ಶಾಲಾ-ಕಾಲೇಜು ಆವರಣದಲ್ಲಿ ಹಿಜಾಬ್-ಕೇಸರಿ ಶಾಲು ಧರಿಸುವುದು ತಪ್ಪು : ಸಚಿವ ಅಶೋಕ್

 

 

ಬೆಂಗಳೂರು, ಫೆ.9- ಶಾಲಾ-ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ಎರಡೂ ಧರಿಸುವುದು ತಪ್ಪು. ಹಾಗೆಯೇ ರಾಷ್ಟ್ರಧ್ವಜ ಇಳಿಸುವುದು, ಖಾಲಿ ಕಂಬದಲ್ಲಿ ಕೇಸರಿ ಧ್ವಜ ಹಾರಿಸುವುದು ಕೂಡ ತಪ್ಪು.

ಇದನ್ನು ಯಾರೂ ಕೂಡ ಒಪ್ಪುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಹಿಜಾಬ್ ವಿಚಾರವಾಗಿ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಶಾಲಾ-ಕಾಲೇಜು ಆವರಣದಲ್ಲಿ ನಿಗದಿತ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದರು. ಇದರ ಹಿಂದೆ ಕಾಂಗ್ರೆಸ್ ಷಡ್ಯಂತ್ರ ಇದೆ. ಕಾಂಗ್ರೆಸ್‍ನಲ್ಲಿ ಎರಡು ವರ್ಗವಿದ್ದು, ಒಂದು ವರ್ಗ ಪ್ರೇರಣೆ ಮಾಡುತ್ತಿದ್ದರೆ ಮತ್ತೊಂದು ವರ್ಗ ಬ್ಯಾಲೆನ್ಸ್ ಮಾಡುತ್ತಿದೆ ಎಂದು ಟೀಕಿಸಿದರು.

ಕೇಸರಿ ಶಾಲು, ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಸರ್ಕಾರ ಘಟನೆಯನ್ನು ನಿಭಾಯಿಸುವಲ್ಲಿ ವಿಫಲವಾಗಿಲ್ಲ. ಹಿಜಾಬ್ ಕುರಿತ ವಿವಾದ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ತೀರ್ಪನ್ನು ನಿರೀಕ್ಷಿಸಲಾಗುತ್ತಿದೆ. ಸರ್ಕಾರದ ಆದೇಶ ಧಿಕ್ಕರಿಸುವುದು ಸರಿಯಲ್ಲ. ಅದಕ್ಕೆ ಕಾಂಗ್ರೆಸ್ ಪ್ರಚೋದನೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‍ಗೆ ಏನು ಬೇಕೋ ಅದನ್ನು ಹೇಳುತ್ತಾರೆ. ರಾಷ್ಟ್ರಧ್ವಜವನ್ನು ಇಳಿಸಿಲ್ಲ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಆದರೂ ಡಿ.ಕೆ.ಶಿವಕುಮಾರ್ ಆಧಾರ ರಹಿತ ಹೇಳಿಕೆ ನೀಡುತ್ತಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಅಲ್ಲಾ ಹು ಅಕ್ಬರ್ ಎಂದು ಜೋರಾಗಿ ಕೂಗಿಕೊಂಡು ಹೋದ ವಿಡಿಯೋ!

Wed Feb 9 , 2022
ನವದೆಹಲಿ: ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಬಹಳ ಜೋರಾಗಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ಕಾವು ಹೆಚ್ಚಾಗಿದೆ.ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್ ಆಗಿತ್ತು. ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಅಲ್ಲಾ ಹು ಅಕ್ಬರ್ ಎಂದು ಜೋರಾಗಿ ಕೂಗಿಕೊಂಡು ಹೋದ ವಿಡಿಯೋ. ಆ ವಿದ್ಯಾರ್ಥಿನಿ ಹಿಂದೆಯೇ ಹುಡುಗರ ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಹೋಗಿದ್ದರು. ಇದೀಗ ಜಮಾತ್ ಉಲೇಮಾ ಎ ಹಿಂದ್ ಆ ವಿದ್ಯಾರ್ಥಿನಿಗೆ 5 ಲಕ್ಷ ರೂ ಬಹುಮಾನ […]

Advertisement

Wordpress Social Share Plugin powered by Ultimatelysocial