ಬಿಜೆಪಿಗೆ ಸಂದೇಶ್ ನಾಗರಾಜು ರಾಜೀನಾಮೆ.

ಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ

ಮೈಸೂರು: ಹಲವಾರು ವರ್ಷಗಳವರೆಗೆ ಕಾಂಗ್ರೆಸ್‌ನಲ್ಲಿ ರಾಜಕೀಯ ಮಾಡಿಕೊಂಡು ಬಂದಿದ್ದ ನಿರ್ಮಾಪಕ, ಉದ್ಯಮಿ ಎಸ್.ಸಂದೇಶ್ ನಾಗರಾಜ್ ಅವರು ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದಶಕದ ಬಳಿಕ ಮರಳಿ ಮಾತೃಪಕ್ಷಕ್ಕೆ ಹಿಂತಿರುಗಲು ನಿರ್ಧರಿಸಿದ್ದಾರೆ.

ಜಾ.ದಳದಿಂದ ಬಿಜೆಪಿ ಸೇರಿದ್ದ ಕೆಲವೇ ತಿಂಗಳಿನಲ್ಲಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿರುವ ಅವರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಅವರ ಪುತ್ರರಿಬ್ಬರೂ ಬಿಜೆಪಿ ಸೇರ್ಪಡೆಯಾಗಿ ಕಾಂಗ್ರೆಸ್‌ಗೆ ಶಾಕ್ ಉಂಟಾದ ಬೆನ್ನಲ್ಲೇ ಒಂದು ಕಾಲದ ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದ ಎಸ್.ಸಂದೇಶ್ ನಾಗರಾಜ್ ಅವರ ನಿಲುವು ಹಲವಾರು ಬದಲಾವಣೆಗೆ ಕಾರಣವಾಗಿದೆ. ನರಸಿಂಹರಾಜ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಲು ಸಹೋದರ, ಮಾಜಿ ಮಹಾಪೌರ ಎಸ್.ಸತೀಶ್ ಸ್ವಾಮಿ ತಯಾರಾಗಿರುವುದರ ಮೇಲೆ ಪರಿಣಾಮ ಬೀರಿದರೆ, ಮತ್ತೊಂದೆಡೆ ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ತಮ್ಮದೇ ಹಿಡಿತ ಸಾಧಿಸಿರುವ ಪರಿಣಾಮ ಕಾಂಗ್ರೆಸ್‌ಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.
ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಾಜಕಾರಣ ಮಾಡಿಕೊಂಡು ಬಂದಿರುವ ಸಂದೇಶ್ ನಾಗರಾಜ್ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸೇರಿದಂತೆ ಅನೇಕ ನಾಯಕರ ಆಪ್ತರಾಗಿದ್ದರು. 2003ರಲ್ಲಿ ಅವರನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. 2004ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರು ಜಾ.ದಳ ತೊರೆದು ಕಾಂಗ್ರೆಸ್ ಸೇರಿದ್ದರಿಂದ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದರು.
ನಂತರದ ದಿನಗಳಲ್ಲಿ ಜಾ.ದಳ ಸೇರಿ 2008ರಲ್ಲಿ ನರಸಿಂಹರಾಜ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ನಂತರ, 2010ರಲ್ಲಿ ಮೈಸೂರು-ಚಾಮರಾಜನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಜಾ.ದಳ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಸಂದೇಶ್ ನಾಗರಾಜ್ ಅವರು ಮೊದಲ ಬಾರಿಗೆ ಗೆದ್ದು ವಿಧಾನ ಪರಿಷತ್ ಪ್ರವೇಶ ಮಾಡಿದ್ದರು. 2016ರಲ್ಲಿ ಪರಿಷತ್‌ಗೆ ಪುನರ್‌ ಆಯ್ಕೆಯಾಗಿದ್ದರು. ಆದರೆ, ಈ ಚುನಾವಣೆಯಲ್ಲಿ ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸದಿದ್ದಕ್ಕೆ ಜಾ.ದಳದ ಕೆಲವು ನಾಯಕರೇ ಕಾರಣವೆಂದು ಅತೃಪ್ತಿಗೊಂಡಿದ್ದರು.
ನಂತರ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಅಂತರ ಕಾಯ್ದು ಕೊಂಡಿದ್ದರು. 2018ರ ಚುನಾವಣೆುಂಲ್ಲಿ ತಮ್ಮ ಸಹೋದರ ಎಸ್.ಸತೀಶ್ ಸ್ವಾಮಿ ಅವರನ್ನು ಬಿಜೆಪಿಗೆ ಕಳುಹಿಸಿ ಟಿಕೆಟ್ ಸಿಗುವಂತೆ ನೋಡಿಕೊಂಡಿದ್ದರು. ತೆರೆಮರೆಯಲ್ಲಿ ತಮ್ಮನ ಪರವಾಗಿ ಕೆಲಸ ಮಾಡಿದ್ದರು. ಇದಾದ ಬಳಿಕ ಜಾ.ದಳ-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇದ್ದಾಗಲೂ ದಳಪತಿಗಳ ಹತ್ತಿರ ಸುಳಿಯದೆ ಮನಸ್ತಾಪ ಮುಂದುವರಿಸಿದ್ದರು. ಎರಡು ವರ್ಷಗಳಿಂದ ತಟಸ್ಥವಾಗಿ ಉಳಿದಿದ್ದ ಎಸ್.ಸಂದೇಶ್ ನಾಗರಾಜ್ ಅವರು 2022ರ ಮೈಸೂರು-ಚಾಮರಾಜನಗರ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯಲ್ಲಿ ಮತ್ತೊಮ್ಮೆ ಕಣಕ್ಕಿಳಿಯಲು ಬಯಸಿ ಬಿಜೆಪಿ ಸೇರಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ನಂತರದಲ್ಲಿ ಆರ್.ರಘು ಅವರಿಗೆ ಟಿಕೆಟ್ ಕೊಟ್ಟಿತ್ತು. ಇದರಿಂದಾಗಿ ಅಸಮಾಧಾನಗೊಂಡಿದ್ದ ಅವರು ಬಿಜೆಪಿ ನಾಯಕರ ವಿರುದ್ಧ ಮುನಿದಿದ್ದರು. ಕಳೆದ ತಿಂಗಳ ಹಿಂದಷ್ಟೇ ಬಿಜೆಪಿ ನಾಯಕರ ವರ್ತನೆ ಬಗ್ಗೆ ಕಿಡಿಕಾರಿದ್ದ ಅವರು ಈಗ ಅಧಿಕೃತವಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರಲು ನಿರ್ಧರಿಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ.

