ಆರ್‌ಎಸ್‌ಎಸ್‌ ಕಂಡರೆ ತಮಗೆ ಭಯವಿದೆ ಎಂದು ಒಪ್ಪಿಕೊಂಡಿರುವ ಸಿದ್ದರಾಮಯ್ಯ

ಬೆಂಗಳೂರು, ಜೂ.2- ಆರ್‌ಎಸ್‌ಎಸ್‌ ಕಂಡರೆ ತಮಗೆ ಭಯವಿದೆ ಎಂದು ಒಪ್ಪಿಕೊಂಡಿರುವ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಅದಕ್ಕೆ ಸೂಕ್ತ ಸಮರ್ಥನೆ ಮೂಲಕ ಮತ್ತೆ ಸಂಘ ಪರಿವಾರದ ವಿರುದ್ಧ ಹರಿ ಹಾಯ್ದಿದ್ದಾರೆ.

ಆರ್‌ಎಸ್‌ಎಸ್‌ ಕಂಡರೆ ನನಗೆ ಭಯ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್‌ಎಸ್‌ಎಸ್‌ ಕಂಡರೆ ಭಯ ಇದೆ.

ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಡಿ.ವಿ.ಸದಾನಂದಗೌಡರು ಯಾಕೆ ತನ್ನ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು. ಆರ್‌ಎಸ್‌ಎಸ್‌ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂೀಧಿಜಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್‌ ಮೇಲೆ ದೇಶದ ಮೊದಲ ಗೃಹಸಚಿವ ವಲ್ಲಭಭಾಯಿ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ.

ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ ಸಮುದಾಯಗಳಂತೆ ನನಗೂ ಆರ್‌ಎಸ್‌ಎಸ್‌ ಬಗ್ಗೆ ಭಯ ಇದೆ. ಮೀಸಲಾತಿ, ಭೂಸುಧಾರಣೆಯಂತಹ ಬಹುಸಂಖ್ಯೆಯ ಹಿಂದೂಗಳೇ ಫಲಾನುಭವಿಗಳಾಗಿರುವ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ ಆರ್‌ಎಸ್‌ಎಸ್‌ ಬಗ್ಗೆ ಭಯವಲ್ಲದೆ ಪ್ರೀತಿ ಇರಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ ಆರ್.ಎಸ್.ಎಸ್ ಬಗ್ಗೆ ಭಯ ಸಹಜ ಅಲ್ಲವೇ ಸದಾನಂದ ಗೌಡರೇ? ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ.

ಈ ಬಗ್ಗೆ ಆತ್ಮಾವಲೋಕನ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ. ಆರ್.ಎಸ್.ಎಸ್ ಉನ್ನತ ಪದಾಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ?ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ? ಎಂದು ಮತ್ತೆ ಕೆಣಕಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್

Thu Jun 2 , 2022
  ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ರೋಗ ಲಕ್ಷಣಗಳು ಹೊಂದಿರುವ ಕಾರಣದಿಂದ ಸೋನಿಯಾ ಗಾಂಧಿ ಅವರು ಐಸೋಲೇಟ್ ಆಗಿದ್ದಾರೆ ಎಂದು ವರದಿ ತಿಳಿಸಿದೆ. ಸೋನಿಯಾ ಗಾಂಧಿ ಅವರು ಕಳೆದೊಂದು ವಾರದಿಂದ ಪಕ್ಷದ ನಾಯಕರುಗಳ ಜೊತೆ ಸತತ ಸಭೆಯಲ್ಲಿ ತೊಡಗಿದ್ದಾರೆ. ಬುಧವಾರ ಸಂಜೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಸೋಂಕು ತಾಗಿರುವುದು ಪತ್ತೆಯಾಗಿದ್ದು, ಸದ್ಯ ಐಸೋಲೇಟ್ ಆಗಿದ್ದಾರೆ ಎಂದು […]

Advertisement

Wordpress Social Share Plugin powered by Ultimatelysocial