ರಾಜ್ಯಸಭಾ ಚುನಾವಣೆ; ಸಿದ್ದು-ಡಿಕೆಶಿ ತಿರುಮಂತ್ರ; ಜೆಡಿಎಸ್ ಗೆ ತೀವ್ರ ಹಿನ್ನಡೆ!

 

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಕಣದಿಂದ ಎರಡನೇ ಅಭ್ಯರ್ಥಿಯನ್ನು ವಾಪಾಸ್ ಪಡೆಯುವುದು ಬೇಡ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣ ಹೈಕಮಾಂಡ್ ಗೆ ಸ್ಪಷ್ಟಪಡಿಸಿದ್ದು, ಜೆಡಿಎಸ್ ಗೆ ತೀವ್ರ ಹಿನ್ನಡೆಯಾಗಿದೆ.

ದೇವನಹಳ್ಳಿ ಸಮೀಪ ನವ ಸಂಕಲ್ಪ ಸಭೆಯ ವೇಳೆ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಈ ಸಂಬಂಧ ಇಪ್ಪತ್ತು ನಿಮಿಷಗಳ ಕಾಲ ಚರ್ಚೆ ನಡೆಸಿ ನಿರ್ಧಾರಕ್ಕೆ ಬಂದಿದ್ದಾರೆ.

ಅನಂತರ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ ಎರಡನೇ ಅಭ್ಯರ್ಥಿ ಕಣದಲ್ಲಿ ಉಳಿಯಬೇಕು ಎಂಬುದು ತಮ್ಮಿಬ್ಬರ ಒಗ್ಗಟ್ಟಿನ ನಿಲುವು ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆಗೆ ಎರಡನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಯುವಂತೆ ಮಾಡಿದ್ದ ಸಿದ್ದರಾಮಯ್ಯ ಅವರು ಜೆಡಿಎಸ್‌ ಅಭ್ಯರ್ಥಿಗೆ ಗೆಲುವಿನ ಅವಕಾಶವೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದರು. ‌

ಖುದ್ದು ದೇವೇಗೌಡರು ತಮ್ಮ ಅಭ್ಯರ್ಥಿ ಉಳಿವಿಗಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮೂಲಕ ಹೈಕಮಾಂಡ್ ಮನವೊಲಿಸುವ ಪ್ರಯತ್ನ ನಡೆಸಿದ್ದರು. ಆದರೆ ಸಿದ್ದರಾಮಯ್ಯ ದಾಳದ ಮುಂದೆ ದೇವೇಗೌಡರ ಲೆಕ್ಕಾಚಾರ ಯಶಸ್ವಿಯಾಗಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಸಾಮ್ರಾಟ್ ಪೃಥ್ವಿರಾಜ್' ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಯೋಗಿ ಆದಿತ್ಯನಾಥ್

Fri Jun 3 , 2022
  ಉತ್ತರ ಪ್ರದೇಶದಲ್ಲಿ ಅಕ್ಷಯ್ ಕುಮಾರ್ ಅಭಿನಯದ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರಕ್ಕೆ ತೆರಿಗೆ ಮುಕ್ತಗೊಳಿಸಲಾಗಿದೆ. ಐತಿಹಾಸಿಕ ಆಧಾರಿತ ಚಿತ್ರವನ್ನು ತನ್ನ ಸಂಪುಟ ಸಹೋದ್ಯೋಗಿಗಳೊಂದಿಗೆ ಇಂದು ವೀಕ್ಷಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಿಸಿದರು. ಲಖನೌದ ಲೋಕಭವನದಲ್ಲಿ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾದ ವಿಶೇಷ ಪ್ರದರ್ಶವನ್ನು ಏರ್ಪಡಿಸಲಾಗಿತ್ತು. ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್, ಮಾನುಸಿ ಚಿಲ್ಲರ್ ಮತ್ತು ನಿರ್ದೇಶಕ ಚಂದ್ರ ಪ್ರಕಾಶ್ ದ್ವಿವೇದಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ […]

Advertisement

Wordpress Social Share Plugin powered by Ultimatelysocial