ನಾಲ್ಕು ಕ್ಷೇತ್ರಗಳ ಪೈಕಿ ಈಗಾಗಲೇ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ.

ಬೆಂಗಳೂರು: ‘ವಿಧಾನ ಪರಿಷತ್  ಪದವೀಧರರು, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ಕ್ಷೇತ್ರಗಳ ಪೈಕಿ ಈಗಾಗಲೇ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಮಧು ಮಾದೇಗೌಡರು ಹಾಗೂ ಧಾರವಾಡದ ಗುರಿಕಾರ್ ಅವರ ಹೆಸರನ್ನು ಎಐಸಿಸಿ   ಅಂತಿಮಗೊಳಿಸಿದೆ.ಬೆಳಗಾವಿ, ಬಾಗಲಕೋಟೆ, ಬಾದಾಮಿ, ಬಿಜಾಪುರದ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದ ತಲಾ ಒಬ್ಬರು ಅಭ್ಯರ್ಥಿ ಆಯ್ಕೆ ಸಂಬಂಧ ನಾಯಕರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್     ಹೇಳಿದರು.ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪದವೀಧರ ಕ್ಷೇತ್ರಕ್ಕೆ ಆರು ಮಂದಿ ಅರ್ಜಿ ಹಾಕಿದ್ದು, ಶಿಕ್ಷಕರ ಕ್ಷೇತ್ರಕ್ಕೆ 15ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿರುವ ಹಿನ್ನೆಲೆಯಲ್ಲಿ ಎಲ್ಲರ ಅಭಿಪ್ರಾಯ ಪಡೆಯುವುದು ಮುಖ್ಯ. ಇಂದಿನ ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕೆಲವು ನಾಯಕರು ಗೋವಾ ಚುನಾವಣಾ ಪ್ರಚಾರಕ್ಕೆ ತೆರಳಿದ್ದು, ಮುಂದಿನ ಕೆಲ ದಿನಗಳಲ್ಲಿ ಅವರು ಬಂದ ನಂತರ ಚರ್ಚಿಸಿ, ನಮ್ಮ ಶಿಫಾರಸ್ಸನ್ನು ದೆಹಲಿಗೆ ಕಳುಹಿಸಿಕೊಡುತ್ತೇವೆ ಎಂದರುಹಿಜಬ್ ಹಾಗೂ ಕೇಸರಿ ವಸ್ತ್ರಧಾರಣೆ ವಿಚಾರವಾಗಿ ಎದ್ದಿರುವ ವಿವಾದ ಕುರಿತ ಪ್ರಶ್ನೆಗೆ, ‘ನಾನು ಈ ವಿಚಾರವಾಗಿ ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಬೇಕಾಗಿದೆ. ಮೊದಲಿನಿಂದ ಆಚರಿಸಿಕೊಂಡು ಬಂದ ಪದ್ಧತಿ, ಸಂಸ್ಕೃತಿ, ಇತಿಹಾಸ, ಕಾನೂನು ಎಲ್ಲವನ್ನೂ ಚರ್ಚಿಸಬೇಕಾಗಿದೆ. ನಾನು ಈ ವಿಚಾರವನ್ನು ಗಮನಿಸುತ್ತಿದ್ದೇನೆ. ನ್ಯಾಯಾಲಯ ಈಗಾಗಲೇ ಮಧ್ಯ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ನಾನು ಪಕ್ಷದ ಅಧ್ಯಕ್ಷನಾಗಿ ಮಾತನಾಡುವುದು ಸರಿಯಾಗುವುದಿಲ್ಲ. ಎಲ್ಲರಿಗೂ ಅವರದೇ ಆದ ಜೀವನ ಪದ್ಧತಿ, ಸಂಸ್ಕೃತಿ ಇರುವುದನ್ನು ಚರ್ಚಿಸಬೇಕಿದೆ. ಇದು ಬಹಿರಂಗ ಚರ್ಚೆ ಮಾಡುವ ವಿಚಾರವಲ್ಲ. ಮಕ್ಕಳು, ಧಾರ್ಮಿಕ ಆಚರಣೆಯಂತಹ ಸೂಕ್ಷ್ಮ ವಿಚಾರವಿರುವುದರಿಂದ ಈ ಬಗ್ಗೆ ಒಂದು ಚೌಕಟ್ಟಿನಲ್ಲಿ ಚರ್ಚೆ ಮಾಡಬೇಕಿದೆ’ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪುಣೆ ಕಟ್ಟಡ ಕುಸಿತ: ದುಃಖ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು

Fri Feb 4 , 2022
ಬುಧವಾರ ರಾತ್ರಿ ಪುಣೆಯಲ್ಲಿ ಕಟ್ಟಡ ಕುಸಿತದ ಭೀಕರ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ದುರದೃಷ್ಟಕರ ಘಟನೆಯಿಂದ ನೊಂದ ಕುಟುಂಬಗಳಿಗೆ ಸಂತಾಪ ಸೂಚಿಸಲು ಪ್ರಧಾನಿ ಟ್ವಿಟರ್‌ಗೆ ಕರೆದೊಯ್ದಿದ್ದಾರೆ. “ಪುಣೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಸಂಭವಿಸಿದ ದುರ್ಘಟನೆಯಿಂದ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಈ ದುರ್ಘಟನೆಯಲ್ಲಿ ಗಾಯಗೊಂಡವರೆಲ್ಲರೂ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಭಾವಿಸುತ್ತೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ನಿರ್ಮಾಣ […]

Advertisement

Wordpress Social Share Plugin powered by Ultimatelysocial