ಸಾರ್ವತ್ರಿಕ ಮುಷ್ಕರ: ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಕಲಬುರಗಿ: ಹತ್ತಕ್ಕೂ ಅಧಿಕ‌ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಹಾಗೂ ಏಳು ರಾಜಕೀಯ ಪಕ್ಷಗಳು ಕೇಂದ್ರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಕರೆ ನೀಡಿರುವ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.ಮುಷ್ಕರದ ಎರಡನೇ ದಿನವಾದ ಇಂದು ಜಿಲ್ಲಾ‌ ಕೇಂದ್ರದಲ್ಲಿ ಪ್ರತಿಭಟನೆ ‌ಆಯೋಜಿಸಲಾಗಿದೆ. ಸೋಮವಾರ ತಾಲ್ಲೂಕು ಹಾಗೂ ‌ಗ್ರಾಮೀಣ ಭಾಗದಲ್ಲಿ ಸರಣಿ ಪ್ರತಿಭಟನೆಗಳನ್ನು ‌ನಡೆಸಲಾಯಿತು.ಈ ಸಂದರ್ಭದಲ್ಲಿ ಭಾರತ ಕಮ್ಯುನಿಸ್ಟ್ (ಮಾರ್ಕ್ಸ್ ವಾದಿ-ಸಿಪಿಐಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಅಫಜಲಪುರ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಮಂತ ಬಿರಾದಾರ,ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ‌ಎಸ್.ಎಂ. ಶರ್ಮಾ, ರೈತ ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮಹೇಶ ಎಸ್.ಬಿ, ಕರ್ನಾಟಕ ರಾಜ್ಯ ರೈತ ಸಂಘ (ಪುಟ್ಟಣ್ಣಯ್ಯ ಬಣ)ದ ಜಿಲ್ಲಾ‌ ಘಟಕದ ಅಧ್ಯಕ್ಷ ನಾಗೇಂದ್ರಪ್ಪ ಥಂಬೆ ಮಾತನಾಡಿ ಕೇಂದ್ರದ ಕಾರ್ಪೊರೇಟ್ ‌ಪರವಾದ ನೀತಿಗಳನ್ನು ಖಂಡಿಸಿದರು.ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಿದ್ಯುತ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದರು.ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ನರೇಗಾ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು‌ ಎಂದು ಒತ್ತಾಯಿಸಿದರು.ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ರಾಘವೇಂದ್ರ ಎಂ.ಜಿ, ಎಐಎಂಎಸ್‌ಎಸ್ ಮಹಿಳಾ ಸಂಘಟನೆಯ ರಾಧಾ, ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಶಿಲ್ಪಾ ಬಿ.ಕೆ, ಪ್ರೀತಿ ದೊಡ್ಡಮನಿ ಹಾಗೂ ಐಎನ್ ಟಿಯುಸಿ, ಸಿಐಟಿಯು, ಎಐಟಿಯುಸಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎರಡನೇ ಬಾರಿಗೆ ಮದುವೆಯಾಗಲಿದ್ದಾರೆ ಐಎಎಸ್ ಅಧಿಕಾರಿ ಟೀನಾ ದಾಬಿ

Tue Mar 29 , 2022
ಜೈಪುರ: 2015ರ UPSC ಪರೀಕ್ಷೆಯಲ್ಲಿ ಟೀನಾ ದಾಬಿ ದೇಶಕ್ಕೇ ಮೊದಲ ಸ್ಥಾನ ಪಡೆದಿದ್ದ ಟೀನಾ ದಾಬಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ನಿಜವಾಗಿ ಟೀನಾ ದಾಬಿ ಮತ್ತೆ ಮದುವೆಯಾಗಲಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ತಿಳಿಸಿದ್ದಾರೆ.   ಹೌದು, ಟೀನಾ ದಾಬಿ ಐಎಎಸ್‌ ಅಧಿಕಾರಿ ಆಮಿರ್ ಖಾನ್ ಜೊತೆಗೆ ಪ್ರೀತಿಸಿ ಮದುವೆಯಾದ ಎರಡೇ ವರ್ಷಗಳಲ್ಲಿ ಈ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ವಿಚ್ಚೇದನವನ್ನು ಪಡೆದುಕೊಂಡಿದ್ದರು. ಟೀನಾ ರಾಜಸ್ಥಾನ ಕೇಡರ್‌ನ ಐಎಎಸ್ ಅಧಿಕಾರಿಯನ್ನು […]

Advertisement

Wordpress Social Share Plugin powered by Ultimatelysocial