ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸೂಚನೆ?

 

ಚುನಾವಣಾ ವರ್ಷದಲ್ಲಿ ಕರ್ನಾಟಕ ರಾಜಕೀಯದ ಮೇಲೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ನಿಗಾ ಇಡುತ್ತಿದೆ. ಯಾಕೆಂದರೆ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆಯಿದೆ ಎನ್ನುವ ಕೆಲವೊಂದು ಆಂತರಿಕ ವರದಿಗಳು.

ಕಾಂಗ್ರೆಸ್ ನಲ್ಲಿ ನಾವೆಲ್ಲಾ ಒಂದೇ ಎಂದು ಬಹಿರಂಗವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಸಾರುತ್ತಿದ್ದರೂ, ಇಬ್ಬರ ನಡುವಿನ ಮನಸ್ತಾಪದ ವಿದ್ಯಮಾನಗಳು ನಡೆಯುತ್ತಲೇ ಇವೆ.

ರಾಜ್ಯದ ಇಬ್ಬರು ಪ್ರಮುಖ ನಾಯಕರನ್ನು ರಾಹುಲ್ ಗಾಂಧಿ ಇತ್ತೀಚೆಗೆ ದೆಹಲಿಗೆ ಕರೆಸಿಕೊಂಡಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಇಬ್ಬರ ಸಮ್ಮುಖದಲ್ಲಿ ಸಿದ್ದು ಮತ್ತು ಡಿಕೆಶಿ ಜೊತೆ ಮಾತುಕತೆ ನಡೆಸಲಾಗಿತ್ತು.

ಡಿಕೆಶಿ ಮತ್ತು ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ಆವಾಗಾವಾಗ ದೆಹಲಿಗೆ ಕರೆಸಿಕೊಳ್ಳುವುದುಂಟು. ಆದರೆ, ಈ ಬಾರಿ ವಿರೋಧ ಪಕ್ಷದ ನಾಯಕರಿಗೆ ಹೇಳಿಕೆ ನೀಡುವಾಗ ತೂಕದಿಂದ ನೀಡಬೇಕು ಅದೂ ರಾಜ್ಯದ ಹಿರಿಯ ನಾಯಕರೊಬ್ಬರ ಬಗ್ಗೆ ಮಾತನಾಡುವಾಗ ಎನ್ನುವ ಸೂಚನೆಯನ್ನು ನೀಡಿದೆ, ಎಂದು ಕೆಲವೊಂದು ಮಾಧ್ಯಮಗಳು ವರದಿ ಮಾಡಿವೆ.

ಡಿಕೆಶಿ, ಸಿದ್ದು ಜೊತೆ ರಾಹುಲ್ ಪ್ರತ್ಯೇಕವಾಗಿ ಮಾತುಕತೆ
ಕೆಲವು ದಿನಗಳ ಹಿಂದೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿತ್ತು. ಕೋಲಾರ ಭಾಗದ ಪ್ರಭಾವೀ ನಾಯಕರಾದ ಕೊತ್ತೂರು ಮಂಜುನಾಥ್ ಮತ್ತು ಡಾ.ಎಂ.ಸಿ.ಸುಧಾಕರ್ ಇವರಿಬ್ಬರು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಆ ವೇಳೆ, ಡಿಕೆಶಿ ಮತ್ತು ಸಿದ್ದು ಜೊತೆ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದರು.

ಸಿದ್ದರಾಮಯ್ಯನವರಿಗೆ ಕೆಲವೊಂದು ಸೂಚನೆ

ಸಾಮೂಹಿಕ ನಾಯಕತ್ವವೋ ಅಥವಾ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯನವರ ನೇತೃತ್ವವೋ ಎನ್ನುವ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಜೋರಾಗಿದೆ. ಈ ವೇಳೆ, ಇಬ್ಬರು ನಾಯಕರನ್ನು ರಾಹುಲ್ ದೆಹಲಿಗೆ ಕರೆಸಿಕೊಂಡಿದ್ದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ, ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರಿಗೆ ಕೆಲವೊಂದು ಸೂಚನೆಯನ್ನು ನೀಡಿದ್ದಾರೆಂದು ವರದಿಯಾಗಿದೆ. ಕೆಲವೊಬ್ಬರ ಬಗ್ಗೆ ಮಾತನಾಡಬಾರದು ಎನ್ನುವ ತಾಕೀತನ್ನು ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಜೆಡಿಎಸ್ ವರಿಷ್ಠ ದೇವೇಗೌಡರ ಕುಟುಂಬ