ಬಿಜೆಪಿ ನಾಯಕರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಕೆಲವನ್ನು ಹೇಳಲು ಬೇಸರವಾಗುತ್ತದೆ. ಸೂಕ್ತ ಸಂದರ್ಭದಲ್ಲಿ ಮಾತನಾಡುತ್ತೇನೆ. ಪಕ್ಷದಲ್ಲಿರಲು ಬೇಸರವಾಗಿದ್ದರಿಂದ ರಾಜೀನಾಮೆ ನೀಡಿದ್ದೇನೆ. ಒಳ್ಳೆಯ ದಿನ ನೋಡಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಾಸನ ವಿಧಾಸಭಾ ಕ್ಷೇತ್ರದ ಟಿಕೆಟ್ ಗೊಂದಲ ಜೆಡಿಎಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ.

Thu Feb 2 , 2023
ಹಾಸನ ವಿಧಾಸಭಾ ಕ್ಷೇತ್ರದ ಟಿಕೆಟ್ ಗೊಂದಲ ಜೆಡಿಎಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ಭವಾನಿ ರೇವಣ್ಣ ಹೆಸರು ಕೇಳಿ ಬಂದ ಹಿನ್ನೆಲೆ ಕೋಲಾಹಲವೇ ಸೃಷ್ಟಿಯಾಗಿತ್ತು. ಇದೀಗ ಸಿಂ’ಹಾಸನ’ದ ಟಿಕೆಟ್ ಫೈಟ್​ಗೆ ಖುದ್ದು ಜೆಡಿಎಸ್‌ ವರಿಷ್ಠ ಹೆಚ್​​ಡಿ ದೇವೇಗೌಡರೇ ಎಂಟ್ರಿ ಕೊಡೋಕೆ ನಿರ್ಧರಿಸಿದ್ದಾರೆ. ಹಾಸನದಲ್ಲಿ ದೇವೇಗೌಡರ ಲೆಕ್ಕವೇ ಬೇರೆ! ಒಬ್ಬೊಬ್ಬರದ್ದು ಒಂದೊಂದು ಲೆಕ್ಕಾಚಾರವಾದ್ರೆ ಹಾಸನದಲ್ಲಿ ದೇವೇಗೌಡರದ್ದೇ ಒಂದು ಲೆಕ್ಕಾಚಾರವಿದೆ. ಹಾಸನದ ಟಿಕೆಟ್ ಫೈಟ್​ಗೆ ಹೆಚ್‌.ಡಿ.ದೇವೇಗೌಡರು ಹೊಸ ದಾಳ ಉರುಳಿಸಲು ಮುಂದಾಗಿದ್ದಾರೆ. ಭವಾನಿ ರೇವಣ್ಣ, ಸ್ವರೂಪ್ […]

Advertisement

Wordpress Social Share Plugin powered by Ultimatelysocial