ಸ್ಯಾಂಡಲ್‌ವುಡ್ ಹಿರಿಯ ಪೋಷಕ ನಟ ಅಶೋಕ್ ರಾವ್ ನಿಧನ

ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ಅಶೋಕ್ ರಾವ್ ಅವರು ಇಂದು ನಿಧನ ಹೊಂದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲ ತಿಂಗಳಿನಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.

ಅಣ್ಣಾವ್ರು ಅಭಿನಯದ ‘ಪರಶುರಾಮ್’ ಚಿತ್ರದ ವಿಲನ್ ಅಶೋಕ್ ರಾವ್ ನಿಧನ

ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೆಬ್ಬಾಳದ ಬಳಿಯ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಂತಿಮ ಕ್ರಿಯೆ ನೆರವೇರಿಸಲಾಗುವುದು.ಅಶೋಕ್ ರಾವ್ ಕನ್ನಡ ಚಿತ್ರರಂಗದ ಹಿರಿಯ ನಟರಾಗಿದ್ದು ಡಾ.ರಾಜ್‌ಕುಮಾರ್, ಶಂಕರ್ ನಾಗ್ ಸೇರಿದಂತೆ ಹಲವು ದಿಗ್ಗಜ ನಟರೊಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ. ಡಾ.ರಾಜ್‌ಕುಮಾರ್ ನಟಿಸಿದ್ದ ‘ಪರುಶುರಾಮ’ ಸಿನಿಮಾದಲ್ಲಿ ಖಳನಾಯಕ ಪಾತ್ರದಲ್ಲಿ ನಟಿಸಿದ್ದ ಅಶೋಕ್ ರಾವ್, ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧು ಚಂದ್ರಕೆ’ ಸಿನಿಮಾದಲ್ಲಿ ತನಿಖಾಧಿಕಾರಿಯ ಪಾತ್ರದಲ್ಲಿ ಹೆಚ್ಚು ಜನಪ್ರಿಯರು.ಕಾಸರಗೋಡು ಅಶೋಕ್ ರಾವ್ ಅವರ ಜನ್ಮ ಸ್ಥಳ. ವಿಧ್ಯಾಭ್ಯಾಸ ಮಾಡಿದ್ದು ತಮಿಳುನಾಡಿನಲ್ಲಿ. ಸೇಲಂ ಬಳಿಯ ಒಂದು ವಸತಿ ಶಾಲೆಯಲ್ಲಿ ಅಶೋಕ ರಾವ್​ ಶಿಕ್ಷಣ ಪಡೆದರು. ಶಾಲಾ ದಿನಗಳಲ್ಲಿಯೇ ಅಶೋಕ್ ರಾವ್ ಅವರಿಗೆ ನಾಟಕಗಳ ಬಗ್ಗೆ ಆಸಕ್ತಿ ಮೂಡಿತ್ತು. ಅವರ ಅದ್ಭುತವಾದ ಕಂಚಿನ ಕಂಠದ ಕಾರಣಕ್ಕೆ ಅವರಿಗೆ ಕೆಲವು ಪಾತ್ರಗಳು ಸಿಕ್ಕವು. ಶಾಲಾ ದಿನಗಳಿಂದಲೂ ಅಭಿನಯದ ಬಗ್ಗೆ ಆಸಕ್ತಿ ಮೂಡಿಸಿಕೊಂಡಿದ್ದ ಅವರು ವಿದ್ಯಾಭ್ಯಾಸ ಮುಗಿಸಿದ ಬಳಿಕ ಹಲವು ಇಂಗ್ಲಿಷ್​ ನಾಟಕಗಳಲ್ಲಿ ನಟಿಸಿದ್ದರು. ಬಳಿಕ ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದುಕೊಂಡರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಣ ಸಂಸ್ಥೆಗಳು ಎನ್ ಒಸಿ ಪಡೆಯಬೇಕಾದರೆ ಕನ್ನಡ ಕಲಿಕೆ ಕಡ್ಡಾಯ

Wed Feb 2 , 2022
ಬೆಂಗಳೂರು: ಶಿಕ್ಷಣ ಸಂಸ್ಥೆಗಳು ಎನ್‌ಒಸಿ ಪಡೆಯಬೇಕಾದರೆ ಕನ್ನಡ ಕಲಿಕೆ ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೇಂದ್ರ ಪಠ್ಯ ಕ್ರಮ ಬೋಧಿಸುವ ಐಸಿಎಸ್‌ಇ, ಸಿಬಿಎಸ್‌ಇ ಮತ್ತು ಇನ್ನಿತರ ಪಠ್ಯಕ್ರಮ ಬೋಧಿಸುವ ಶಿಕ್ಷಣ ಸಂಸ್ಥೆಗಳು ಎನ್‌ಒಸಿ ಪಡೆಯುವ ಸಂಬಂ ಧ ಶಿಕ್ಷಣ ಇಲಾಖೆಯು ಕರಡು ಅಧಿಸೂಚನೆ ಪ್ರಕಟಿಸಿದೆ.ಕನ್ನಡ ಭಾಷಾ ಅಧಿನಿಯಮ 2015ರ ಪ್ರಕಾರ,ರಾಜ್ಯ ಸರಕಾರದಿಂದ ನಿರಾಕ್ಷೇಪಣ ಪತ್ರ ಪಡೆಯುವ ಶಿಕ್ಷಣ ಸಂಸ್ಥೆಯು ಕನ್ನಡ ಭಾಷೆಯನ್ನು ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಡ್ಡಾಯವಾಗಿ […]

Advertisement

Wordpress Social Share Plugin powered by Ultimatelysocial