COVID:ನಟಿ ಕೀರ್ತಿ ಸುರೇಶ್ ಗೆ ಕೊರೋನಾ ಪಾಸಿಟಿವ್;

ಚೆನ್ನೈ : ದಕ್ಷಿಣ ಭಾರತದ ಮಹಾನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಕೀರ್ತಿ ಅವರು ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದು, ಎಲ್ಲರಿಗೂ ನಮಸ್ಕಾರ.

ನಾನು ಕೋವಿಡ್-19 ಪಾಸಿಟಿವ್ ದೃಢವಾಗಿದೆ. ನಾನು ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕೆಗಳು ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡರೂ ಸೋಂಕಿನ ಸೌಮ್ಯ ರೋಗಲಕ್ಷಣಗಳು ನನಗೆ ಕಾಣಿಸಿಕೊಂಡಿತು.

ಇತ್ತೀಚೆಗೆ ಈ ವೈರಸ್ ಹರಡುತ್ತಿರುವುದನ್ನು ನೋಡಿದರೆ ಆತಂಕವಾಗುತ್ತಿದೆ. ದಯವಿಟ್ಟು ಎಲ್ಲರೂ ಕೋವಿಡ್ ನ ಎಲ್ಲ ಸುರಕ್ಷತಾ ನಿಯಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷಿಸಿಕೊಳ್ಳಿ. ನೀವು ಇನ್ನೂ ಲಸಿಕೆ ಹಾಕಿಸಿಕೊಳ್ಳದಿದ್ದರೆ,

ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳಿ. ಲಸಿಕೆಯಿಂದ ಸೋಂಕಿನ ತೀವ್ರತೆ ಕಮ್ಮಿ ಇರುತ್ತೆ. ಬೇಗ ಗುಣಮುಖರಾಗಬಹುದು. ನಿಮ್ಮ ಆರೋಗ್ಯಕ್ಕಾಗಿ ದಯವಿಟ್ಟು ಲಸಿಕೆಗಳನ್ನು ಬೇಗ ತೆಗೆದುಕೊಳ್ಳಿ. ನೀವು ಮತ್ತು ನಿಮ್ಮ ಪ್ರೀತಿಪಾತ್ರರು. ನಾನು ಶೀಘ್ರವಾಗಿ ಚೇತರಿಸಿಕೊಂಡು ಮತ್ತೆ ಕೆಲಸಕ್ಕೆ ಮರಳುತ್ತೇನೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

SANDALWOOD SULTAN:ನಟ ದರ್ಶನ್ ಹುಟ್ಟು ಹಬ್ಬಕ್ಕೆ ದಿನಗಣನೆ;

Wed Jan 12 , 2022
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಅಭಿಮಾನಿಗಳು ಬೆಟಾಲಿಯನ್ ಜೊತೆಗೆ ಸಂಭ್ರಮಕ್ಕೆ ರೆಡಿ ಆಗುತ್ತಿದ್ದಾರೆ. ತಿಂಗಳಿಗೂ ಮೊದಲೇ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಹೇಗೆ ಆಚರಿಸಬೇಕು ಎನ್ನುವ ಯೋಜನೆಯನ್ನು ಅಭಿಮಾನಿಗಳು ಹಾಕಿಕೊಂಡಿದ್ದಾರೆ. ಈ ಬಾರಿ ದರ್ಶನ್‌ ಅಭಿಮಾನಿಗಳು ವಿಶೇಷವಾದ ಯೋಜನೆ ಒಂದನ್ನು ಕೈಗೊಂಡಿದ್ದಾರೆ. ದರ್ಶನ್‌ ಹುಟ್ಟುಹಬ್ಬದಂದು ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಪ್ರತಿ ಬಾರಿಯೂ ದರ್ಶನ್ ಹುಟ್ಟು ಬಂತೂ ಅಂದರೇ ಅವರ ಮನೆಯ ಬಳಿ ಸಾವಿರಾರು ಮಂದಿ […]

Advertisement

Wordpress Social Share Plugin powered by Ultimatelysocial