ಸಿದ್ದರಾಮಯ್ಯ ಕಾರಣದಿಂದ 61 ಕಾಂಗ್ರೆಸ್ ನಾಯಕರು ಪಕ್ಷ ತೊರೆದರು’

ತುಮಕೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡರು. ಹೆಸರು ಮಾತ್ರ ರಾಮಂದು, ಮುಖ ರಾವಣಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ತುಮಕೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿ ಬಗ್ಗೆ ಯೋಚನೆ ಮಾಡಿದ ಸಿದ್ದರಾಮಯ್ಯ, ರೈತರ ಬದುಕು ಹಸನು ಮಾಡುವ ಬಗೆ ಯೋಚನೆ ಮಾಡಲಿಲ್ಲ. ರೈತರ ಶಾಪ ಕಾಂಗ್ರೆಸ್‌ಗೆ ತಟ್ಟಿದೆ. ಹಾಗಾಗಿ ಅನೇಕ ನಾಯಕರು ಕಾಂಗ್ರೆಸ್ ತೊರೆದಿದ್ದರು. ಅತಿ ಹೆಚ್ಚು ಗೋ ಹತ್ಯೆ ನಡೆದಿದ್ದು ಸಿದ್ದರಾಮಯ್ಯ ಕಾಲದಲ್ಲಿ ಎಂದು ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯನವರ ಕಾರಣದಿಂದ 61 ಮಂದಿ ಕಾಂಗ್ರೆಸ್ ನಾಯಕರು ಪಕ್ಷ ತೊರೆದಿದ್ದಾರೆ, ಎಂದು ಹೇಳಿದ ಅವರ ಅವರ ಹೆಸರು ಹೇಳಲು ಹೇಳಲಿಲ್ಲ.

ಕುವೆಂಪು ಅವರ ಹಾಡನ್ನು ರೈತ ಗೀತೆ ಮಾಡಿದ್ದು ನಮ್ಮ ಯಡಿಯೂರಪ್ಪನವರ ಸರ್ಕಾರ. ಕಾಂಗ್ರೆಸ್ ರೈತರು ದೇಶದ ಬೆನ್ನೆಲಬು ಎಂದರು. ಆದರೆ, ಯಾವತ್ತೂ ರೈತರ ಬೆನ್ನಿಗೆ ನಿಲ್ಲಲಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಕಿಸಾನ್ ಸಮ್ಮಾನ್‌ ಯೋಜನೆ, ಫಸಲ್ ಭೀಮಾ‌ ಯೋಜನೆ ಮೂಲಕ ರೈತರ ಬೆನ್ನಿಗೆ ನಿಂತಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗಂಜಿ ಕೇಂದ್ರದ ಆಸೆಗಾಗಿ ಆರ್​ಎಸ್​ಎಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿದ್ದರಾಮಯ್ಯ ಟ್ವೀಟ್​ಗೆ ತಿರುಗೇಟು ನೀಡಿದ್ದಾರೆ. ಇಟಲಿ ಮೂಲದ ನಾಯಕರಿಗೆ ಹತ್ತಿರವಾಗಲು ಸಿದ್ದರಾಮಯ್ಯ ಆ ರೀತಿಯ ಹೇಳಿಕೆ ನೀಡ್ತಿದ್ದಾರೆ. ಇನ್ಮೇಲೆ ನಾನು ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಬಾರದೆಂದು ತೀರ್ಮಾನಿಸಿದ್ದೇನೆ ಎಂದು ಜೋಶಿ ಹೇಳಿದರು. ಸಿದ್ದರಾಮಯ್ಯ ಓರ್ವ ಡ್ಯುಪ್ಲಿಕೇಟ್ ಕಾಂಗ್ರೆಸ್​ನ ಡ್ಯುಪ್ಲಿಕೇಟ್ ಲೀಡರ್.

