ಬ್ಯಾನರ್‌ನಲ್ಲಿ ಮುನಿಯಪ್ಪ ಅವರ ಭಾವಚಿತ್ರ ಹಾಕಿಲ್ಲ ಎಂದು ಅವರ ಬಣದವರು ಆಕ್ಷೇಪ ತೆಗೆದರು!

ಕೋಲಾರ: ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ ‘ಸಿದ್ದರಾಮಯ್ಯ 75’ ಕಾರ್ಯಕ್ರಮಕ್ಕೆ ಸಿದ್ಧತೆ ಸಂಬಂಧಿಸಿದಂತೆ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಬಣ ಹಾಗೂ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಬಣದ ನಡುವೆ ಕಿತ್ತಾಟ ನಡೆಯಿತು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯಲ್ಲಿ ಉಭಯ ಬಣಗಳ ನಾಯಕರು ಪರಸ್ಪರ ಕೈಮಿಲಾಯಿಸುವ ಹಂತ ತಲುಪಿದ್ದರು. ಈ ಜಗಳವನ್ನು ಚಿತ್ರೀಕರಿಸಲು ಮುಂದಾದ ಮಾಧ್ಯಮದವರ ಮೇಲೆ ರಮೇಶ್ ಕುಮಾರ್ ಕೈ ಮಾಡಿ ತಳ್ಳಿದರು.

ಬ್ಯಾನರ್‌ನಲ್ಲಿ ಮುನಿಯಪ್ಪ ಅವರ ಭಾವಚಿತ್ರ ಹಾಕಿಲ್ಲ ಎಂದು ಅವರ ಬಣದವರು ಆಕ್ಷೇಪ ತೆಗೆದರು. ಮುನಿಯಪ್ಪ ಬೆಂಬಲಿಗ ಹಾಗೂ ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ಮಾತನಾಡಿ, ‘ನಿಮ್ಮನ್ನೆಲ್ಲಾ ಕಾಂಗ್ರೆಸ್‌ಗೆ ಕರೆ ತಂದಿದ್ದೇ ಮುನಿಯಪ್ಪ’ ಎನ್ನುತ್ತಿದ್ದಂತೆ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಅವರ ಕೋಪ ನೆತ್ತಿಗೇರಿತು. ಆಗ ಮತ್ತೆ ಬೆಂಬಲಿಗರ ಕಿತ್ತಾಟ ಆರಂಭವಾಯಿತು.ಸಿದ್ದರಾಮಯ್ಯ 75-ಸಿದ್ಧತಾ ಸಭೆ

ಕೆಪಿಸಿಸಿ ಉಪಾಧ್ಯಕ್ಷ, ಕೋಲಾರ ಉಸ್ತುವಾರಿ ಕೆ.ನಾರಾಯಣಸ್ವಾಮಿ ಮಾತನಾಡಿ, ‘ಭಿನ್ನಾಭಿಪ್ರಾಯ ಸಹಜ. ಆದರೆ ಅದನ್ನು ಪಕ್ಷದ ಮುಖಂಡರ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ಅಶಿಸ್ತನ್ನು ಪಕ್ಷ ಸಹಿಸಲ್ಲ. ಶಿಸ್ತು ಕ್ರಮ ಜರುಗಿಸಲು ಕೆಪಿಸಿಸಿ ಅಧ್ಯಕ್ಷರೇ ಅಧಿಕಾರ ನೀಡಿದ್ದಾರೆ’ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಶಾಸಕರಾದ ರಮೇಶ್ ಕುಮಾರ್, ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎರಡೂ ಬಣಗಳ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹಿಂದೂ ಪಕ್ಷ ಹುಟ್ಟುಹಾಕಲು ನೀವೇ ಕಾರಣರಾಗುತ್ತೀರಿ: ಮುತಾಲಿಕ್ ಎಚ್ಚರಿಕೆ

Fri Jul 29 , 2022
ಮಂಗಳೂರು, ಜುಲೈ, 29: ಪ್ರವೀಣ್‌ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್‌ ಬರದಂತೆ ನಿರ್ಬಂಧ ಹೇರಲಾಗಿತ್ತು. ಆದರೆ ಪ್ರವೇಶ‌ ಗಡಿಭಾಗದಲ್ಲೇ ಕುಳಿತು ಮುತಾಲಿಕ್‌ ಪ್ರವೇಶ ನಿರ್ಬಂಧವನ್ನು ವಿರೋಧಿಸಿದ್ದಾರೆ. ಕೋಮು ಸೂಕ್ಷ್ಮ ಪರಿಸ್ಥಿತಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದು […]

Advertisement

Wordpress Social Share Plugin powered by Ultimatelysocial