ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆಯಿದೆ !

 

ಮುಂಬೈ: ಮುಂದಿನ ಆರು ತಿಂಗಳಲ್ಲಿ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಸರಕಾರ ಪತನವಾಗುವ ಸಾಧ್ಯತೆಯಿರುವುದರಿಂದ ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರವಿವಾರ ಹೇಳಿದ್ದಾರೆ.

ರವಿವಾರ ಸಂಜೆ ಮುಂಬೈನಲ್ಲಿ ಎನ್‌ಸಿಪಿ ಶಾಸಕರು ಹಾಗೂ ಪಕ್ಷದ ಇತರ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ.

“ಮಹಾರಾಷ್ಟ್ರದಲ್ಲಿ ಹೊಸದಾಗಿ ರಚನೆಯಾದ ಸರಕಾರವು ಮುಂದಿನ ಆರು ತಿಂಗಳಲ್ಲಿ ಪತನವಾಗಬಹುದು. ಆದ್ದರಿಂದ ಎಲ್ಲರೂ ಮಧ್ಯಂತರ ಚುನಾವಣೆಗೆ ಸಿದ್ಧರಾಗಿರಬೇಕು” ಎಂದು ಪವಾರ್ ಕರೆ ನೀಡಿದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಎನ್‌ಸಿಪಿ ನಾಯಕರೊಬ್ಬರು ಹೇಳಿದ್ದಾರೆ.

“ಶಿಂಧೆ ಅವರನ್ನು ಬೆಂಬಲಿಸುತ್ತಿರುವ ಅನೇಕ ಬಂಡಾಯ ಶಾಸಕರು ಪ್ರಸ್ತುತ ವ್ಯವಸ್ಥೆಯಿಂದ ಸಂತೋಷವಾಗಿಲ್ಲ. ಒಮ್ಮೆ ಸಚಿವರ ಖಾತೆ ಹಂಚಿಕೆಯ ನಂತರ ಅವರ ಅಸಮಾಧಾನ ಹೊರಬರುತ್ತದೆ, ಇದು ಅಂತಿಮವಾಗಿ ಸರಕಾರ ಪತನಕ್ಕೆ ಕಾರಣವಾಗುತ್ತದೆ” ಎಂದು ಪವಾರ್ ಹೇಳಿದರು.

ಈ ಪ್ರಯೋಗದ ವೈಫಲ್ಯವು ಹಲವಾರು ಬಂಡಾಯ ಶಾಸಕರು ತಮ್ಮ ಮೂಲ ಪಕ್ಷಕ್ಕೆ ಮರಳಲು ಕಾರಣವಾಗುತ್ತದೆ. ನಮ್ಮ ಕೈಯಲ್ಲಿ ಕೇವಲ ಆರು ತಿಂಗಳಿರುವ ಸಾಧ್ಯತೆಯಿರುವ ಕಾರಣ ಎನ್‌ಸಿಪಿ ಶಾಸಕರು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚು ಸಮಯ ಕಳೆಯಬೇಕು ಎಂದು ಪವಾರ್ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ಸೋಂಕು ಪತ್ತೆ; 24 ಗಂಟೆಯಲ್ಲಿ 24 ಜನರು ಮಹಾಮಾರಿಗೆ ಬಲಿ

Mon Jul 4 , 2022
  ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 16,135 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 24 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,223ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,13,864 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13,958 […]

Advertisement

Wordpress Social Share Plugin powered by Ultimatelysocial