ನಾಯಕತ್ವ ಬದಲಾವಣೆ ಗುಸುಗುಸು: ಬಿರುಕು- ಭಿನ್ನಮತಕ್ಕೆ ಬ್ರೇಕ್ ಹಾಕಲು ನಡ್ಡಾ ಎಂಟ್ರಿ; ಪಕ್ಷ ತೊರೆಯುುವವರಿಗೆ ತಕ್ಕ ಶಾಸ್ತಿ!

ನಾಯಕತ್ವ ಬದಲಾವಣೆ ಗುಸುಗುಸು: ಬಿರುಕು- ಭಿನ್ನಮತಕ್ಕೆ ಬ್ರೇಕ್ ಹಾಕಲು ನಡ್ಡಾ ಎಂಟ್ರಿ; ಪಕ್ಷ ತೊರೆಯುುವವರಿಗೆ ತಕ್ಕ ಶಾಸ್ತಿ!

 

ಬೆಂಗಳೂರು: ಬುಧವಾರ ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

ಕಾರ್ಯಕಾರಿಣಿಯಲ್ಲಿ ಭಾಗವಹಿಸುವ ಮೂಲಕ ರಾಜ್ಯದಲ್ಲಿ ಸದ್ಯ ಚರ್ಚೆಯಾಗುತ್ತಿರುವ ನಾಯಕತ್ವ ಬದಲಾವಣೆ ವಿಷಯಕ್ಕೆ ಸಬಂಧಿಸಿದಂತೆ ಸ್ಪಷ್ಟ ಸಂದೇಶ ನೀಡಲಿದ್ದಾರೆ.

ಡಿಸೆಂಬರ್ 28 ಮತ್ತು 29 ರಂದು ನಡೆಯುವ ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಾತ್ರ ಭಾಗವಹಿಸುವುದಾಗಿ ತಿಳಿದು ಬಂದಿತ್ತು. ಆದರೆ ನಾಯಕತ್ವ ಬದಲಾವಣೆ ಗುಸುಗುಸು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ನಡ್ಡಾ ಅಖಾಡಕ್ಕಿಳಿಯುವುದು ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

2023ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಪಕ್ಷದ ರಾಜ್ಯ ನಾಯಕತ್ವದ ಕೂಲಂಕುಷ ಪರೀಕ್ಷೆ ನಿರೀಕ್ಷಿಸಲಾಗಿದ್ದರೂ, ಬೇರೆ ರೀತಿಯ ಊಹಾಪೋಹಗಳಿಗೆ ತೆರೆ ಎಳೆಯಬೇಕಾಗಿದೆ. ಪಕ್ಷದ ಕೇಂದ್ರ ನಾಯಕತ್ವವು ಆಡಳಿತ ವಿರೋಧಿ ಮತ್ತು ಆಂತರಿಕ ಕಚ್ಚಾಟದ ವಿರುದ್ಧ ಹೋರಾಡಬೇಕಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 8 ಮತ್ತು 9 ರಂದು ಬೆಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಮತ್ತೊಂದು ಸುತ್ತಿನ ಚುನಾವಣಾ ಪೂರ್ವ ತಯಾರಿ ಕಾರ್ಯಕ್ರಮ ನಡೆಸುವ ಸಾಧ್ಯತೆಯಿದೆ.

ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿರುವ ಹಿರಿಯ ನಾಯಕರಾದ ವಿಶೇಷವಾಗಿ ಕೆ ಎಸ್ ಈಶ್ವರಪ್ಪ ಮತ್ತು ಮುರುಗೇಶ್ ನಿರಾಣಿ ಗೆ ಎಚ್ಚರಿಕೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಎಂಎಲ್‌ಸಿ ಚುನಾವಣೆ ವೇಳೆ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡ ನಾಯಕರ ವಿರುದ್ಧ ಹಂತಹಂತವಾಗಿ ಕ್ರಮಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿಯಲ್ಲಿ ನಡೆದ 'ಅಸ್ಮಿತೆ' ಮೇಳದಲ್ಲಿ ₹60 ಲಕ್ಷ ವಹಿವಾಟು

Mon Dec 27 , 2021
ಬೆಳಗಾವಿ: ‘ಇಲ್ಲಿನ ಸರ್ದಾರ್‌ ಪ್ರೌಢಶಾಲೆ ಮೈದಾನದಲ್ಲಿ ಈಚೆಗೆ ಆಯೋಜಿಸಿದ್ದ, ಸ್ವಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ‘ಅಸ್ಮಿತೆ’ಯಲ್ಲಿ ₹ 60 ಲಕ್ಷ ವಹಿವಾಟು ನಡೆದಿದೆ’ ಎಂದು ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಳ ಉದ್ಘಾಟಿಸಿದ್ದರು. 7 ಆಹಾರ ಮಳಿಗೆಗಳೂ ಸೇರಿದಂತೆ ಒಟ್ಟು 140 ಮಳಿಗೆಗಳು ಇದ್ದವು. ಇದುವರೆಗೆ ಈ ರೀತಿಯ ಮೇಳಗಳಲ್ಲಿ ಆಗಿರುವ […]

Advertisement

Wordpress Social Share Plugin powered by Ultimatelysocial