ಜನರ ಗಮನ ಬೇರೆಡೆ ಸೆಳೆಯಲು ಮತಾಂತರ ನಿಷೇಧ ಕಾಯ್ದೆಗೆ ಸುಗ್ರಿವಾಜ್ಞೆ:

ಬೆಂಗಳೂರು, ಮೇ 13- ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿ ಮಾಡಲು ಮುಂದಾಗಿದ್ದು, ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ಮನವಿ ಮಾಡಿದ್ದಾರೆ.

ಆಮಿಷ,ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ? ಎಂದು ಪ್ರಶ್ನಿಸಿದ್ದಾರೆ.

ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು ಎಂದು ಕರೆ ನೀಡಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರು ಮತ್ತು ಅವರ ಪೂಜಾಸ್ಥಳಗಳ ಮೇಲೆ ದಾಳಿ ನಡೆಯವುದಕ್ಕೆ ದೇಶ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಚರ್ಚ್ ಗಳ ಮೇಲೆ ನಡೆದಿರುವ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ತರಾತುರಿಯ ಮತಾಂತರ ನಿಷೇಧ ಕಾಯ್ದೆ ಇಂತಹ ದಾಳಿಗೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವೇ ಬೊಮ್ಮಾಯಿಯವರೇ ಎಂದು ಕಿಡಿಕಾರಿದ್ದಾರೆ.

ಸ್ವಯೀಚ್ಛೆಯಿಂದ ಮತಾಂತರಗೊಳ್ಳುವ ಹಕ್ಕು ಸಂವಿಧಾನವೇ ನೀಡಿದೆ. ಇದರ ಹೊರತಾದ ಮತಾಂತರ ತಡೆಯಲು ಕಾನೂನು ಇದೆ. ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು-ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ಸರ್ಕಾರಕ್ಕೆ ನಂಬಿಕೆ ಇಲ್ಲವೇ? ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಕಾಯ್ದೆಯ ದುರುಪಯೋಗವನ್ನು ತಡೆಯಲು ಕಾಂಗ್ರೆಸ್ ಪಕ್ಷ ಖಂಡಿತ ಅವಕಾಶ ನೀಡುವುದಿಲ್ಲ.

ಅನ್ಯಾಯ-ದೌರ್ಜನ್ಯಕ್ಕೊಳಗಾಗುವ ಪ್ರತಿಯೊಬ್ಬ ಅಲ್ಪಸಂಖ್ಯಾತ ಬಂಧುವಿನ ಜೊತೆ ನಮ್ಮ ಪಕ್ಷ ನಿಲ್ಲಲಿದ್ದು ಈ ಕಾಯ್ದೆಯ ವಿರುದ್ದ ನಮ್ಮ ಪಕ್ಷ ಜನಾಂದೋಲನ ನಡೆಸಲಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೆಡಿಎಸ್ ಜನತಾ ಜಲಧಾರೆಗೆ ಜನ ಸಾಗರ; ತಂದೆ-ತಾಯಿ ಆಶೀರ್ವಾದ ಪಡೆದು ಬಂದ HDK

Fri May 13 , 2022
  ಬೆಂಗಳೂರು : ನೆಲಮಂಗಲದಲ್ಲಿ ಜೆಡಿಎಸ್‌ನ (JDS) ಮಹತ್ವಾಕಾಂಕ್ಷಿ ಜನತಾ ಜಲಧಾರೆ (Janata Jaladhare) ಸಮಾರೋಪ ಸಮಾರಂಭ ನಡೆಯುತ್ತಿದೆ. ಜನತಾ ಜಲಧಾರೆ ಸಮಾರಂಭದಲ್ಲಿ ಭಾಗಿಯಾಗಲು ರಾಜ್ಯದ ಮೂಲೆ ