ಸಿದ್ಧಲಿಂಗಯ್ಯನವರು ಕನ್ನಡ ನಾಡಿನ ಪ್ರಸಿದ್ಧ ಸಾಹಿತಿಗಳಲ್ಲೊಬ್ಬರು.

ಸಿದ್ಧಲಿಂಗಯ್ಯನವರು ಬಡ ಕುಟುಂಬವೊಂದರಲ್ಲಿ ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ 1954ರ ಫೆಬ್ರವರಿ 3ರಂದು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ ಜನಿಸಿದರು.
ಮಾಗಡಿಯ ಹೊಸಹಳ್ಳಿಯ ಬಿಸಿಲಮ್ಮನ ಗುಡಿಯಲ್ಲಿ ಅಕ್ಷರಾಭ್ಯಾಸ ಪ್ರಾರಂಭಿಸಿದ ಸಿದ್ಧಲಿಂಗಯ್ಯನವರು 1974ರ ವರ್ಷದಲ್ಲಿ ಬೆಂಗಳೂರಿನ ಸರಕಾರಿ ಕಲಾಕಾಲೇಜಿನಿಂದ ಬಿ.ಎ. ಆನರ್ಸ್ (ಐಚ್ಛಿಕ ಕನ್ನಡ) ಪದವಿಯನ್ನು ಪಡೆದರಲ್ಲದೆ, 1976ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪ್ರೊ. ಡಿ.ಎಲ್‌. ನರಸಿಂಹಾಚಾರ್ಯರ ಸ್ವರ್ಣಪದಕದೊಂದಿಗೆ ಪ್ರಥಮ ಶ್ರೇಣಿಯಲ್ಲಿ ಎಂ.ಎ. ಪದವಿಯನ್ನೂ, ಪ್ರೊ. ಜಿ.ಎಸ್‌. ಶಿವರುದ್ರಪ್ಪನವರ ಮಾರ್ಗದರ್ಶನದಲ್ಲಿ ‘ಗ್ರಾಮದೇವತೆಗಳು’ ಎಂಬ ಪ್ರೌಢ ಪ್ರಬಂಧವನ್ನು ಮಂಡಿಸಿ 1989ರಲ್ಲಿ ಪಿಎಚ್‌.ಡಿ. ಪದವಿಯನ್ನು ಗಳಿಸಿದರು.ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಸಿದ್ಧಲಿಂಗಯ್ಯನವರು, ಪ್ರಾಧ್ಯಾಪಕರಾಗಿ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.
ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿನ ಅಸಮಾನತೆಗಳ ಬಗ್ಗೆ ತಮ್ಮೊಳಗೆ ಮೊಳೆಯುತ್ತಿದ್ದ ಸಿಟ್ಟು, ಆಕ್ರೋಶಗಳನ್ನು ವ್ಯಕ್ತಿಪಡಿಸಲು ಸಿದ್ಧಲಿಂಗಯ್ಯನವರು ಆಯ್ದುಕೊಂಡದ್ದು ಕಾವ್ಯ ಮಾಧ್ಯಮ. ಹೀಗೆ ಅವರು ಬರೆದ ಹಲವಾರು ಕವನಗಳ ಸಂಕಲನ ‘ಹೊಲೆಮಾದಿಗರ ಹಾಡು’ 1975ರಲ್ಲಿ ಪ್ರಕಟಗೊಂಡಿತು. ಮುಂದೆ ಅವರ ‘ಸಾವಿರಾರು ನದಿಗಳು’, ‘ಕಪ್ಪುಕಾಡಿನ ಹಾಡು’, ‘ಮೆರವಣಿಗೆ’, ‘ನನ್ನ ಜನಗಳು ಮತ್ತು ಇತರ ಕವಿತೆಗಳು’, ‘ಆಯ್ದ ಕವನಗಳು’ ಮುಂತಾದ ಕವನ ಸಂಕಲನಗಳು ಪ್ರಕಟಗೊಂಡಿವು.
ಸಿದ್ಧಲಿಂಗಯ್ಯನವರ ‘ಪಂಚಮ ಮತ್ತು ನೆಲಸಮ’, ‘ಏಕಲವ್ಯ’ ಪ್ರಮುಖ ನಾಟಕಗಳಾದರೆ ‘ಅವತಾರಗಳು’ ಪ್ರಬಂಧ ಕೃತಿ. ಇವಲ್ಲದೆ ರಸಗಳಿಗೆಗಳು, ಎಡಬಲ, ಹಕ್ಕಿನೋಟ, ಜನಸಂಸ್ಕೃತಿ, ಉರಿಕಂಡಾಯ ಮುಂತಾದ ಲೇಖನ ಸಂಗ್ರಹಗಳು, ಸದನದಲ್ಲಿ ಸಿದ್ಧಲಿಂಗಯ್ಯ ಭಾಗ ೧-೨ ಮತ್ತು ಆತ್ಮಕಥನ ಊರು-ಕೇರಿ ಭಾಗ ೧-೨ ಪ್ರಕಟಗೊಂಡಿವೆ. ಬೆಂಗಳೂರು ವಿಶ್ವವಿದ್ಯಾಲಯದ ಪ್ರಸಾರಂಗಕ್ಕಾಗಿ ‘ಸಮಕಾಲೀನ ಕನ್ನಡ ಕವಿತೆಗಳು’ ಭಾಗ-೩ ಮತ್ತು ಭಾಗ-೪ ನ್ನು ಸಂಪಾದಿಸಿಕೊಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರತಿ ದಿನ ಇಷ್ಟು ಬಾದಾಮಿ ಸೇವಿಸಿದ್ರೆ ಹತ್ತಿರ ಬರಲ್ಲ 'ಕ್ಯಾನ್ಸರ್'

