ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ!

ಬೆಂಗಳೂರು : ಮಾರ್ಚ್ 9 ರ ನಾಳೆಯಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಪರೀಕ್ಷೆಗೆ ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಉಡುಪು ಧರಿಸಿ ಬಂದರೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ನಾಳೆಯಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಸಿದ್ಧತೆ ಕೈಗೊಂಡಿದೆ. 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,26,213 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 25,847 ಖಾಸಗಿ, 70,586 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. 3,62,509 ಬಾಲಕಿಯರು, ಮತ್ತು 3,63,704 ಬಾಲಕರು ಸೇರಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯದಲ್ಲಿ 2,47,269 ಮತ್ತು ವಿಜ್ಞಾನ ವಿಭಾಗದಿಂದ 2,44,129 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದ್ರೆ ನೋ ಎಂಟ್ರಿ!

ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದ್ರೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಇಲ್ಲ . ಮಾರ್ಚ್ 9 ರಿಂದ ಮಾರ್ಚ್ 29 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಎಸ್‌ಎಸ್ ಎಲ್ ಸಿ ಮಾದರಿಯಲ್ಲೇ ನಡೆಸಲಾಗುವುದು. ರಾಜ್ಯದ ಶೇ. 90 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಶೇ. 10 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇಲ್ಲ. ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮ ಸೂಚನೆ ವಸ್ತ್ರ ಧರಿಸಿ ಬರುವಂತಿಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವವರಿಗೆ KSRTC-BMTC ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಮಾರ್ಚ್‌ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ(2nd PUC Exam)ಗಳು ಶುರುವಾಗಲಿದ್ದು, ಈ ನಿಟ್ಟಿನಲ್ಲಿ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ನೀಡಿದ್ದ ಮನವಿಗೆ ಕೆಎಸ್‌ಆರ್‌ಟಿಸಿ ( KSRTC) ಮತ್ತು ಬಿಎಂಟಿಸಿ (BMTC) ಒಪ್ಪಿ ಸುತ್ತೋಲೆ ಹೊರಡಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಸೇವೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿತ್ತು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಲಭ್ಯವಾಗಲಿದೆ.

ಅಷ್ಟೇ ಅಲ್ಲದೆ ಪರೀಕ್ಷಾ ದಿನ ಸಂಚರಿಸುವಾಗಿ ಬಸ್ ನಿರ್ವಾಹಕರಿಗೆ ಪರೀಕ್ಷೆಯ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಇನ್ನೂ ಈ ಕುರಿತಂತೆ ಚಾಲಕ ಮತ್ತು ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡುವಂತೆ ನಿಗಮ ಸಲಹೆ ಸೂಚನೆಯನ್ನು ನೀಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʻಅಂತರಾಷ್ಟ್ರೀಯ ಮಹಿಳಾ ದಿನʼದ ಇತಿಹಾಸ, ಮಹತ್ವ, ಆಚರಣೆ ಬಗ್ಗೆ ತಿಳಿಯಿರಿ!

Wed Mar 8 , 2023
ಲಿಂಗ ತಾರತಮ್ಯದಿಂದ ಮುಕ್ತವಾದ ಉತ್ತಮ ಸಮಾಜವನ್ನು ನಿರ್ಮಿಸಲು ಮತ್ತು ಲಿಂಗ ಸಮಾನತೆಯ ಸಂದೇಶವನ್ನು ನೀಡಲು ಪ್ರತಿ ವರ್ಷ ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಮಹಿಳೆಯರ ಗೌರವಾರ್ಥವಾಗಿ ಆಚರಿಸಲಾಗುತ್ತದೆ. ಇದು ಮಹಿಳೆಯರ ಸಮಾನ ಹಕ್ಕುಗಳು, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ನಿಂದನೆ ಮತ್ತು ಸಂತಾನೋತ್ಪತ್ತಿ ಹಕ್ಕುಗಳಂತಹ ವಿಷಯಗಳ ಬಗ್ಗೆ ಮಾತನಾಡುತ್ತದೆ. ಯುನೈಟೆಡ್ ನೇಷನ್ಸ್ ಎಜುಕೇಷನಲ್, ಸೈಂಟಿಫಿಕ್ ಮತ್ತು ಕಲ್ಚರಲ್ ಆರ್ಗನೈಸೇಶನ್ (ಯುನೆಸ್ಕೋ) ಪ್ರಕಾರ, […]

Advertisement

Wordpress Social Share Plugin powered by Ultimatelysocial