ಹುಟ್ಟುಹಬ್ಬಕ್ಕೆ ಭರ್ಜರಿ ನಟನೆಯ “ಮಾರ್ಟಿನ್” ಸಿನಿಮಾದ ಭಯಾನಕ ಲುಕ್ ಬಿಡುಗಡೆ 

ಅದ್ದೂರಿ  ಧ್ರುವ ಸರ್ಜಾ ಅದ್ದೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ ಕಾರಣ ಕೊರೊನಾ ಮತ್ತು ಸಹೋದರ ಚಿರಂಜೀವಿ ಸರ್ಜಾ ಅಗಲಿಕೆಯ ನೋವಿನಿಂದ.. ಪ್ರತಿವರ್ಷ ಹೇಗೆ ನಮ್ಮನೆ ಹುಡುಗ ಅಂತ ನನ್ನ ಎಲ್ಲಾ ಅಣ್ಣ ತಮ್ಮಂದಿರು, ಅಕ್ಕ-ತಂಗಿಯರು, ತಾಯಂದಿರು ಹೇಗೆ ಆಶೀರ್ವಾದ ಮಾಡುತ್ತಿದ್ದಿರೊ ಈ ಬಾರಿಯೂ ನನ್ನ ಹುಟ್ಟುಹಬ್ಬಕ್ಕೆ ಆಶೀರ್ವಾದ ಮಾಡಿ” ಎಂದು ಧ್ರುವ ಸರ್ಜಾ ವಿಡಿಯೋ ಮೂಲಕ ಮನವಿ ಮಾಡಿದ್ದರು.

ಇನ್ನು ಹುಟ್ಟುಹಬ್ಬದ ಪ್ರಯುಕ್ತ ಸ್ಯಾಂಜಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ನಟನೆಯ ಮಾರ್ಟಿನ್ ಸಿನಿಮಾದಿಂದ ಭಯಾನಕ ಲುಕ್ ಬಿಡುಗಡೆ ಮಾಡಲಾಗಿದೆ. ಪೋಸ್ಟರ್ ನಲ್ಲಿ ಧ್ರುವ ಕೈಗೆ ಬೇಡಿ ಹಾಕಲಾಗಿದ್ದು, ಖರಾಬು ಲುಕ್ ನಲ್ಲಿ ಪೋಸ್ ನೀಡಿದ್ದಾರೆ. ಡಿಸೆಂಬರ್‌ ವೇಳೆ ಈ ಸಿನಿಮಾ ಮುಗಿಸುವ ಚಿಂತನೆಯಲ್ಲಿದೆ ಚಿತ್ರತಂಡ. ಇನ್ನು ಈ ಸಿನಿಮಾ ಕನ್ನಡದ ಜೊತೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಲಿದೆ ಜೊತೆಗೆ ಸಿನಿಮಾದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಸುಲಭದ ಜಯದಿಂದ ಮುಂಬೈ ಪ್ಲೇ ಆಫ್ ಕನಸು ಜೀವಂತ

Wed Oct 6 , 2021
ಇಂಡಿಯನ್ ಪ್ರೀಮಿಯರ್ ಲೀಗ್‌ ನ 51 ನೇ ಪಂದ್ಯವನ್ನ ಮಂಗಳವಾರ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಗಳಿಸಿದೆ. ಈ ಪಂದ್ಯದಲ್ಲಿ ಸೋತ ತಂಡ ಕೂಟದಿಂದ ಹೊರಹೋಗ ಬೇಕಿದ್ದು ಇದೊಂದು ಮಹತ್ವದ ಪಂದ್ಯವಾಗಿತ್ತು. ಇದರಲ್ಲಿ ರಾಜಸ್ಥಾನ್ ತಂಡ ಹೀನಾಯ ಸೋಲು ಅನುಭವಿಸಿದೆ. ನಿಗದಿತ 20 ಓವರ್​ನಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 90 ರನ್ ಗಳಿಸಿತ್ತು. 91 ರ ಗುರಿಯನ್ನ ಮುಂಬೈ […]

Advertisement

Wordpress Social Share Plugin powered by Ultimatelysocial