ಸಚಿವರ ಪ್ರಮಾಣ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಶಿಕಲಾ’ಜೀರೋ ಟ್ರಾಫಿಕ್​ಗೆʼ ಹೈಕೋರ್ಟ್​ ನಿರಾಕರಿಸಿದೆ.

 

ಬೆಂಗಳೂರು: ಸಚಿವರ ಪ್ರಮಾಣ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಶಿಕಲಾ ಜೊಲ್ಲೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ‘ಜೀರೋ ಟ್ರಾಫಿಕ್​’ ವ್ಯವಸ್ಥೆ ಕಲ್ಪಿಸಿದ ಪ್ರಕರಣವನ್ನು ಮರುವಿಚಾರಣೆ ನಡೆಸಲು ಹೈಕೋರ್ಟ್​ ನಿರಾಕರಿಸಿದೆ.ಜೀರೋ ಟ್ರಾಫಿಕ್​ ವ್ಯವಸ್ಥೆ ನೀಡಿದ್ದ ಪೊಲೀಸರ ಕ್ರಮ ಪ್ರಶ್ನಿಸಿ ವಕೀಲ ಜಿ. ಬಾಲಾಜಿ ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.ಅರ್ಜಿಯನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ. ಪ್ರಕರಣ ಸಂಬಂಧ ನೀಡಿದ್ದ ದೂರಿನ ಮೇರೆಗೆ ಸರ್ಕಾರ ಕೈಗೊಂಡಿರುವ ಕ್ರಮದ ವರದಿಯನ್ನು ನಿಮಗೆ ಒದಗಿಸಲಾಗುವುದು, ಸರ್ಕಾರದ ಆದೇಶದ ಬಗ್ಗೆ ಆಕ್ಷೇಪವಿದ್ದಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಅರ್ಜಿದಾರರಿಗೆ ತಿಳಿಸಿದ ಪೀಠ, ಪ್ರಕರಣವನ್ನು ಮರುಪರಿಗಣಿಸಲು ನಿರಾಕರಿಸಿ ಅರ್ಜಿ ಇತ್ಯರ್ಥಪಡಿಸಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಡುಪಿ : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ಭಾರೀ ಸದ್ದು!

Tue Feb 8 , 2022
ಉಡುಪಿ : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ಭಾರೀ ಸದ್ದು ಮಾಡುತ್ತಿದ್ದು, ಶಿವಮೊಗ್ಗದಲ್ಲಿ ಕಾಲೇಜು ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಲಾಗಿದೆ.ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಧ್ವಜ ಸ್ತಂಭದಲ್ಲಿ ಕೆಲ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದಾರೆ.ಸದ್ಯ ಕಾಲೇಜಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.ಇನ್ನು ಬಾಗಲಕೋಟೆಯಲ್ಲಿ ಕಾಲೇಜಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಾಗಲಕೋಟೆಯ ರಬಕವಿ ಬನಹಟ್ಟಿ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, […]

Advertisement

Wordpress Social Share Plugin powered by Ultimatelysocial