ರಾಜ್ಯ ಸರ್ಕಾರ ಹಠಕ್ಕೆ ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ:

ಬೆಂಗಳೂರು, ಜನವರಿ. 27: ರಾಜ್ಯ ಸರ್ಕಾರ ಹಠಕ್ಕೆ ಬಿದ್ದು ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟ ನಡೆಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜಧಾನಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಕೇಳದೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

“ಮುಷ್ಕರ ನಿರತ ರಾಜ್ಯ ಅಂಗನವಾಡಿ ಕಾರ್ಯಕರ್ತರನ್ನು ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು. ಅತ್ಯಂತ ಖಂಡನೀಯ. ಮುಖ್ಯಮಂತ್ರಿಗಳು ತಕ್ಷಣ ಅಂಗನವಾಡಿ ಕಾರ್ಯಕರ್ತರನ್ನು ಕರೆದು ಅವರ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಅಂಗನವಾಡಿ ಕಾರ್ಯಕರ್ತರು ಮಳೆ – ಚಳಿ – ಗಾಳಿ ಎನ್ನದೆ ಬೀದಿಯಲ್ಲಿ ಠಿಕಾಣಿ ಹೂಡಿ ಮುಷ್ಕರದಲ್ಲಿ ತೊಡಗಿದ್ದಾರೆ. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇದಾದ ನಂತರವೂ ರಾಜ್ಯ ಸರ್ಕಾರ ಹಠಕ್ಕೆ ಬಿದ್ದು ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟ ನಡೆಸುತ್ತಿರುವುದು ವಿಷಾದನೀಯ” ಎಂದು ಕಿಡಿಕಾರಿದ್ದಾರೆ.

ಸೇವೆ ಕಾಯಂ, ವೇತನ ಹೆಚ್ಚಳ ಮತ್ತು ಮತ್ತು ನಿವೃತ್ತಿ ಸೌಲಭ್ಯವೂ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿದ್ದಾರೆ. ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಮಾತುಕತೆಯ ಮೂಲಕ ಮುಷ್ಕರ ನಿರತರ ಬೇಡಿಕೆ ಈಡೇರಿಸಲು ಸಾಧ್ಯವಿತ್ತು. ಸರ್ಕಾರ ಉದ್ಧಟತನದಿಂದ ಸಂಘರ್ಷದ ಹಾದಿ ಆಯ್ದುಕೊಂಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ಸರ್ಕಾರದ ಕಾಲದ ಐದು ವರ್ಷಗಳ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತರ ಗೌರವಧನವನ್ನು ರೂ.5,000 ಗಳಿಂದ ರೂ. 8000ಕ್ಕೆ ಮತ್ತು ಸಹಾಯಕಿಯರ ವೇತನವನ್ನು ರೂ.2500 ರಿಂದ ರೂ.4000ಕ್ಕೆ ಹೆಚ್ಚಿಸಿದ್ದೆವು. ಆದರೆ ರಾಜ್ಯದ ಬಿಜೆಪಿ ಸರ್ಕಾರ ಅಂಗನವಾಡಿ ಕಾರ್ಯಕರ್ತರ ಮುಷ್ಕರವನ್ನು ತಡೆಯುವ ಹತಾಶ ಪ್ರಯತ್ನ ಮಾಡುತ್ತಿದ್ದು ಇದು ಪ್ರಜಾತಂತ್ರ ವಿರೋಧಿ ಪ್ರಯತ್ನ ಎಂದು ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಯನ್ನು ಕಂಡು ಕಾಣದಂತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ವಿರುದ್ಧ ಅನೇಕ ಸಮಾಝಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದು ಅಹೋರಾತ್ರಿ ಧರಣಿ ನಡೆಸುತ್ತಿರುವವರ ಬೇಡಿಕೆಗಳನ್ನು ಕೇಳದಷ್ಟು ಸರ್ಕಾರ ಕುರುಡು ಮತ್ತು ಕಿವುದಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಹೈದರಾಬಾದ್‌ ಬಿರಿಯಾನಿ'̤

Fri Jan 27 , 2023
ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :ಹೈದರಾಬಾದ್‌ ಬಿರಿಯಾನಿ ಭಾರತದ ಅತ್ಯಂತ ರುಚಿಕರವಾದ ಭಕ್ಷ್ಯಗಳಲ್ಲಿ ಒಂದಾಗಿದೆ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಇದು ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಆಫ್ರಿಕನ್ ಜರ್ನಲ್ ಆಫ್ ಫುಡ್ ಸೈನ್ಸ್ ಅಂಡ್ ಟೆಕ್ನಾಲಜಿ (ಎಜೆಎಫ್ ಎಸ್ ಟಿ) ಇತ್ತೀಚೆಗೆ ಪ್ರಕಟಿಸಿದ ಜರ್ನಲ್ ನಲ್ಲಿ, ಹೈದರಾಬಾದಿ ಬಿರಿಯಾನಿ ತಿನ್ನುವುದರಿಂದಾಗುವ ಆರೋಗ್ಯ ಪ್ರಯೋಜನಗಳನ್ನು ಬಹಿರಂಗಪಡಿಸಿದೆ. ಇದು ಅಕ್ಕಿ, ತರಕಾರಿಗಳು, ಮೊಟ್ಟೆ, ಮಾಂಸ ಮುಂತಾದ ವೈವಿಧ್ಯಮಯ […]

Advertisement

Wordpress Social Share Plugin powered by Ultimatelysocial