ಶ್ರೀಕೃಷ್ಣ ಆಲನಹಳ್ಳಿ ಕನ್ನಡದ ಮಹತ್ವದ ಕಥೆಗಾರ

ಶ್ರೀಕೃಷ್ಣ ಆಲನಹಳ್ಳಿ 1947ರ ಏಪ್ರಿಲ್ 3ರಂದು ಮೈಸೂರು ಜಿಲ್ಲೆಯ ಆಲನಹಳ್ಳಿಯಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾದರು. ಅವರು ಬದುಕಿದ್ದು ನಲವತ್ತೆರಡು ವರ್ಷಕ್ಕೂ ಕಡಿಮೆ ಅವಧಿ. ಅವರು ನಿಧನರಾದದ್ದು ಜನವರಿ 4, 1989ರಲ್ಲಿ. ಈ ಅತಿ ಚಿಕ್ಕ ವಯಸ್ಸಿನಲ್ಲೇ ಅವರು ಕನ್ನಡ ಸಾಹಿತ್ಯದಲ್ಲಿ ಮೂಡಿಸಿ ಹೋದ ಛಾಪು ಅತ್ಯಂತ ಸ್ಮರಣೀಯವಾದದ್ದು.
ಆಲನಹಳ್ಳಿಯವರು ವಿದ್ಯಾರ್ಥಿ ಜೀವನದಲ್ಲೇ ‘ಸಮೀಕ್ಷಕ’ ಎಂಬ ಸಾಹಿತ್ಯ ಪತ್ರಿಕೆಯನ್ನು ಆರಂಭಿಸಿದ್ದರು. ಸಾಹಿತ್ಯ ವಲಯದಲ್ಲಿ ಅದು ಎಲ್ಲೆಡೆ ಮೆಚ್ಚುಗೆ ಪಡೆದಿತ್ತು. ಅಂದಿನ ಬಹುತೇಕ ಪ್ರಸಿದ್ಧ ಬರಹಗಾರರು ಈ ಪತ್ರಿಕೆಯಲ್ಲಿ ಬರೆಯುತ್ತಿದ್ದರು. ಅಂದಿನ ದಿನ ಆ ಪತ್ರಿಕೆಯಲ್ಲಿ ಬರೆಯಿರಿ ಎಂದು ಅವರು ತಮ್ಮ ಗೆಳೆಯರನ್ನು ಎಷ್ಟು ಒತ್ತಾಯಿಸುತ್ತಿದ್ದರೆಂದರೆ, ಪಿ. ಲಂಕೇಶ್ ಅವರು ಅವರ ಒತ್ತಾಯದ ಕಾಟವನ್ನೇ ಒಂದು ಕವನದ ಸಾಲಾಗಿ “ನನ್ನ ಸುತ್ತಾ” ಎಂಬ ಪ್ರಸಿದ್ಧ ಕವನದಲ್ಲಿ ಬರೆದಿದ್ದರು.
ಶ್ರೀಕೃಷ್ಣ ಆಲನಹಳ್ಳಿ ಅವರ ಕವನ ಸಂಗ್ರಹ “ಮಣ್ಣಿನ ಹಾಡು” ಕೃತಿಗೆ ಮುನ್ನುಡಿಯಲ್ಲಿ ಅಡಿಗರು ಅದನ್ನು ಕನ್ನಡ ಕಾವ್ಯದಲ್ಲಿ ನಡೆದ ‘ಘಾತಪಲ್ಲಟ’ ಎಂದು ಬಣ್ಣಿಸಿದ್ದರು. ಅದು ಶ್ರೀಕೃಷ್ಣರಿಗೆ ದೊಡ್ಡ ಹೆಸರು ತಂದಿತು. ಎಷ್ಟು ಹೆಸರು ಎಂದರೆ ಅಂದು ಮಹಾರಾಜಾ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದ ಎಸ್. ನಾರಾಯಣ ಶೆಟ್ಟರು, “ಲೈಬ್ರೆರಿಯಿಂದ ಕೃಷ್ಣನ ಪುಸ್ತಕ ಎಲ್ಲರೂ ತೆಗೆದುಕೊಂಡು ಹೋಗಿ ಓದುತ್ತಾರೆ, ನನ್ನದು ಯಾರೂ ತೆಗೆದುಕೊಂಡು ಹೋಗುವುದಿಲ್ಲ, ನನ್ನದನ್ನೂ ತೆಗೆದುಕೊಂಡು ಹೋಗಲಿ ಎಂದು ಲೈಬ್ರೆರಿಯಲ್ಲಿ ನನ್ನ ಪುಸ್ತಕವನ್ನು ಅವನ ಪುಸ್ತಕದ ಹತ್ತಿರವೇ ಇಟ್ಟೆ, ಆದರೂ ಯಾರೂ ತೆಗೆದುಕೊಂಡು ಹೋಗಲಿಲ್ಲ” ಎಂದು ತಮಾಷೆಯಾಗಿ ಹೇಳುತ್ತಿದ್ದರಂತೆ. ಆ ಮಾತು ನಿಜವೂ ಆಗಿತ್ತು. ಕೃಷ್ಣ ಒಳ್ಳೆಯ ಲೇಖಕರು ಮಾತ್ರ ಅಲ್ಲ, ಜನಪ್ರಿಯರೂ ಆಗಿದ್ದರು.
ಮುಂದೆ ಆಲನಹಳ್ಳಿ ಅವರು ಕಾದಂಬರಿಗಳನ್ನು ಬರೆಯಲು ಪ್ರಾರಂಭಿಸಿದರು. ಅವರ ‘ಕಾಡು’, ‘ಪರಸಂಗದ ಗೆಂಡೆತಿಮ್ಮ’, ‘ಗೀಜಗನ ಗೂಡು’, ‘ಫೀನಿಕ್ಸ್’ ಅಂದಿನ ದಿನದಲ್ಲೇ ಸಿನೆಮಾಗಳಾದವು. ಅವರಿಗೆ ಅಪಾರ ಪ್ರಖ್ಯಾತಿ ಬಂತು. ಆದರೆ ಅವರಿಗೆ ಐಶ್ವರ್ಯ ಬಂತೇ? ಬಹುಶಃ ಇಲ್ಲ ಎನ್ನುತ್ತಾರೆ ಅವರ ಅಂದಿನ ಗೆಳೆಯರು. ತೋಟ ಮಾಡಿದರು. ಅದು ಫಲ ಬರುವಷ್ಟು ಬೆಳೆಯುವ ಹೊತ್ತಿಗೆ ಹೋಗಿಬಿಟ್ಟರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಶ್ ಅಭಿಮಾನಿಗಳಿಗೆ ಇಲ್ಲಿದೆ ಮತ್ತೊಂದು ಗುಡ್​ ನ್ಯೂಸ್!

Thu Jan 5 , 2023
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಒಂದು ಗುಡ್​ ನ್ಯೂಸ್​ ಕೇಳಿಬಂದಿದೆ. ಯಶ್ 19ನೇ ಸಿನಿಮಾದ ಬಗ್ಗೆ ಈಗ ಸುದ್ದಿಯೊಂದು ಹೊರಕ್ಕೆ ಬಂದಿದೆ. ಕೆವಿಎನ್ ಪ್ರೊಡಕ್ಷನ್ ಹೌಸ್ ಯಶ್ ಮುಂದಿನ ಸಿನಿಮಾವನ್ನು ನಿರ್ಮಾಣ ಮಾಡಲಿದ್ದು, ನರ್ತನ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada   Please follow and like us:

Advertisement

Wordpress Social Share Plugin powered by Ultimatelysocial