Sat Feb 4 , 2023
ಒಣ ಹಣ್ಣುಗಳಲ್ಲಿ ಬಾದಾಮಿ ಪ್ರಾಮುಖ್ಯತೆ ಪಡೆದಿದೆ. ಪ್ರತಿದಿನ 20 ಗ್ರಾಂ ಬಾದಾಮಿ ತಿನ್ನುವುದರಿಂದ ಕ್ಯಾನ್ಸರ್, ಹೃದ್ರೋಗ ಸೇರಿದಂತೆ ಅನೇಕ ಕಾಯಿಲೆಗಳನ್ನು ತಡೆಯಬಹುದು. ಸಂಶೋಧನೆಯ ಪ್ರಕಾರ, ಪ್ರತಿದಿನ ಬೆರಳೆಣಿಕೆಯಷ್ಟು ಬಾದಾಮಿ ತಿನ್ನುವುದರಿಂದ ಜನರಲ್ಲಿ ಹೃದ್ರೋಗಗಳ ಅಪಾಯವು ಸುಮಾರು ಶೇಕಡಾ 30ರಷ್ಟು ಕಡಿಮೆಯಾಗುತ್ತದೆ. ಇದು ಕ್ಯಾನ್ಸರ್ ಅಪಾಯವನ್ನು ಶೇಕಡಾ 15 ರಷ್ಟು ಮತ್ತು ಅಕಾಲಿಕ ಮರಣದ ಅಪಾಯವನ್ನು ಶೇಕಡಾ 22 ರಷ್ಟು ಕಡಿಮೆ ಮಾಡುತ್ತದೆ. ಸಂಶೋಧಕರ ಪ್ರಕಾರ, ಬಾದಾಮಿಯಲ್ಲಿ ಫೈಬರ್, ಮೆಗ್ನೀಸಿಯಮ್ ಅಧಿಕವಾಗಿದೆ. […]

Advertisement

Wordpress Social Share Plugin powered by Ultimatelysocial