ELECTRIC SCHOOTER:1 ಮಿಲಿಯನ್ ಇವಿ ಸ್ಕೂಟರ್ ಉತ್ಪಾದನಾ ಯೋಜನೆ;

ಪ್ರೀಮಿಯಂ ಇವಿ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಥರ್ ಎನರ್ಜಿ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆ ಪೂರೈಕೆಗಾಗಿ ಹೊಸ ಯೋಜನೆಗಳನ್ನು ರೂಪಿಸುತ್ತಿದ್ದು, ಕಂಪನಿಯು ಭವಿಷ್ಯ ಯೋಜನೆಗಳಿಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾಗುತ್ತಿದೆ.

ಹೊಸ ಯೋಜನೆಗೆ ಪೂರಕವಾಗಿ ಕಂಪನಿಯು ಉತ್ಪಾದನಾ ಸಾಮರ್ಥ್ಯವನ್ನು ಸಹ ಹೆಚ್ಚಿಸಲು ನಿರ್ಧರಿಸಿದ್ದು, ಇದಕ್ಕಾಗಿ ಕಂಪನಿಯು ಎರಡನೇ ಉತ್ಪಾದನಾ ಘಟಕ ತೆರೆಯಲು ಸಿದ್ದವಾಗಿದೆ.

ಎಥರ್ ಕಂಪನಿಯು ಸದ್ಯ ತಮಿಳುನಾಡಿನ ಹೊಸೂರಿನಲ್ಲಿ ವಾರ್ಷಿಕವಾಗಿ 1.20 ಲಕ್ಷ ಸ್ಕೂಟರ್‌ಗಳ ಉತ್ಪಾದನೆ ಮಾಡಬಹುದಾದ ಸಾಮರ್ಥ್ಯದ ಇವಿ ಘಟಕವನ್ನು ಹೊಂದಿದ್ದು, ಇದೀಗ ಕಂಪನಿಯು ಎರಡನೇ ಘಟಕವನ್ನು ಸಹ ಹೊಸೂರಿನಲ್ಲಿಯೇ ತೆರೆಯಲು ನಿರ್ಧರಿಸಿದೆ.

ಎರಡನೇ ಘಟಕ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಈ ವರ್ಷದ ಕೊನೆಯಲ್ಲಿ ಕಾರ್ಯಾರಂಭ ನಡೆಸಲಿರುವ ಹೊಸ ಘಟಕವು ವಾರ್ಷಿಕವಾಗಿ 2.80 ಲಕ್ಷ ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿರಲಿದೆ ಎನ್ನಲಾಗಿದೆ.

ಎಥರ್ ಕಂಪನಿಯು ಎರಡು ಘಟಕಗಳ ಮೂಲಕ ವಾರ್ಷಿಕವಾಗಿ 4 ಲಕ್ಷ ಯುನಿಟ್ ಇವಿ ಸ್ಕೂಟರ್ ಉತ್ಪಾದನಾ ಸಾಮಾರ್ಥ್ಯ ಹೊಂದಿರಲಿದ್ದು, 2025ರ ವೇಳೆಗೆ ಮತ್ತಷ್ಟು ಹೂಡಿಕೆಯೊಂದಿಗೆ ವಾರ್ಷಿಕವಾಗಿ ಒಟ್ಟು 10 ಲಕ್ಷ ಯುನಿಟ್ ಉತ್ಪಾದನೆ ಮಾಡಬಹುದಾದ ಸಾಧ್ಯತೆಗಳ ಕುರಿತು ಯೋಜನೆ ರೂಪಿಸುತ್ತಿದೆ.

ವಾರ್ಷಿಕವಾಗಿ 10 ಲಕ್ಷ ಯುನಿಟ್ ಉತ್ಪಾದನೆಗಾಗಿ ಹೂಡಿಕೆ ಕೂಡಾ ಪ್ರಮುಖವಾಗಿದ್ದು, ಈಗಾಗಲೇ ಪ್ರಮುಖ ಕಂಪನಿಗಳಿಂದ ಭಾರೀ ಪ್ರಮಾಣದ ಹೂಡಿಕೆ ಪಡೆದುಕೊಂಡಿರುವ ಎಥರ್ ಕಂಪನಿಯು ಭವಿಷ್ಯದಲ್ಲಿ ಇನ್ನಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ.

