CRICKET:”ಸ್ಮೃತಿ ಮಂಧಾನ” ಅತ್ಯುತ್ತಮ ಮಹಿಳಾ ಕ್ರಿಕೆಟರ್”ಆಗಿ ಆಯ್ಕೆ;

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ : ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಐಸಿಸಿ ವಾರ್ಷಿಕ ಅತ್ಯುತ್ತಮ ಮಹಿಳಾ ಕ್ರಿಕೆಟರ್ (ICC Women’s Cricketer of the Year) ಆಗಿ ಆಯ್ಕೆಯಾಗಿದ್ದಾರೆ.

ಐಸಿಸಿ ಸೋಮವಾರ ಹೇಳಿಕೆ ನೀಡುವ ಮೂಲಕ ಈ ವಿಷಯವನ್ನು ಪ್ರಕಟಿಸಿದೆ. ಈ ಭಾರತೀಯ ಬ್ಯಾಟರ್ ಕಳೆದ ವರ್ಷ ಒಟ್ಟು 22 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇಷ್ಟು ಪಂದ್ಯಗಳಲ್ಲಿ ಸ್ಮೃತಿ 38.86 ಸರಾಸರಿಯಲ್ಲಿ 855 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ಒಂದು ಶತಕ ಮತ್ತು ಐದು ಅರ್ಧ ಶತಕಗಳನ್ನು ಬಾರಿಸಿದ್ದರು.

ಸ್ಮೃತಿ ಕಳೆದ ವರ್ಷ ಆಟದ ಎಲ್ಲಾ ಮೂರು ಸ್ವರೂಪಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಅದಕ್ಕಾಗಿಯೇ ಐಸಿಸಿ ಅವರನ್ನು ರಾಚೆಲ್ ಹೇಹೋ ಫ್ಲಿಂಟ್ ಟ್ರೋಫಿಗೆ ಆಯ್ಕೆ ಮಾಡಿದೆ. ಮಂಧಾನ ಭಾರತದ ಅತ್ಯುತ್ತಮ ಬ್ಯಾಟರ್​ಗಳಲ್ಲಿ ಒಬ್ಬರಾಗಿದ್ದಾರೆ. ಅಲ್ಲದೆ ವರ್ಷದಿಂದ ವರ್ಷಕ್ಕೆ ತನ್ನ ಪ್ರದರ್ಶನದೊಂದಿಗೆ ತನ್ನ ಪ್ರಾಮುಖ್ಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

RENUKHA CHARYA:ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಿಎಂ ಆಗಬೇಕಾ, ನಮಗೆ ಯೋಗ್ಯತೆ ಇಲ್ವ;

Mon Jan 24 , 2022
ದಾವಣಗೆರೆ: ಬಿಜೆಪಿ ಪಾಳಯದಲ್ಲಿ ಮತ್ತೆ ಸಂಪುಟ ವಿಸ್ತರಣೆ, ಪುನರ್ರಚನೆ ಮಾತುಗಳು, ಬಹಿರಂಗ ಹೇಳಿಕೆಗಳು, ಸಮಾನ ಮನಸ್ಕರ ಸಭೆಗಳು, ಅಸಮಾಧಾನಗಳು ಜೋರಾಗಿವೆ. ಸಿಎಂ ಕಾರ್ಯದರ್ಶಿ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.ತಾವು ಪ್ರಬಲ ಸಚಿವಾಕಾಂಕ್ಷಿ ಎಂಬುದನ್ನು ಹೇಳಿಕೊಂಡಿದ್ದಾರೆ. ಹಿಂದಿನ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ತಮ್ಮ ಹಾಗೂ ಬಸವಗೌಡ ಪಾಟೀಲ್ ಯತ್ನಾಳ್ ಪಾತ್ರ ಸಾಕಷ್ಟಿದೆ, ಹೀಗಿರುವಾಗ ನಮಗೆ ಸಚಿವರಾಗುವ ಯೋಗ್ಯತೆ […]

Advertisement

Wordpress Social Share Plugin powered by Ultimatelysocial