: ಶಾಲೆಗೆ ಹೊರಟಿದ್ದ ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಸರ ದೋಚಿದ ದುಷ್ಕರ್ಮಿ

ಶಿವಮೊಗ್ಗ: ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಮಾಂಗಲ್ಯಸರ ದೋಚಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ನಡೆದಿದೆ.

ಬ್ರಾಹ್ಮಣ ಮಂಚಾಲೆ ತ್ರಾಲಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಸ್ ನಿಂದ ಇಳಿದು ಅರಣ್ಯಪ್ರದೇಶವನ್ನು ದಾಟಿ ಶಾಲೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಮಾಂಗಲ್ಯ ಸರ ದೋಚಿ ಪರಾರಿಯಾಗಿದ್ದಾನೆ. ಗಾಯಗೊಂಡ ಪ್ರಭಾವತಿ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

‘ದಿ ಕಾಶ್ಮೀರ ಫೈಲ್ಸ್’ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ದೇವಸ್ಥಾನದೊಳಗೆ ಬಲವಂತವಾಗಿ ಮೂಗು ಉಜ್ಜಿಕೊಳ್ಳುವಂತೆ ಒತ್ತಾಯಿಸಿದ್ದ, ವ್ಯಕ್ತಿ!

Thu Mar 24 , 2022
ಸಾಮಾಜಿಕ ಮಾಧ್ಯಮದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಕುರಿತು ಕಾಮೆಂಟ್ ಮಾಡಿದ್ದಕ್ಕಾಗಿ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಬೆಹ್ರೋರ್ ಪಟ್ಟಣದ ದೇವಸ್ಥಾನದೊಳಗೆ ವ್ಯಕ್ತಿಯೊಬ್ಬನು ತನ್ನ ಮೂಗು ಉಜ್ಜುವಂತೆ ಒತ್ತಾಯಿಸಲಾಯಿತು ಎಂದು ಮಾರ್ಚ್ 23 ರಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಬೆಹ್ರೋರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಘಟನೆಯು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದೇ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಂತ್ರಸ್ತ ರಾಜೇಶ್ ಕುಮಾರ್ ಮೇಘವಾಲ್ ದೇವಸ್ಥಾನದಲ್ಲಿ ಮೂಗು ಉಜ್ಜುತ್ತಿರುವುದನ್ನು ಕಾಣಬಹುದು. ಇದು […]

Advertisement

Wordpress Social Share Plugin powered by Ultimatelysocial