ತಮಿಳುನಾಡಿಗೆ ಮೇಕೆದಾಟು ಯೋಜನೆ ವಿರೋಧಿಸುವ ಹಕ್ಕು ಇಲ್ಲ: ಎಚ್‌ಡಿ ದೇವೇಗೌಡ

ಬೆಂಗಳೂರು, ಫೆಬ್ರವರಿ 9: ಮೇಕೆದಾಟು ಯೋಜನೆ ವಿರೋಧಿಸುವ ಹಕ್ಕು ತಮಿಳುನಾಡಿಗೆ ಇಲ್ಲ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.

ನದಿ ನೀರನ್ನು ಡೆಲ್ಟಾ ಪ್ರದೇಶಕ್ಕೆ ಮೀಸಲಿಟ್ಟಿದ್ದರೂ, 2007ರ ಕಾವೇರಿ ಜಲ ನ್ಯಾಯಮಂಡಳಿ ತೀರ್ಪಿಗೆ ವಿರುದ್ಧವಾದ ತಮಿಳುನಾಡು ಹೊಸ ಶುಷ್ಕ ವಲಯಗಳಿಗೆ ಹರಿಸುತ್ತಿದೆ ಎಂದು ಆರೋಪಿಸಿದರು.

ಅಲ್ಲದೆ, ರಾಜ್ಯದ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ನೀಡಲು ವಿಳಂಬ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಕುಡಿಯುವ ನೀರಿನ ಯೋಜನೆಗಳ ನೆಪದಲ್ಲಿ ಹಲವು ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿರುವ ತಮಿಳುನಾಡಿಗೆ ಕುಡಿಯುವ ನೀರಿಗಾಗಿ ಮೀಸಲಾದ ಮೇಕೆದಾಟು ಸಮತೋಲನ ಜಲಾಶಯಕ್ಕೆ ಕರ್ನಾಟಕ ತನ್ನ ಭೂಪ್ರದೇಶದಲ್ಲಿ ಯೋಜನೆ ರೂಪಿಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವ ನೈತಿಕ ಹಕ್ಕು ಇಲ್ಲ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಕಾವೇರಿ ಜಲವಿವಾದ ನ್ಯಾಯಮಂಡಳಿಯು 2007ರಲ್ಲೇ ನೀರಿನ ಹಂಚಿಕೆ ಮಾಡಿ ಐತೀರ್ಪು ಹೊರಡಿಸಿದೆ. ನಂತರ ಸುಪ್ರೀಂ ಕೋರ್ಟ್‌ ಬೆಂಗಳೂರಿನ ಜನತೆಗೆ ಕುಡಿಯಲು ಕೇವಲ 4.50 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಿದೆ. 2011ರಲ್ಲಿ 85 ಲಕ್ಷದಷ್ಟಿದ್ದ ಬೆಂಗಳೂರಿನ ಜನಸಂಖ್ಯೆ ಇದೀಗ 1.30 ಕೋಟಿಗೆ ಹೆಚ್ಚಳವಾಗಿದ್ದು, ಯೋಜನೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಬಜೆಟ್‌ನಲ್ಲಿ ಘೋಷಣೆಯಾಗಿರುವ ನದಿ ಜೋಡಣೆ ಯೋಜನೆಗಳ ಕುರಿತು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ದೇವೇಗೌಡ ಅವರು, ತಮಿಳುನಾಡು ಕಾವೇರಿ-ವೈಗೈ-ಗುಂಡಾರ್‌ ನದಿಗಳ ಜೋಡಣೆ ಯೋಜನೆಗೆ ಮುಂದಾಗಿದೆ. ಈ ಮೂಲಕ ಮೆಟ್ಟೂರಿನಿಂದ ನೀರನ್ನು ತೆಗೆದು ಸೇಲಂ ಜಿಲ್ಲೆಗೆ ಅನುಕೂಲ ಮಾಡಿಕೊಡಲು ಮುಂದಾಗಿದೆ.

ನಮ್ಮ ರಾಜ್ಯದಲ್ಲಿ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಬಡಿದಾಡುತ್ತಿದೆ. ಆದರೆ, ತಮಿಳುನಾಡಿನಲ್ಲಿ ಎಐಡಿಎಂಕೆ ಮತ್ತು ಡಿಎಂಕೆ ತಮ್ಮ ರಾಜ್ಯದ ಕಾರಣಕ್ಕಾಗಿ ಒಂದಾಗಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿವಾದಾತ್ಮಕ ಹೇಳಿಕೆ ನಂತರ ಕ್ಷಮೆ ಯಾಚಿಸಿದ ರೇಣುಕಾಚಾರ್ಯ..!

Wed Feb 9 , 2022
ಹಿಜಾಬ್ ವಿವಾವದದ ಬಗ್ಗೆ ಪ್ರಿಯಾಂಕ ಗಾಂಧಿ ಮಾಡಿದ್ದ ಟ್ವೀಟ್ ಗೆ ಪ್ರತಿಕ್ರಿಯಿಸುತ್ತಾ ಮಹಿಳೆಯರ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ರೇಣುಕಾಚಾರ್ಯ ಕ್ಷಮೆ ಯಾಚಿಸಿದ್ದಾರೆ.ವಸ್ತ್ರದ ವಿಚಾರದಲ್ಲಿ ಮಹಿಳೆಯರಿಗೆ ಸಂಪೂರ್ಣ ಹಕ್ಕಿದೆ. ಬಿಕಿನಿಯಿರಬಹುದು, ಜೀನ್ಸ್ ಇರಬಹುದು ಯಾವುದೇ ಬಟ್ಟೆ ತೊಡುವುದನ್ನು ನಿರ್ಧರಿಸುವ ಹಕ್ಕು ಮಹಿಳೆಯರಿಗಿದೆ ಎಂದು ಪ್ರಿಯಾಂಕ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದರು.ಈ ಬಗ್ಗೆ ಉತ್ತರ ನೀಡುವ ಭರದಲ್ಲಿ, ಮಹಿಳೆಯರು ಪ್ರಿಯಾಂಕ ಹೇಳಿದಂತ ಬಟ್ಟೆ ಹಾಕಿಕೊಂಡರೆ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಅಂತಾ […]

Advertisement

Wordpress Social Share Plugin powered by Ultimatelysocial