ಶ್ರೀರಾಮ ಸೇನೆ ಕಾರ್ಯಕರ್ತರು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೊಸಪೇಟೆ (ವಿಜಯನಗರ):ಶಾಲಾ, ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಶಿಸ್ತು ತರಬೇಕೆಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಕೆಲ ಸಂಘಟನೆಗಳು ಕೋಮುವಾದ ಸೃಷ್ಟಿಸುವ ಉದ್ದೇಶದಿಂದ ಸಮವಸ್ತ್ರದಲ್ಲಿ ಭೇದಭಾವ ಉಂಟು ಮಾಡುತ್ತಿವೆ.ಅದು ಸರಿಯಾದ ಕ್ರಮವಲ್ಲ. ಎಲ್ಲರಿಗೂ ಒಂದೇ ರೀತಿಯ ಸಮವಸ್ತ್ರ ಜಾರಿಗೆ ತಂದರೆ ಗೊಂದಲ ಸೃಷ್ಟಿಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದರು.ಎಲ್ಲ ವಿದ್ಯಾರ್ಥಿಗಳಲ್ಲಿ ಸಮಾನತೆ ತರುವ ನಿಟ್ಟಿನಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸುವುದು ಸೂಕ್ತ. ಸಂವಿಧಾನ ಮತ್ತು ಕಾನೂನು ದೃಷ್ಟಿಯಿಂದಲೂ ಉತ್ತಮ. ಆಯಾ ಸಮುದಾಯದವರಿಗೆ ಅವರಿಗಿಷ್ಟವಾದ ವಸ್ತ್ರ ಧರಿಸಲು ಅನುಮತಿ ನೀಡಬೇಕೆಂದು ಕೆಲ ಸಂಘಟನೆಗಳು ಮನವಿ ಮಾಡಿಕೊಂಡಿವೆ. ಅದಕ್ಕೆ ಅವಕಾಶ ಕಲ್ಪಿಸಬಾರದು ಎಂದು ಒತ್ತಾಯಿಸಿದರು.ಶ್ರೀರಾಮ ಸೇನೆ ವಿಭಾಗ ಅಧ್ಯಕ್ಷ ಸಂಜೀವ ಮರಡಿ, ಜಗದೀಶ ಕಾಮಟಗಿ, ಸೂರಿ ಬಂಗಾರು, ನಾಗರಾಜ, ಮದನ್ ಕುಮಾರ್ ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Renukacharya: ಕೇಸರಿ ಶಾಲು ಖರೀದಿ ಮಾಡ್ತಿವಿ, ಜನರಿಗೆ ಕೊಡ್ತಿವಿ ಏನ್​ ಈಗ? | Speed News Kannada|

Thu Feb 10 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial