ಈ ವಾರ ತೆರೆಗೆ ಅರ್ಜುನ್ ಗೌಡ

ರಾಮು ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ “ಅರ್ಜುನ್ ಗೌಡ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಚಿತ್ರ ಬಿಡುಗಡೆಗೂ ಮುನ್ನವೇ ರಾಮು ಅವರ ನಿಧನವಾಗಿರುವುದು ನಿಜಕ್ಕೂ ನೋವಿನ ಸಂಗತಿ.

ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿರುವ ಈ ಚಿತ್ರದ ನಾಯಕನಾಗಿ ಪ್ರಜ್ವಲ್ ದೇವರಾಜ್ ಅಭಿನಯಿಸಿದ್ದಾರೆ. ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ನಟಿಸಿದ್ದಾರೆ. ಬಾಲಿವುಡ್ ನ ರಾಹುಲ್ ದೇವ್, ಸ್ಪರ್ಶ ರೇಖ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಶಂಕರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ‌ ಮಾಡಿದ್ದಾರೆ. ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ , ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

Omicron Symptoms: ಓಮಿಕ್ರಾನ್‌ನ ಮೊದಲ ರೋಗಲಕ್ಷಣವನ್ನು ಧ್ವನಿ ಮೂಲಕವೂ ಗುರುತಿಸಬಹುದು

Mon Dec 27 , 2021
Omicron Symptoms: ಕೊರೊನಾವೈರಸ್‌ನ (Coronavirus) ಹೊಸ ರೂಪಾಂತರವಾದ ಓಮಿಕ್ರಾನ್‌ನ ಲಕ್ಷಣಗಳು ಡೆಲ್ಟಾ ರೂಪಾಂತರಕ್ಕಿಂತ ಬೇಗ ಕಾಣಿಸಿಕೊಳ್ಳುವ ಸೂಚನೆಗಳಿವೆ. ಓಮಿಕ್ರಾನ್‌ನ ಮೊದಲ ರೋಗಲಕ್ಷಣವನ್ನು ಧ್ವನಿ ಮೂಲಕವೂ ಗುರುತಿಸಬಹುದು ಎಂದು ಹೇಳಲಾಗುತ್ತದೆ. ಓಮಿಕ್ರಾನ್‌ನಿಂದಾಗಿ (Omicron) ನೀವು ಅನಾರೋಗ್ಯಕ್ಕೆ ಒಳಗಾಗುವ ಮೊದಲು, ನೀವು ಅದರ ಲಕ್ಷಣಗಳನ್ನು ಕೇಳಬಹುದು ಮತ್ತು ಅನುಭವಿಸಬಹುದು ಎಂದು ಹೇಳಲಾಗುತ್ತದೆ. ಓಮಿಕ್ರಾನ್ ಸೋಂಕಿಗೆ ಒಳಗಾದಾಗ ಈ ಲಕ್ಷಣಗಳು ಕಂಡುಬರುತ್ತವೆ: ದಿ ಸನ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಗಂಟಲು ನೋಯುತ್ತಿದ್ದರೆ, ಕಿರುಚಲು ಅಥವಾ ಜೋರಾಗಿ […]

Advertisement

Wordpress Social Share Plugin powered by Ultimatelysocial