ಸಾರಿಗೆ ಬಸ್ – ಕಾರಿನ ನಡುವೆ ಭೀಕರ ರಸ್ತೆ ಅಪಘಾತ

BREAKING NEWS: ಸಾರಿಗೆ ಬಸ್ - ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಮೂವರು ಮಹಿಳೆಯರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ದಾವಣಗೆರೆ: ಕೆಎಸ್‌ಆರ್ ಟಿಸಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ  ಸಂಭವಿಸಿ, ಮೂವರು ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಸವಳಂಗ – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ನ್ಯಾಮತಿ ಬಳಿಯಲ್ಲಿ ನಡೆದಿದೆ.

ನ್ಯಾಮತಿ ತಾಲೂಕಿನ ಹಳೆ ಜೋಗದಲ್ಲಿ ಇಂದು ನಡೆದಂತ ಆರತಕ್ಷತೆ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ, ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿಸಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಇದರಿ ಕಾರಿನಲ್ಲಿದ್ದಂತ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಡೆಹಳ್ಳಿಯ ಶಾರದಮ್ಮ, ಸುಮಾ ಹಾಗೂ ಆಶಾ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವಂತ ಕಾರು ಚಾಲಕ ಹಾಗೂ ಮತ್ತೋರ್ವ ಮಹಿಳೆಯನ್ನು ಶಿವಮೊಗ್ಗಕ್ಕೆ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗಿದೆ.

ಕೆ ಎಸ್ ಆರ್ ಟಿಸಿ ಹಾಗೂ ಕಾರಿನ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಿಂದ ಒಂದು ಗಂಟೆಗೂ ಹೆಚ್ಚುಕಾರ ಸವಳಂಗ – ಶಿವಮೊಗ್ಗ ಹೆದ್ದಾರಿ ಸಂಚಾರಕ್ಕೆ ತೊಂದರೆಯುಂಟಾಗಿತ್ತು. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಸರಾಗ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

Please follow and like us:

Leave a Reply

Your email address will not be published. Required fields are marked *

Next Post

11 ಸೀಟು ಗೆದ್ದರೂ ಕಾಂಗ್ರೆಸ್ ನಲ್ಲಿ ಆಂತರಿಕ ಕೊತಕೊತ ಬೂದಿಮುಚ್ಚಿದ ಕೆಂಡ!

Fri Dec 17 , 2021
25 ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ನಿರೀಕ್ಷೆ ಮಾಡಿದ್ದಕ್ಕಿಂತ ಕಮ್ಮಿ ಸೀಟು ಬಂದಿದ್ದರೆ, ಕಾಂಗ್ರೆಸ್ಸಿಗೆ ನಿರೀಕ್ಷೆಗಿಂತ ಹೆಚ್ಚು ಸೀಟುಗಳು ಬಂದಿದ್ದವು. ಆದರೂ, ಕಾಂಗ್ರೆಸ್ಸಿನಲ್ಲಿ ಆಂತರಿಕ ಕಿತ್ತಾಟ, ಪರಸ್ಪರ ದೋಷಾರೂಪಣೆಗೆ ಫುಲ್ ಸ್ಟಾಪ್ ಬೀಳುತ್ತಿಲ್ಲ. ಕಾಂಗ್ರೆಸ್ಸಿನಲ್ಲಿ ಎಷ್ಟು ಬಣಗಳಿವೆ ಎಂದು ಕೇಳಿದರೆ ಯಾವ ಕಾಂಗ್ರೆಸ್ಸಿಗರೂ ಬಹಿರಂಗವಾಗಿ ಸತ್ಯ ಹೇಳಲಾರರು. ಆದರೂ, ಬಿಜೆಪಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮೂಲೆಗುಂಪು ಮಾಡಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ […]

Advertisement

Wordpress Social Share Plugin powered by Ultimatelysocial