ಜೆಡಿಎಸ್ ವರಿಷ್ಠ ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡದಂತೆ ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿಯವರನ್ನು ಟಾರ್ಗೆಟ್ ಮಾಡಬಾರದು, ಇದರಿಂದ ಪಕ್ಷಕ್ಕೆ ಆಗುವ ಲಾಭವೇನೂ ಇಲ್ಲ ಎಂದು ರಾಹುಲ್ ಸಿದ್ದುಗೆ ಹೇಳಿದ್ದಾರೆ. ಹಿರಿಯ ನಾಯಕರ ಬಗ್ಗೆ ಹೇಳಿಕೆ ನೀಡುವಾಗ, ಪಕ್ಷಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಎಐಸಿಸಿಯ ಆಂತರಿಕ ವರದಿಯೂ ಇದನ್ನೇ ಹೇಳುತ್ತಿದೆ ಎಂದು ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ದಳಪತಿಗಳ ಬಗ್ಗೆ ತೀರಾ ಅವಶ್ಯಕತೆಯಿದ್ದರೆ ಮಾತ್ರ ಹೇಳಿಕೆ

ನಿಮ್ಮನ್ನು ದಳಪತಿಗಳು ಟಾರ್ಗೆಟ್ ಮಾಡಿದರೆ ಅದಕ್ಕೆ ತಕ್ಷಣಕ್ಕೆ ಪ್ರತಿಕ್ರಿಯೆ ನೀಡಬೇಡಿ, ಅದೇ ಸಮುದಾಯದ ನಾಯಕರಿಂದ ಉತ್ತರ ಕೊಡಿಸಿ. ಕುಮಾರಸ್ವಾಮಿಯವರನ್ನು ಟಾರ್ಗೆಟ್ ಮಾಡಿದ್ದರಿಂದ ಜೆಡಿಎಸ್ ಪ್ರಾಭಲ್ಯವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆಯಾಗಿದೆ. ಹಾಗಾಗಿ, ದಳಪತಿಗಳ ಬಗ್ಗೆ ತೀರಾ ಅವಶ್ಯಕತೆಯಿದ್ದರೆ ಮಾತ್ರ ಹೇಳಿಕೆಯನ್ನು ನೀಡಿ ಎಂದು ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರಿಗೆ ಕಿವಿಮಾತನ್ನು ಹೇಳಿದ್ದಾರೆಂದು ವರದಿಯಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಸ್‌ಪೋರ್ಟ್ ಹಿಂತಿರುಗಿಸುವಂತೆ ಮುಂಬೈ ಕೋರ್ಟ್ ಹೋದ ಆರ್ಯನ್!

Sat Jul 2 , 2022
ಡ್ರಗ್ ಕೇಸ್‌ನಲ್ಲಿ ಶಾರುಖ್ ಖಾನ್ ಪುತ್ರಸ ಆರ್ಯನ್ ಖಾನ್‌ಗೆ ಎನ್‌ಸಿಬಿಯಿಂದ ಕ್ಲೀನ್ ಚಿಟ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಆರ್ಯನ್ ಖಾನ್‌ ಮುಂಬೈ ಕೋರ್ಟ್ ಮೆಟ್ಟಿಲೇರಿದ್ದಾರೆ. ಜಾಮೀನು ಬಾಂಡ್‌ ಅನ್ನು ಕ್ಯಾನ್ಸಲ್ ಮಾಡಿ ಪಾಸ್‌ಪೋರ್ಟ್ ಅನ್ನು ಹಿಂತಿರುಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಆರ್ಯನ್ ಖಾನ್ ಜಾಮೀನು ನೀಡುವ ವೇಳೆ ನ್ಯಾಯಾಲಯ ಪಾಸ್‌ಪೋರ್ಟ್ ಒಪ್ಪಿಸಿದ ಬಳಿಕ ಜಾಮೀನನ್ನು ಮಂಜೂರು ಮಾಡಿತ್ತು. ಬಾಂಬೆ ಹೈ ಕೋರ್ಟ್ ಆದೇಶದ ಮೇರೆಗೆ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ವಿಶೇಷ ನ್ಯಾಯಾಲಯಕ್ಕೆ […]

Advertisement

Wordpress Social Share Plugin powered by Ultimatelysocial