ಸಾಲುಮರದ ತಿಮ್ಮಕ್ಕಗೆ ಅನಾರೋಗ್ಯ: ಅಪೋಲೊ ಆಸ್ಪತ್ರೆಗೆ ದಾಖಲು

ಬೆಂಗಳೂರು, ಡಿಸೆಂಬರ್ 7 ಕರ್ನಾಟಕದ ಹೆಮ್ಮೆಯ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆತರಲಾಗಿದೆ.

ಬೇಲೂರಿನ ತಮ್ಮ ಮನೆಯಲ್ಲಿ ಭಾನುವಾರ ಸಂಜೆ ಕುಸಿದು ಬಿದ್ದ ತಿಮ್ಮಕ್ಕ ಅವರ ಸೊಂಟದ ಮೂಳೆ ಮುರಿದು ಹೋಗಿದ ಎನ್ನಲಾಗಿದೆ. ಕೂಡಲೇ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಅಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು.ತಿಮ್ಮಕ್ಕ ಅವರ ಸೊಂಟಕ್ಕೆ ಶಸ್ತ್ರಚಿಕಿತ್ಸೆ ನಡೆಸುವ ಅಗತ್ಯವಿದೆ.ಹೀಗಾಗಿ ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ಕರೆತರಲಾಗಿದೆ. ಬುಧವಾರ ಅಥವಾ ಗುರುವಾರ ಅವರ ಸೊಂಟದ ಆಪರೇಷನ್ ನಡೆಸುವ ಸಾಧ್ಯತೆ ಇದೆ ಎಂದು ತಿಮ್ಮಕ್ಕ ಅವರ ದತ್ತುಪುತ್ರ ಉಮೇಶ್ ಮಾಹಿತಿ ನೀಡಿದ್ದಾರೆ.

ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ಕಳೆದ ಮೇ ತಿಂಗಳಿನಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಹೊಟ್ಟೆನೋವು, ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದ ತಿಮ್ಮಕ್ಕ ಅವರನ್ನು ಹಾಸನದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡಿದ್ದರು.

ಇದನ್ನು ಓದಿ:ಕುತೂಹಲ ಕೆರಳಿಸಿದ ಸಿಎಂ-ವಿನಯ್ ಗುರೂಜಿ ದಿಢೀರ್ ಭೇಟಿ

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ.

Tue Dec 8 , 2020
ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ಬೆಳಗಾವಿಯಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ನಿಲ್ದಾಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ […]

Advertisement

Wordpress Social Share Plugin powered by Ultimatelysocial