ಶೋಕಿವಾಲನಿಗೆ ಸಾಥ್ ನೀಡಲು ಬಂದ ಸ್ಯಾಂಡಲ್ ವುಡ್ ಸ್ಟಾರ್ ನಿರ್ದೇಶಕರು

ಅಜಯ್ ರಾವ್ ನಾಯಕರಾಗಿ ನಟಿಸಿರುವ “ಶೋಕಿವಾಲ” ಚಿತ್ರದ ಹಾಡೊಂದರ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು.
ಈ ಹಾಡಿನ ವಿಶೇಷತೆ ಏನೆಂದರೆ ನಾಯಕ ಅಜಯ್ ರಾವ್ ಅವರೊಂದಿಗೆ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ರವಿ ಬಸ್ರೂರ್, ನಂದಕಿಶೋರ್, ಹರಿ ಸಂತೋಷ್, ಶಶಾಂಕ್, ವಿ.ನಾಗೇಂದ್ರ ಪ್ರಸಾದ್ ಹೆಜ್ಜೆ ಹಾಕಿದ್ದಾರೆ. ಎಲ್ಲಾ ದಿಗ್ಗಜರ ಸಮಾಗಮದಲ್ಲಿ ಮೂಡಿಬಂದಿರುವ ಈ ಹಾಡು ಜನಮನಸೂರೆಗೊಂಡು, ಸಾಮಾಜಿಕ ಜಾಲ ತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಈ ಹಾಡನ್ನು ಚೇತನ್ ಕುಮಾರ್ ಬರೆದಿದ್ದು, ಶಶಾಂಕ್ ಶೇಷಗಿರಿ ಹಾಡಿದ್ದಾರೆ. ಶ್ರೀಧರ್.ವಿ.ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ.

ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಹಾಡು ಬಿಡುಗಡೆ ಸಮಾರಂಭ ನಡೆಯಿತು.
ಹಾಡಿನಲ್ಲಿ ನಟಿಸಿರುವ ನಿರ್ದೇಶಕರುಗಳೇ ಈ ಹಾಡನ್ನು ರೀಲಿಸ್ ಮಾಡಿದ್ದು ವಿಶೇಷ,
ವಿ.ನಾಗೇಂದ್ರಪ್ರಸಾದ್, ನಂದಕಿಶೋರ್, ಹರಿ ಸಂತೋಷ್, ಚೇತನ್ ಕುಮಾರ್, ಮಹೇಶ್ ಕುಮಾರ್ ರವರು ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.
5 ಜನ ನಿರ್ದೇಶಕರನ್ನು ಚಿತ್ರ ತಂಡದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಇದೆ ತಿಂಗಳ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಕುಟುಂಬ ಸಮೇತ ಕುಳಿತು ನೋಡುವ ಸಿನಿಮಾವಾಗಿದೆ. ಎಲ್ಲರು ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು ನಿರ್ಮಾಪಕ T.R.ಚಂದ್ರಶೇಖರ್.

“ಜಾಕಿ” ನಿರ್ದೇಶನದ ಈ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ನವೀನ್ ಕುಮಾರ್ ಈ ಚಿತ್ರದ ಛಾಯಾಗ್ರಹಕರು.

ಅಜಯ್ ರಾವ್ ಅವರಿಗೆ ನಾಯಕಿಯಾಗಿ ಸಂಜನಾ ಆನಂದ್ ನಟಿಸಿದ್ದಾರೆ. ಶರತ್ ಲೋಹಿತಾಶ್ವ, ಅರುಣ ಬಾಲರಾಜ್, ತಬಲಾ ನಾಣಿ, ಪ್ರಮೋದ್ ಶೆಟ್ಟಿ, ಗಿರಿ, ನಾಗರಾಜ ಮೂರ್ತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾವು ಜಾತಿ ಅಥವಾ ಧರ್ಮದ ಮೇಲೆ ಜನರನ್ನು ವಿಭಜಿಸುವುದಿಲ್ಲ!

Wed Apr 20 , 2022
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಸರ್ಕಾರವು ಜಾತಿ, ಧರ್ಮ ಅಥವಾ ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುವುದಿಲ್ಲ ಎಂದು ಹೇಳಿದ್ದಾರೆ. ಜನರು ಬಂಗಾಳದಲ್ಲಿರುವಾಗ ಅವರು ಕುಟುಂಬದ ಸದಸ್ಯರಂತೆ ಇರುತ್ತಾರೆ ಎಂದು ಅವರು ಹೇಳಿದರು. ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಕೋಲ್ಕತ್ತಾದಲ್ಲಿ ಬಂಗಾಳದ ಜಾಗತಿಕ ವ್ಯಾಪಾರ ಶೃಂಗಸಭೆ ಬುಧವಾರ, ಮಮತಾ ಬ್ಯಾನರ್ಜಿ, “ದೇಶದ ಯಾವುದೇ ಭಾಗದವರಾಗಿದ್ದರೂ, ಬಂಗಾಳದಲ್ಲಿ ಒಬ್ಬರು ನಮ್ಮ ಕುಟುಂಬದ ಭಾಗವಾಗಿದ್ದರೂ ಮತ್ತು ಇಲ್ಲಿ ಆರಾಮವಾಗಿರಬೇಕು” […]

Advertisement

Wordpress Social Share Plugin powered by Ultimatelysocial