ರಾಜ್ಯಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಚರ್ಚೆಗೆ ಹೈಕಮಾಂಡ್‌ ಬುಲಾವ್‌: ಸಿದ್ದರಾಮಯ್ಯ

ಕಲಬುರಗಿ: ‘ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಚರ್ಚಿಸಲು ಹೈಕಮಾಂಡ್ ಬುಲಾವ್‌ ನೀಡಿದೆ. ಶನಿವಾರ (ಮೇ 21) ನಾನು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ನಹದೆಹಲಿಗೆ ತೆರಳಲಿದ್ದೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

‘ಹೆಚ್ಚುವರಿ ಮತಗಳ ಚಲಾವಣೆಗೆ ಮತ್ತೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆ ಅಥವಾ ಬೇರೆ ಏನು ಮಾಡಬಹುದು ಎಂಬ ಬಗ್ಗೆಯೂ ಚರ್ಚೆ ನಡೆಸಿ ನಿರ್ಧರಿಸುತ್ತೇವೆ’ ಎಂದು ಅವರು ನಗರದಲ್ಲಿ ಶುಕ್ರವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

ಮೂರುಕಾಸಿನ ಮುಂಜಾಗ್ರತೆ ಇಲ್ಲದ ಸರ್ಕಾರ:’ಮಳೆಯಿಂದಾಗಿ ಬೆಂಗಳೂರು ಅನುಭವಿಸುತ್ತಿರುವ ಬವಣೆಗೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಕಾರಣ. ಮಳೆ ವಿಚಾರದಲ್ಲಿ ಮೂರುಕಾಸಿನ ಮುಂಜಾಗ್ರತೆಯೂ ಈ ಸರ್ಕಾರಕ್ಕೆ ಇಲ್ಲ. ಜನವರಿಯಲ್ಲಿ ಪೂರ್ವಸಿದ್ಧತೆ ಮಾಡಿಕೊಂಡು, ಸಮಸ್ಯೆಯಾಗದಂತೆ ಕ್ರಮ ವಹಿಸಬೇಕಿತ್ತು. ಈಗ ಮಳೆ ಶುರುವಾದ ಮೇಲೆ ಪರಿಹಾರ ಘೋಷಿಸುತ್ತಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ₹ 1500 ಕೋಟಿ ಘೋಷಿಸಿದ್ದರು. ಒಂದು ಪೈಸೆ ಕೂಡ ಕೊಡಲಿಲ್ಲ. ಈಗ ಬೊಮ್ಮಾಯಿ ಅವರು ಮತ್ತೆ ₹ 1600 ಕೋಟಿ ಕೊಡುವುದಾಗಿ ಹೇಳಿದ್ದಾರೆ. ಇಂಥ ಭರವಸೆಗಳಿಂದ ಬೆಂಗಳೂರಿನ ಜನರ ಸಂಕಷ್ಟ ದೂರಾಗುವುದಿಲ್ಲ’ ಎಂದೂ ಕಿಡಿ ಕಾರಿದರು.

ಒತ್ತುವರಿಯಾದ ರಾಜಕಾಲುವೆಗಳನ್ನು ತೆರವು ಮಾಡುವುದೊಂದೇ ಇದಕ್ಕೆ ಪರಿಹಾರ. ನಾನು ಅಧಿಕಾರದಲ್ಲಿದ್ದಾಗ ಒತ್ತುವರಿ ತೆರವು ಕೆಲಸ ಶುರು ಮಾಡಿದೆ. ಆದರೆ, ನಂತರ ಬಂದವರು ಅದಕ್ಕೂ ಮಣ್ಣು ಮುಚ್ಚಿದರು’ ಎಂದರು.

‘ಬೆಂಗಳೂರಿನ ಚಿತ್ರಣವನ್ನೇ ಬದಲಾಯಿಸುತ್ತೇನೆ’ ಎಂದು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಹೇಳಿಕೊಂಡಿದ್ದರು. ಅವರಿಂದ ಇನ್ನಷ್ಟು ಹಾಳಾಯಿತೇ ಹೊರತು; ಸುಧಾರಣೆ ಆಗಲಿಲ್ಲ. ಎಚ್‌.ಡಿ. ಕುಮಾರಸ್ವಾಮಿ ತಮ್ಮ ಅವಧಿಯಲ್ಲಿ 110 ಹಳ್ಳಿಗಳನ್ನು ಸೇರ್ಪಡೆ ಮಾಡಿ ಬೆಂಗಳೂರು ವಿಸ್ತರಣೆ ಮಾಡಿದರು. ಆದರೆ, ಅಲ್ಲಿ ಕನಿಷ್ಠ ಮೂಲ ಸೌಕರ್ಯ ನೀಡಲಿಲ್ಲ. ಇದೇ ಕಾರಣಕ್ಕೆ ಇಂದು ಸಮಸ್ಯೆ ಎದುರಾಗಿದೆ’ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ಮಳೆ: ಬಿಬಿಎಂಪಿ, ಬೆಸ್ಕಾಂ ಸಹಾಯವಾಣಿಗೆ ದೂರುಗಳ ಸುರಿಮಳೆ

Fri May 20 , 2022
ಬೆಂಗಳೂರು, ಮೇ 19: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಬಿಬಿಎಂಪಿ, ಬೆಸ್ಕಾಂ ಸಹಾಯವಾಣಿಗೆ ಬರುತ್ತಿರುವ ದೂರುಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಮಳೆ ಅವಾಂತರದ ಬಗ್ಗೆ ಜನರು ದೂರು ನೀಡುತ್ತಲೇ ಇದ್ದಾರೆ. ಪ್ರತಿ ದಿನ ಬಿಬಿಎಂಪಿ ಸಹಾಯವಾಣಿಗೆ ಸಾಮಾನ್ಯವಾಗಿ 150 ಕರೆಗಳು ಬರುತ್ತವೆ. ಆದರೆ ನಗರದಲ್ಲಿ ಮಳೆಯಾದ ನಂತರ ಕರೆಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದ್ದು ಪ್ರತಿದಿನ ಸುಮಾರು 500 ಕರೆಗಳು ಬರುತ್ತಿವೆ. ಬಿಬಿಎಂಪಿಗೆ ಬರುತ್ತಿರುವ ಕರೆಗಳಲ್ಲಿ ಪ್ರಮುಖವಾಗಿ […]

Advertisement

Wordpress Social Share Plugin powered by Ultimatelysocial