ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪಾಪಿ ಸೋದರ ಮಾವ

ನಾಲ್ಕು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸೋದರ ಮಾವನೇ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಜಾಲೋರ್​ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಮಾವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರಾಜಸ್ಥಾನ್​/ಜಾಲೋರ್: ನಾಲ್ಕು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಸೋದರ ಮಾವನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ರಾಜಸ್ಥಾನದ ಜಾಲೋರ್​ನಲ್ಲಿ ನಡೆದಿದೆ.ಆರೋಪಿ ನಾರಾಯಣ ಜಿಲ್ಲೆಯ ಲೇಟಾ ಗ್ರಾಮದ ನಿವಾಸಿಯಾಗಿದ್ದು, ಬಾಲಕಿಗೆ ಸೋದರ ಮಾವನಾಗಬೇಕು.ಬುಧವಾರ ಸಂಬಂಧಿಕರ ಮನೆಗೆ ಬಂದ ಆರೋಪಿ, ಮಧ್ಯಾಹ್ನ ಬಾಲಕಿಯ ಕುಟುಂಬಸ್ಥರೊಂದಿಗೆ ಊಟ ಮುಗಿಸಿದ್ದಾನೆ. ನಂತರ ಬಾಲಕಿಯ ತಂದೆ, ಮನೆಯಲ್ಲಿ ಯಾವುದೋ ಕೆಲಸದಲ್ಲಿ ತೊಡಗಿದ್ದು, ತಾಯಿ ಹೊರಗೆ ಹೋಗಿದ್ದರು. ಈ ವೇಳೆ, ಮಗು ಮಾವನೊಂದಿಗೆ ಆಟವಾಡುತ್ತಿತ್ತು. ಸ್ವಲ್ಪ ಸಮಯದ ನಂತರ ಮಗು ಅಳುವುದು, ಕಿರುಚಾಡುವ ಶಬ್ದ ಕೇಳಿದ್ದು, ತಂದೆ ಒಳಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ.ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಈ ಸಂಬಂಧ ಸಂತ್ರಸ್ತೆಯ ಕುಟುಂಬಸ್ಥರು ಜಿಲ್ಲಾಧಿಕಾರಿ ಹಾಗೂ ಎಸ್​ಪಿ ಅವರನ್ನು ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿದ್ಯಾರ್ಥಿಗಳು ಮತ್ತು ಯುವಕರ ನಡುವೆ ಗಲಾಟೆ : ಮಾರಕಾಸ್ತ್ರ ಹಿಡಿದು ಬಂದ ಯುವಕ.. ವಿಡಿಯೋ

Thu Feb 3 , 2022
ಸಂಜೆ ವೇಳೆಗೆ ಯುವಕರ ತಂಡ ಮತ್ತೆ ಇಲ್ಲಿಗೆ ಬಂದು ದಾಂಧಲೆ ಎಬ್ಬಿಸಿದೆ. ಈ ಸಂದರ್ಭದಲ್ಲಿ ಓರ್ವ ವ್ಯಕ್ತಿ ಮಾರಕಾಸ್ತ್ರಗಳನ್ನು ಹಿಡಿದಿದ್ದು, ವಿದ್ಯಾರ್ಥಿಗಳು ಇದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.. ಮಂಗಳೂರು : ಮಂಗಳೂರಿನ ಬಲ್ಲಾಳ್ ಭಾಗ್ ಬಳಿ ಇರುವ ಖಾಸಗಿ ಕಾಲೇಜಿನ ಬಳಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಒಂದು ತಂಡದಲ್ಲಿದ್ದ ವ್ಯಕ್ತಿ ಮಾರಾಕಾಸ್ತ್ರಗಳೊಂದಿಗೆ […]

Advertisement

Wordpress Social Share Plugin powered by Ultimatelysocial