ಶಿವಮೊಗ್ಗ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು,

ಶಿವಮೊಗ್ಗ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿದ್ದ ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿದ್ದರು.ಇದರ ಬೆನ್ನಲ್ಲೇ ಕಾಲೇಜಿನಲ್ಲಿ ಕಲ್ಲು ತೂರಾಟ ಘಟನೆಗಳು ನಡೆದಿದ್ದು, ನಗರದ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದರು.ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಶಾಂತಿ ಕಾಪಾಡಲು ಯತ್ನಿಸಿದ್ದಾರೆ.ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಹಶೀಲ್ದಾರ್ ನಾಗರಾಜ್ ಶಿವಮೊಗ್ಗದಲ್ಲಿ 2 ದಿನಗಳ ಕಾಲ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೀವು ಕೇಳಿದ್ದೀರಾ? ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆಗೆ ಎರಡನೇ ಸುತ್ತು;

Tue Feb 8 , 2022
ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆ ಈ ವಾರ ಹೈದರಾಬಾದ್‌ನಲ್ಲಿ ಪ್ರಾಜೆಕ್ಟ್ ಕೆ ಎರಡನೇ ಶೆಡ್ಯೂಲ್‌ನ ಚಿತ್ರೀಕರಣವನ್ನು ಪುನರಾರಂಭಿಸಲಿದ್ದಾರೆ. ಚಿತ್ರವು ಪ್ರಸ್ತುತ ಪ್ರಿ-ಪ್ರೊಡಕ್ಷನ್ ಹಂತದಲ್ಲಿದೆ. ಪ್ರಭಾಸ್ ಮತ್ತು ಪಡುಕೋಣೆ ಈ ಲೆಗ್‌ನ ಭಾಗವಾಗಲಿದ್ದು, ಇದರಲ್ಲಿ ನಿರ್ಣಾಯಕ ಸರಣಿಗಳನ್ನು ಸುತ್ತುವ ನಿರೀಕ್ಷೆಯಿದೆ. ವೈಜ್ಞಾನಿಕ ಯೋಜನೆಯ ಈ ಹಂತವು ಅಮಿತಾಬ್ ಬಚ್ಚನ್ ಅವರ ಪಾಲ್ಗೊಳ್ಳುವಿಕೆಯನ್ನು ಸಹ ನೋಡುತ್ತದೆ ಎಂದು ಊಹಿಸಲಾಗಿದೆ. ಸಂಸತ್ತು ಗೌರವ ಸಲ್ಲಿಸುತ್ತದೆ ಸಂಸತ್ತು ಭಾರತ ರತ್ನ ಲತಾ ಮಂಗೇಶ್ಕರ್ ಅವರಿಗೆ ಗೌರವ […]

Advertisement

Wordpress Social Share Plugin powered by Ultimatelysocial