ನಾವ್ಯಾರೂ ಕೇವಲ ಬಿಜೆಪಿಯವರೇ ಹಿಂದೂಗಳೆಂದು ಹೇಳಿಲ್ಲ. ಸದ್ಯ ಇವರು ನಾವು ಹಿಂದೂಗಳೆಂದು ಹೇಳುತ್ತಿದ್ದಾರೆ ಅನ್ನೋದೇ ಸಂತೋಷ. ಈ ಹಿಂದೆ ಇವರು ನಾವು ಹಿಂದೂಗಳೇ ಅಲ್ಲ ಎನ್ನುತ್ತಿದ್ದರು. ಇವಾಗ ಹಿಂದೂ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯ ನಾಯಕರನ್ನು ಪಕ್ಕಕ್ಕೆ ಸರಿಸಿ ಸಿದ್ದರಾಮಯ್ಯ ಸಿಎಂ ಆದರು, ಆದರೆ ಅವರಿಗೆ ಪಕ್ಷ ನಿಷ್ಠೆ ಇಲ್ಲ ಎಂದು ಜೋಶಿ ಆರೋಪಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಾತಿಗೆ ತೂಕವಿತ್ತು. ಈಗ ಅವರ ಮಾತನ್ನು ಅವರ ಪಕ್ಷದ ಕಾರ್ಯಕರ್ತರೇ ಕೇಳುತ್ತಿಲ್ಲ. ಅವರ ಮಾತಿಗೆ ಕಿಮ್ಮತ್ತು ಇಲ್ಲ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್ ತಿಳಿಸಿದರು. ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣನೆ ಮಾಡಿರುವುದರಿಂದ ಆರ್‌ಎಸ್‌ಎಸ್‌, ಟೀಕಿಸಿ ಮುಂಚೂಣಿಗೆ ಬರಲು ಯತ್ನಿಸುತ್ತಾರೆ. ಸಿದ್ದರಾಮಯ್ಯ ಆರ್‌ಎಸ್‌ಎಸ್‌ ಬಗ್ಗೆ ಅಧ್ಯಯನ ಮಾಡಿಲ್ಲ. ಅವರಿಗೆ ಆ ಕುರಿತು ಕನಿಷ್ಠ ಜ್ಞಾನವೂ ಇಲ್ಲ. ಅವರನ್ನು ಒಮ್ಮೆ ಆರ್‌ಎಸ್‌ಎಸ್‌ ಕಚೇರಿಗೆ ಕರೆದೊಯ್ಯುತ್ತೇವೆ. ಅವರು ಅಲ್ಲಿನ ಕಾರ್ಯಕ್ರಮಗಳ ಬಗ್ಗೆ ಅಧ್ಯಯನ ಮಾಡಲಿ. ಇಲ್ಲವೇ ಆರ್‌ಎಸ್‌ಎಸ್‌ ಕುರಿತ ಪುಸ್ತಕ ನೀಡುತ್ತೇವೆ. ಆಗಲಾದರೂ ಅವರಿಗೆ ಆರ್‌ಎಸ್‌ಎಸ್‌ ಮಾಡುವ ಸಮಾಜಮುಖಿ ಕಾರ್ಯಗಳು ಅರ್ಥವಾಗಬಹುದು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಮಾನ ಪತನವಾದ ಸ್ಥಳ ಪತ್ತೆ ಮಾಡಿದ ಸೇನೆ !

Mon May 30 , 2022
ನೇಪಾಳ: ಭಾನುವಾರ ನೇಪಾಳದ ಖಾಸಗಿ ಏರ್‌ಲೈನ್ಸ್ ವಿಮಾನ ಪತನಗೊಂಡ ಅಪಘಾತದ ಸ್ಥಳವನ್ನು ಭೌತಿಕವಾಗಿ ನೇಪಾಳ ಸೇನೆ ಇಂದು ಪತ್ತೆ ಮಾಡಿದೆ ಎಂದು ಅದರ ವಕ್ತಾರ ಬ್ರಿಗೇಡಿಯರ್ ಜನರಲ್ ನಾರಾಯಣ್ ಸಿಲ್ವಾಲ್ ತಿಳಿಸಿದ್ದಾರೆ. ಶೋಧನೆ ಮತ್ತು ರಕ್ಷಣಾ ಪಡೆಗಳು ವಿಮಾನ ಅಪಘಾತದ ಸ್ಥಳವನ್ನು ಭೌತಿಕವಾಗಿ ಪತ್ತೆಹಚ್ಚಿವೆ. ಇದರ ವಿವರಗಳನ್ನು ಅನುಸರಿಸಲಾಗುವುದು ಎಂದು ನೇಪಾಳ ಸೇನಾ ವಕ್ತಾರರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ತಾರಾ ಏರ್‌ನ 9 NAET ಅವಳಿ-ಎಂಜಿನ್ ವಿಮಾನವು ನಾಲ್ವರು ಭಾರತೀಯರು ಸೇರಿದಂತೆ […]

Advertisement

Wordpress Social Share Plugin powered by Ultimatelysocial