ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿಗೆ ಅದ್ದೂರಿ ಸ್ವಾಗತ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣಕ್ಕೆ ಆಗಮಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿಯನ್ನು ರಾಮದುರ್ಗ ತಾಲೂಕ ಆಡಳಿತದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು, ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ವೀರ ಜ್ಯೋತಿಗೆ ಮಾಲಾರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ಬರಮಾಡಕೊಳ್ಳಲಾಯಿತು.ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಇವತ್ತು ಮತ್ತು ಜನವರಿ 13ನೇ ದಿನಾಂಕದಂದು ಅಂದರೇ ನಾಳೆ ನಡೆಯುವ ಸರಕಾರ ಅದ್ದೂರಿಯಾಗಿ ಕಾರ್ಯಕ್ರಮಮಾಡಲು ತೀರ್ಮಾನಿಸಿದೆ, ಇಡೀ ಜಿಲ್ಲೆಯಾದ್ಯಂತ ಸಂಚರಿಸಿದ ವೀರ ಜ್ಯೋತಿ ಇಂದು ರಾಮದುರ್ಗ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಅದ್ದೂರಿಯಾಗಿ ಸ್ವಾಗತಿಸಿ ವಿವಿಧ ವಾದ್ಯ ಮೇಳದೊಂದಿಗೆ ಪಟ್ಟಣದ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.ಈ ಸಂದರ್ಭದಲ್ಲಿ ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ತಹಶೀಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ್, ತಾಲೂಕ ಪಂಚಾಯಿತಿ ಇಓ ಪ್ರವೀಣ್ ಕುಮಾರ್ ಸಾಲಿ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ರೇಣಪ್ಪ ಸೋಮಗೊಂಡ, ಸೋಮಶೇಖರ ಸಿದ್ಲಿಂಗಪ್ಪನವರ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಹಾರ ಸಚಿವನ ನಾಲಿಗೆ ಕತ್ತರಿಸಿದರೆ 10 ಕೋಟಿ ರೂ. ಕೊಡುತ್ತೇನೆ.

Thu Jan 12 , 2023
ಅಯೋಧ್ಯೆ: ಪವಿತ್ರ ಗ್ರಂಥ ರಾಮ ಚರಿತ ಮಾನಸವು ಸಮಾಜದಲ್ಲಿ ದ್ವೇಷ ಮತ್ತು ಒಡಕು ಮೂಡಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಅವರನ್ನು ಕೂಡಲೇ ನಿತೀಶ್ ಕುಮಾರ್ ಸರ್ಕಾರ ವಜಾಗೊಳಿಸಬೇಕು ಎಂದು ಅಯೋಧ್ಯೆ ಧರ್ಮಗುರು ಜಗದ್ಗುರು ಪರಮಹಂಸ ಆಚಾರ್ಯ ಒತ್ತಾಯಿಸಿದ್ದಾರೆ. “ಬಿಹಾರದ ಶಿಕ್ಷಣ ಸಚಿವರು ರಾಮಚರಿತ ಮಾನಸ ಪುಸ್ತಕವನ್ನು ದ್ವೇಷವನ್ನು ಹರಡುವ ಪುಸ್ತಕ ಎಂದು ಬಣ್ಣಿಸಿರುವ ರೀತಿಯಿಂದ ಇಡೀ ದೇಶಕ್ಕೆ ನೋವಾಗಿದೆ. ಇದು ಎಲ್ಲಾ ಸನಾತನಿಗೆ […]

Advertisement

Wordpress Social Share Plugin powered by Ultimatelysocial