ಬಿಸಿಯೂಟದಲ್ಲಿ ಸಿಕ್ತು ಹುಳ: ಅನ್ನ-ಸಾಂಬಾರಿನಲ್ಲಿ ಮೇಲೆಯೇ ಹರಿದಾಡುತ್ತಿದ್ದರೂ ತಿನ್ನಿ ಎಂದು ಮಕ್ಕಳಿಗೆ ಒತ್ತಾಯಿಸಿದ ಶಿಕ್ಷಕರಿಗೆ ಪೋಷಕರಿಂದ ಕ್ಲಾಸ್​​

 

ವಿಜಯನಗರ: ಶಾಲಾ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶ ಒದಗಿಸುವ ದೃಷ್ಟಿಯಿಂದ ಸರ್ಕಾರ ಜಾರಿಗೊಳಿಸಿರುವ ಬಿಸಿಯೂಟ ಯೋಜನೆಯಲ್ಲಿ ಆಗ್ಗಾಗ್ಗೆ ಆರೋಪಗಳು ಕೇಳಿ ಬರುತ್ತಲೇ ಇದ್ದು, ಈವರೆಗೂ ಪೂರ್ಣ ಮಟ್ಟಿಗೆ ಸುಧಾರಣೆಯಾಗಿಲ್ಲ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗಿರುವ ಬಿಸಿಯೂಟದಲ್ಲಿ ಹುಳಗಳು ಪತ್ತೆಯಾಗಿದ್ದು, ಇದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ತಟ್ಟೆಯಲ್ಲಿ ಹಾಕಿದ ಅನ್ನ-ಸಾಂಬಾರಿನಲ್ಲಿ ಹುಳ ಮೇಲೆ ಕಾಣುತ್ತಿದ್ದರೂ, ಮಕ್ಕಳಿಗೆ ಊಟ ಮಾಡಿ ಎಂದು ಶಿಕ್ಷಕರು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ಪೋಷಕರು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದೇ ವಿಚಾರವಾಗಿ ಪೋಷಕರು ಹಾಗೂ ಶಿಕ್ಷಕರ ನಡುವೆ ಕೆಲಕಾಲ ವಾಗ್ವಾದ ಉಂಟಾಯಿತು. ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಅಲ್ಲದೇ ಶುಚಿತ್ವ ಕಾಪಾಡಲು ಶಿಕ್ಷಕರಿಗೆ ತಾಕೀತು ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಯದಶಮಿ ವೇಳೆಗೆ ಬಿಜೆಪಿ, ಕಾಂಗ್ರೆಸ್ ಗೆ ಪರ್ಯಾಯವಾಗಿ 'ತೃತೀಯ ರಾಜಕೀಯ ಶಕ್ತಿ'

Fri May 27 , 2022
  ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸುವುದು ಮತ್ತು ತೃತೀಯ ರಂಗದ ಕನಸು ಹೊತ್ತು ದೇಶ ಸುತ್ತುತ್ತಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಸುಧೀರ್ಘವಾಗಿ ಚರ್ಚಿಸಿದರು. ವಿಜಯದಶಮಿ ವೇಳೆಗೆ (ಅಕ್ಟೋಬರ್ 5) ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾದ ತೃತೀಯ ರಾಜಕೀಯ ಶಕ್ತಿ ರೂಪಿಸುವುದಾಗಿ ಘೋಷಿಸಿದ್ದಾರೆ. ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್ […]

Advertisement

Wordpress Social Share Plugin powered by Ultimatelysocial