ಆತ್ಮ ವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಲು ಸಲಹೆ

ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರು ಮಾಡಿಕೊಳ್ಳಬೇಕಾದರೆ ಆತ್ಮವಿಶ್ವಾಸದಿಂದ ಅಧ್ಯಯನ ಮಾಡಿ ಮತ್ತು ಹಿಂದಿನ ಪ್ರಶ್ನೆ ಪತ್ರಿಕೆಗಳ  ಬಿಡಿಸುವಿಕೆ ಮುಖ್ಯ. ಹಾಗೂ ಪರಿಕ್ಷಾ ಪೂರ್ವದಲ್ಲಿ ಪ್ರಶ್ನೆ ಪತ್ರಿಕೆ ಮತ್ತು ಪಠ್ಯಕ್ರಮದ ಕುರಿತು ನಡೆಯುವ ಕಾರ್ಯಗಾರದಲ್ಲಿ ಭಾಗವಹಿಸಿ  ಆತ್ಮ ವಿಶ್ವಾಸದಿಂದ  ಪರೀಕ್ಷೆ ಯನ್ನು ಎದುರಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ವೆಂಕಟೇಶ್ ಬಾಬು  ಹೇಳಿದರು. ಅವರು ನಗರದ ನಿಜಲಿಂಗಪ್ಪ ಬಡಾವಣೆಯ ಜೈನ್ ಟ್ರಿನಿಟಿ ಪದವಿಪೂರ್ವ ಕಾಲೇಜು   ಹಾಗೂ ಜೈನ್  ಬುಸಿನೆಸ್ ಸ್ಕೂಲ್ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ಲರ್ನ್ ಫ್ರಮ್ ಮಾಸ್ಟರ್ ಪರೀಕ್ಷಾ ಪೂರ್ವ ಸಿದ್ಧತೆ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.ಇತರಹದ ಕಾರ್ಯಗಾರಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಕುರಿತು ಸಂಪೂರ್ಣ ಮಾಹಿತಿ ದೊರೆಯುತ್ತದೆ ಹಾಗೂ ಪರೀಕ್ಷೆಯಲ್ಲಿ  ಬರುವ ಕಠಿಣ ಸಮಸ್ಯೆಗಳನ್ನು ಹೇಗೆ ಎದುರಿಸಬೇಕು. ಹೆಚ್ಚು ಅಂಕಗಳನ್ನು ಗಳಿಸುವುದು ಹೇಗೆ ಮತ್ತು ಪಠ್ಯಕ್ರಮವನ್ನು ಹೇಗೆ ಶಿಸ್ತುಬದ್ಧವಾಗಿ ಯೋಚನೆ ಸಿದ್ಧಪಡಿಸಿಕೊಂಡು ಓದಬಹುದು ಎಂಬ ವಿಚಾರಗಳ ಕುರಿತು ಸಂಪೂರ್ಣ ಮಾಹಿತಿಯು ದೊರೆಯುತ್ತದೆ. ಇದರಿಂದ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶ ಬರುವುದರ ಜೊತೆಗೆ ವಿದ್ಯಾರ್ಥಿಗಳು ಮುಂದಿನ ಭವಿಷ್ಯಕ್ಕೆ ಕಾಲೇಜುಗಳು ಮತ್ತು ಅವರ ಗುರಿಗಳನ್ನು ನಿರ್ಧರಿಸಲು ಸಹಾಯವಾಗುತ್ತದೆ. ಎಂದು ಹೇಳಿದರು.ವಾಣಿಜ್ಯಶಾಸ್ತ್ರದ ಜೊತೆಗೆ ಒಂದಿಷ್ಟು ಕೌಶಲ್ಯವನ್ನು ಬೆಳೆಸಿಕೊಂಡರೆ ಮುಂದಿನ ಉದ್ಯೋಗ ಮಾರುಕಟ್ಟೆಯಲ್ಲಿ ಉತಮ್ಮ ಉದ್ಯೋಗ ಪಡೆದು   ಸುಸ್ಥಿರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎರಡೇ ತಿಂಗಳಿಗೆ ಶೂಟಿಂಗ್ ಮುಗಿಸಿದ 'ಧೂಮಂ' ಚಿತ್ರತಂಡ.

Sat Jan 14 , 2023
ಇಲ್ಲಿಯವರೆಗೂ ಒಳ್ಳೊಳ್ಳೆ ಚಿತ್ರಗಳನ್ನು ನೀಡುತ್ತಾ ಬಂದಿರುವ ಹೊಂಬಾಳೆ ಫಿಲ್ಮ್ಸ್ ಸಾಲು ಸಾಲು ಚಿತ್ರಗಳಿಗೆ ಬಂಡವಾಳ ಹೂಡುತ್ತಿದೆ‌. ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ ಹಾಗೂ ತಮಿಳು ಚಿತ್ರಗಳನ್ನೂ ಸಹ ನಿರ್ಮಿಸಿ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಹೊಂಬಾಳೆ ಫಿಲ್ಮ್ಸ್. ಹೀಗೆ ವಿವಿಧ ಇಂಡಸ್ಟ್ರಿಗೆ ಕಾಲಿಟ್ಟ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ಕನ್ನಡ ಹಾಗೂ ಮಲಯಾಳಂ ದ್ವಿಭಾಷಾ ಚಿತ್ರವೊಂದನ್ನು ನಿರ್ಮಿಸುತ್ತಿದೆ. ಹೌದು, ಕನ್ನಡದ ನಿರ್ದೇಶಕನಾದ ಲೂಸಿಯಾ, ಯು ಟರ್ನ್ ಖ್ಯಾತಿಯ ಪವನ್ ಕುಮಾರ್ ನಿರ್ದೇಶನದ ಧೂಮಂ […]

Advertisement

Wordpress Social Share Plugin powered by Ultimatelysocial