ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ.

ನಂಜನಗೂಡಿನಲ್ಲಿ ಸಚಿವ ಅಶ್ವತ್ ನಾರಾಯಣ್ ವಿರುದ್ಧ ಕಾಂಗ್ರೆಸ್ಸಿಗರು ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ಟಿಪ್ಪು ಸುಲ್ತಾನ್ ಹತ್ಯೆ ಮಾಡಿದಂತೆ ಸಿದ್ದರಾಮಯ್ಯ ಅವರನ್ನು ಹತ್ಯೆ ಮಾಡಬೇಕು ಎಂದು ಬಿಜೆಪಿ ಸಭೆ ಒಂದರಲ್ಲಿ ಮಾತನಾಡಿದ್ದ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯನ್ನು ಖಂಡಿಸಿ ಇಂದು ನಂಜನಗೂಡು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು ರಾಷ್ಟ್ರೀಯ ಹೆದ್ದಾರಿ 612ರ ಹುಲ್ಲಹಳ್ಳಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು ಸಚಿವ ಅಶ್ವಥ್ ನಾರಾಯಣ್ ಪ್ರತಿಕೃತಿಗೆ ಚಪ್ಪಲಿ ಸೇವೆ ಮಾಡಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು ಬಿಜೆಪಿ ಸರ್ಕಾರಗಳ ಹಾಗೂ ಸಚಿವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಸಿದ್ದರಾಮಯ್ಯಪರ ಜಯಕಾರದ ಘೋಷಣೆಗಳನ್ನು ಕೂಗಿದರು ಬಳಿಕ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯನ್ನು ಖಂಡಿಸಿ ಇಂದು ನಂಜನಗೂಡಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಸರ್ಕಾರ ಕೂಡಲೇ ಸಚಿವ ಅಶ್ವತ್ ನಾರಾಯಣ್ ಅವರನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ತಾಸಿಲ್ದಾರ್ ಶಿವಮೂರ್ತಿಯವರಿಗೆ ಪ್ರತಿಭಟನಾಕಾರರು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಅಶ್ವಥ್ ನಾರಾಯಣ್ ಅವರನ್ನು ಕೈ ಬಿಡುವಂತೆ ಒಪ್ಪಾಯಿಸಿದರು.ರಸ್ತೆ ತಡೆ ಪ್ರತಿಭಟನೆಯಿಂದಾಗಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತುಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಬಿ ರಾಮು ಎಸ್ ಸಿ ಬಸವರಾಜು ತಾಲೂಕು ಕುರುಬ ಸಂಘದ ಅಧ್ಯಕ್ಷರಾದ ಕೆಂಪಣ್ಣ ,ಕುರಿಹುಂಡಿ ರಾಜು,ಮುಖಂಡರುಗಳಾದ ಇಂಧನ್ ಬಾಬು , ಮಹದೇವಪ್ಪ,ಅಜ್ಗರ್ ,ನಾಗರಾಜ್ ,ಸೇರಿದಂತೆ ನಗರಸಭಾ ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಕಾರ್ಯಕರ್ತ ಮುಖಂಡರುಗಳು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರೌಢ ಶಾಲೆ ಶಿಕ್ಷಕ ಶಂಕ್ರಪ್ಪ ಬೋರೆಡ್ಡಿ ಬೆಂಗಳೂರಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ.

Thu Feb 23 , 2023
  ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅನುದಾನಿತ ರಡ್ಡಿ ಪ್ರೌಢ ಶಾಲೆ ಶಿಕ್ಷಕ ಶಂಕರಪ್ಪ ಬೋರಡಿ ಬೆಂಗಳೂರಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಅನುದಾನಿತ ಶಾಲೆ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಬೆಂಗಳೂರಿಗೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಲಾ ಶಿಕ್ಷಕ ಶಂಕ್ರಪ್ಪ ಬೋರೆಡ್ಡಿ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದ್ದೆ.ಅನುದಾನಿತ ಶಾಲೆ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಕಳೆದ 140 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ […]

Advertisement

Wordpress Social Share Plugin powered by Ultimatelysocial