2025ರ ವೇಳೆಗೆ ಇವಿ ವಾಹನ ಬೇಡಿಕೆ ಶೇ.20ಕ್ಕೆ ಏರಿಕೆಯಾಗುವ ಎಲ್ಲಾ ಸಾಧ್ಯತೆ ಕುರಿತು ಮಾರುಕಟ್ಟೆ ಅಧ್ಯಯನ ನಡೆಸಿರುವ ಎಥರ್ ಕಂಪನಿಯು ಇವಿ ವಾಹನ ಹೆಚ್ಚಳಕ್ಕೆ ತಕ್ಕಂತೆ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯನ್ನು ಸಹ ಹೆಚ್ಚಿಸುತ್ತಿದೆ.

ಎಥರ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳ ಬಿಡುಗಡೆಗೆ ಸಿದ್ದವಾಗುತ್ತಿದೆ.

ದುಬಾರಿ ಬೆಲೆ ನಡುವೆಯೂ ಗ್ರಾಹಕರಿಂದ ಉತ್ತಮ ಪ್ರಕ್ರಿಯೆ ಪಡೆದುಕೊಳ್ಳುತ್ತಿರುವ ಎಥರ್ ಎನರ್ಜಿ ಕಂಪನಿಯು ಮುಂಬರುವ ಕೆಲ ತಿಂಗಳಿನಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಕಂಪನಿಯು ಇದುವರೆಗೂ ರೂ. 650 ಕೋಟಿ ಮೌಲ್ಯದ ಇವಿ ಸ್ಕೂಟರ್ ಉದ್ಯಮ ವ್ಯವಹಾರ ಕೈಗೊಂಡಿದೆ.

ಎಥರ್ ಸ್ಕೂಟರ್‌ಗಳು ಇತ್ತೀಚೆಗೆ ಬಿಡುಗಡೆಯಾಗಿರುವ ಇವಿ ಸ್ಕೂಟರ್‌ಗಳಿಂತಲೂ ತುಸು ಕಡಿಮೆ ಮೈಲೇಜ್ ಹೊರತುಪಡಿಸಿ ಪ್ರೀಮಿಯಂ ಫೀಚರ್ಸ್ ಮತ್ತು ಅತ್ಯುತ್ತಮ ಎಲೆಕ್ಟ್ರಿಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ತಾಂತ್ರಿಕ ಸೇವೆಗಳ ವಿಚಾರವಾಗಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಹೊಂದಿದೆ.

ಹೀಗಾಗಿ ಅತಿ ಹೆಚ್ಚು ಮೈಲೇಜ್ ನೀಡುವ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿರುವ ಎಥರ್ ಕಂಪನಿಯು ಕಳೆದ ವರ್ಷಕ್ಕಿಂತ 2021ರಲ್ಲಿ 12 ಪಟ್ಟು ಹೆಚ್ಚು ಬೆಳವಣಿಗೆ ಸಾಧಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಇನ್ನು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಡಿಜಿಟಲ್ ರೂಪಾಯಿಯನ್ನು ನಗದಾಗಿ ಬದಲಾಯಿಸಿಕೊಳ್ಳಬಹುದು: ಪ್ರಧಾನಿ

Wed Feb 2 , 2022
ಕೇಂದ್ರ ಬಜೆಟ್‌ನಲ್ಲಿ ಪ್ರಸ್ತಾಪಿಸಲಾದ ಡಿಜಿಟಲ್ ರೂಪಾಯಿಯನ್ನು ನಗದು ರೂಪದಲ್ಲಿ ವಿನಿಮಯ ಮಾಡಿಕೊಳ್ಳಬಹುದು ಮತ್ತು ಫಿನ್‌ಟೆಕ್ ವಲಯದಲ್ಲಿ ಹೊಸ ಅವಕಾಶಗಳನ್ನು ತೆರೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಬಿಜೆಪಿ ಆಯೋಜಿಸಿದ್ದ ‘ಆತ್ಮನಿರ್ಭ ಅರ್ಥವ್ಯವಸ್ಥಾ’ (ಸ್ವಾವಲಂಬಿ ಆರ್ಥಿಕತೆ) ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಅವರು, ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಅಥವಾ ಡಿಜಿಟಲ್ ರೂಪಾಯಿ ಆನ್‌ಲೈನ್ ಪಾವತಿಗಳನ್ನು ಹೆಚ್ಚು ಸುರಕ್ಷಿತ ಮತ್ತು ಅಪಾಯ-ಮುಕ್ತಗೊಳಿಸುತ್ತದೆ ಮತ್ತು ಮುಂಬರುವ ವರ್ಷಗಳಲ್ಲಿ ಡಿಜಿಟಲ್ ಆರ್ಥಿಕತೆಯನ್ನು […]

Advertisement

Wordpress Social Share Plugin powered by Ultimatelysocial