ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಬಳ್ಳಾರಿಯಿಂದ ಬಂದಿದ್ದ ಇಲಾಖೆಯ ಹೆಚ್ಚುವರಿ ನಿರ್ದೇಶಕರಾದ ಮಹಾಂತೇಶ್, ಮುರುಳಿಧರ ಬಿದರಿ ಸ್ಥಳೀಯ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ಗ್ರಾಮದ ಸರ್ವೇ ನಂ. 172ರ ಮೂರು ಎಕರೆ ಜಾಗದಲ್ಲಿ ಕೆ. ರೇಣುಕಾದೇವಿ ಎಂಬುವರು ಗಣಿಗಾರಿಕೆ ನಡೆಸುತ್ತಿದ್ದು, ಕುಳಿ ಹೊಡೆಯುವ ಸಂದರ್ಭದಲ್ಲಿ ಸೋಮವಾರ ಬಂಡೆ ಕುಸಿದು ಮೂವರು ಮೃತಪಟ್ಟಿದ್ದರು. ಕಾಗಲವಾಡಿ ಮೊಳೆ ಗ್ರಾಮದ ಕುಮಾರ್, ಶಿವರಾಜು, ಸಿದ್ದರಾಜು ಮೃತಪಟ್ಟಿದ್ದು, ಈ ಸಂಬಂಧ ಮೃತರ ಕುಟುಂಬಸ್ಥರು ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ. ಘೋರ ಅವಘಡ ಸಂಭವಿಸಿರುವುದರಿಂದ ಕ್ವಾರಿಯಲ್ಲಿ ಗಣಿಗಾರಿಕೆ ಬಂದ್ ಮಾಡಲಾಗಿದೆ. 2024ರ ವರೆಗೆ ಗಣಿಗಾರಿಕೆ ನಡೆಸಲು ಇಲಾಖೆ ಅನುಮತಿ ನೀಡಿತ್ತು.‌ ಆದರೆ ಕಾರ್ಮಿಕರ ದಾರುಣ ಸಾವಿನಿಂದ ಗಣಿ ಕಾರ್ಯವನ್ನು ಬಂದ್ ಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

 

 

 

 

Please follow and like us:

Leave a Reply

Your email address will not be published. Required fields are marked *

Next Post

ನಂತರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಪಕ್ಷದ ಮುಖಂಡರು.

Wed Dec 28 , 2022
ಹುಬ್ಬಳ್ಳಿ: ಹು-ಧಾ ಅವಳಿ ನಗರದಲ್ಲಿ ಸಮರ್ಪಕ ಕುಡಿಯುವ ನೀರು ಒದಗಿಸಬೇಕು ಎಂದು ಒತ್ತಾಯಿಸಿ ನಗರದ ಹು-ಧಾ ಮಹಾನಗರ ಪಾಲಿಕೆ ಆವರಣದಲ್ಲಿಂದು ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ನಂತರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಪಕ್ಷದ ಮುಖಂಡರು, ಕಳೆದ ೨-೩ ತಿಂಗಳಿನಿಂದ ಹು-ಧಾ ಅವಳಿನಗರದಲ್ಲಿ ಜನರು ಸಮರ್ಪಕ ಕುಡಿಯುವ ನೀರು ಪೂರೈಕೆಯಾಗದೇ ಜನರು ತೊಂದರೆ ಅನುಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ನೀರಿಗಾಗಿ ಅವಳಿನಗರದಲ್ಲಿ ಸಮಸ್ಯೆ ಪರಿಹಾರವಾಗದೇ ಇರುವುದು ದುರದೃಷ್ಟಕರ ಸಂಗತಿಯಾಗಿದ್ದು, ದಿನಕಳೆದಂತೆ […]

Advertisement

Wordpress Social Share Plugin powered by Ultimatelysocial