾದರು.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial