ಉಪಚನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ.ಎಂದು ಎಲ್‌ ಆರ್‌ ಶಿವರಾಮೇಗೌಡ ಹೇಳಿಕೆ.

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ನನ್ನದು 8 ಸ್ಕೂಲ್ ಇದೆ. ತಿಂಗಳಿಗೆ 3 ಕೋಟಿ ಸಂಬಳ ಕೊಡುತ್ತೇನೆ. ಮುಂದಿನ ನಾಗಮಂಗಲ ವಿಧಾನಸಭಾ ಚುನಾವಣೆಗೆ 10 ತಿಂಗಳ ಸಂಬಳದಷ್ಟೆ ಹಣಬೇಕು.ಮಂಡ್ಯ: ಲೋಕಸಭಾ ಉಪಚುನಾವಣೆಗೆ 30 ಕೋಟಿ ರೂಪಾಯಿ ಖರ್ಚು ಮಾಡಿದ್ದೆ ಎಂಬ ಆಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ  ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್  ಆಗಿದ್ದು, ವೈರಲ್ ಆದ ಆಡಿಯೋದಲ್ಲಿ ಜೆಡಿಎಸ್   ಮಹಿಳೆ ಕಾರ್ಯಕರ್ತೆ ಜೊತೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಂಎಲ್ಸಿ ಚುನಾವಣೆಗೆ 27 ಕೋಟಿ ಖರ್ಚು ಮಾಡಿದ್ದೆ. ಐದು ತಿಂಗಳಿಗೆ ಎಂಪಿ ಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ. ಮುಂದಿನ ನಾಗಮಂಗಲ ವಿಧಾನಸಭ ಚುನಾವಣೆಗೆ 30 ಕೋಟಿ ಖರ್ಚು ಮಾಡುತ್ತೇನೆ ಎಂದು ಮಾತನಾಡಿದ 37 ನಿಮಿಷ 54 ಸೆಂಕೆಡ್ ಆಡಿಯೋ ವೈರಲ್ ಆಗಿದೆ.ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ನನ್ನದು 8 ಸ್ಕೂಲ್ ಇದೆ. ತಿಂಗಳಿಗೆ 3 ಕೋಟಿ ಸಂಬಳ ಕೊಡುತ್ತೇನೆ. ಮುಂದಿನ ನಾಗಮಂಗಲ ವಿಧಾನಸಭಾ ಚುನಾವಣೆಗೆ 10 ತಿಂಗಳ ಸಂಬಳದಷ್ಟೆ ಹಣಬೇಕು. ಅಷ್ಟು ಹಣವನ್ನು ಖರ್ಚು ಮಾಡುತ್ತೇನೆ. ತಮಗೆ ಬೆಂಬಲ ನೀಡಬೇಕು ಎಂದು ಮಹಿಳಾ ಕಾರ್ಯಕರ್ತೆ ಜೊತೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೆ ನಾಗಮಂಗಲ ಕ್ಷೇತ್ರದ ಕೊಪ್ಪಗೆ ಭೇಟಿ ನೀಡಿದ್ದ ಎಲ್‌ಆರ್ ಶಿವರಾಮೇಗೌಡ, ಅಲ್ಲಿನ ಸಭೆಗೆ ಮಹಿಳಾ ಕಾರ್ಯಕರ್ತೆಗೆ ಆಹ್ವಾನಿಸಲು ಕರೆ ಮಾಡಿದ್ದಾರೆ ಎನ್ನಲಾಗಿದೆ.ಸದ್ಯ ನಾಗಮಂಗಲ ಜೆಡಿಎಸ್ ಟಿಕೆಟ್ ಮೇಲೆ ಶಿವರಾಮೇಗೌಡ ಕಣ್ಣಿಟ್ಟಿದ್ದಾರೆ. ನಾಗಮಂಗಲದ ಜೆಡಿಎಸ್ ಶಾಸಕರ ವಿರುದ್ಧವೂ ಆಡಿಯೋದಲ್ಲಿ ಚರ್ಚೆ ಮಾಡಿದ್ದಾರೆ. ನಾನು ಎರಡು ಸಲ ಎಂಎಲ್‌ಎ ಆಗಿದ್ದೇನೆ. ಆತ ಮಾಡಿದ ಕೆಲಸಕ್ಕಿಂತ ತಾತನಂತ ಕೆಲಸ ಮಾಡಬಹುದು. ಸುರೇಶ್ ಗೌಡ ನನಗೆ ಕಳೆದ ಲೋಕಸಭೆ ಟಿಕೆಟ್ ತಪ್ಪಿಸಿದ್ದ. ನಿಖಿಲ್ ಕುಮಾರ್ ಸ್ವಾಮಿ ಚುನಾವಣೆಗೆ ನಿಲ್ಲಿಸಿ ಅವರ ಮನೆಗೆ ಕಂಟಕ ತಂದರೂ, ನನಗುಗೂ ಕಂಟಕ ತಂದರು. ಮುಂದಿನ ಬಾರಿ ಚುನಾವಣೆಗೆ ನಾನು ನಿಂತುಕೊಳ್ಳುತ್ತೇನೆ. ನನಗೆ ಬೆಂಬಲಕೊಡಿ ಎಂದು ಮಾತನಾಡಿರುವುದು ವೈರಲ್ ಆದ ಆಡಿಯೋದಲ್ಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಪಾಟ್ನಾ: ಮದ್ಯ ಸೇವಿಸುವವರ ಪತ್ತೆ ಹಚ್ಚಲು ಶಿಕ್ಷಕರು; ಶಿಕ್ಷಣ ಇಲಾಖೆಯಿಂದ ಆದೇಶ ಜಾರಿ.

Sun Jan 30 , 2022
ಪಾಟ್ನಾ: ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರ್ಪಡೆಗೊಳಿಸಲು ಶಿಕ್ಷಕರಿಗೆ ಸೂಚನೆ ನೀಡುವುದು ಸಾಮಾನ್ಯ. ಏಕೆಂದರೆ, ಸ್ಥಳೀಯವಾಗಿ ಶಿಕ್ಷಕರು ಪರಿಚಯಸ್ಥರೇ ಆಗಿರುವುದರಿಂದ ಅವರಿಗೆ ಅದು ಸುಲಭವೂ ಆಗಿರುತ್ತದೆ. ಆದರೆ, ಬಿಹಾರದಲ್ಲಿ ಮದ್ಯ ಸೇವನೆ ಮತ್ತು ಮದ್ಯ ಪೂರೈಕೆಯನ್ನು ಯಾರು ಮಾಡುತ್ತಾರೆ ಎಂಬುದನ್ನು ಪತ್ತೆ ಹಚ್ಚುವ “ಹೊಸ ಕೆಲಸ’ ಶಿಕ್ಷಕರ ಪಾಲಿಗೆ ಸಿಕ್ಕಿದೆ.ಈ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ಆದೇಶವನ್ನೂ ಹೊರಡಿಸಿದೆ.ಆದೇಶದ ಪ್ರಕಾರ ಬಿಹಾರ ಸರ್ಕಾರದ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ […]

Advertisement

Wordpress Social Share Plugin powered by Ultimatelysocial