ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ

ತನ್ನ ಅಂತ್ಯಯಾತ್ರೆಯಲ್ಲಿ ಸಿದ್ದರಾಮಯ್ಯ ಆಗಮಿಸಬೇಕು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದ ಅಭಿಮಾನಿಯ ಅಂತಿಮ ದರ್ಶನವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿಗೆ ಅಂತಿಮ ನಮನ ಸಲ್ಲಿಸಿ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಡೆತ್ ನೋಟಲ್ಲಿ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತಾ ಬರೆದಿದ್ದಾನೆ. ನನಗೆ ಅವನ ಪರಿಚಯ ಅಷ್ಟೊಂದಿಲ್ಲ. ಅದರೂ ನನ್ನ ಅಭಿಮಾನಿಯಾಗಿದ್ದಾನೆ. ಎಲ್ಲಕ್ಕಿಂತ ಮುಖ್ಯವಾಗಿ ಮನುಷ್ಯತ್ವ ಮುಖ್ಯ. ನನಗೆ ಗೊತ್ತಿಲ್ಲದೆ ದೊಡ್ಡ ಅಭಿಮಾನಿಯಾಗಿ ಡೆತ್ ನೋಟ್‌ನಲ್ಲಿ ಬರೆದುಕೊಂಡಿದ್ದಾನೆ.ಅಭಿಮಾನಿ ಆಗಲಿ, ಯಾರೇ ಆಗಲಿ ಅಂತ್ಯಕ್ರಿಯೆಗೆ ಬರಬೇಕು ಅಂತಾ ಬರೆದುಕೊಂಡಿದ್ದಾನೆ. ಹೀಗಾಗಿ ಅಂತ್ಯಕ್ರಿಯೆಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮದ್ಯ ಸಾಗಿಸುತ್ತಿದ್ದ ಆರೋಪಿಗಳ ಬಂಧನ

Please follow and like us:

Leave a Reply

Your email address will not be published. Required fields are marked *

Next Post

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್

Fri Feb 19 , 2021
ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಕಂದರಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿ, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶಿರಾ-ಬುಕ್ಕಾಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಂಗರಹಟ್ಟಿ ಗೊಲ್ಲರಹಟ್ಟಿಗೆ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಖಾಸಗಿ ಬಸ್ ನಲ್ಲಿ ಹೊರಟಿದ್ದರು. ಈ ಬಸ್ ನಲ್ಲಿ 50 ಕ್ಕೂ ಹೆಚ್ಚು ಮಂದಿ ಇದ್ದು 40 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಶಿರಾ ಬಳಿ ಇರುವ ಮೇಕೇರಹಟ್ಟಿ ಬಳಿ ತಿರುವು ಇದ್ದು, ಈ […]

Advertisement

Wordpress Social Share Plugin powered by Ultimatelysocial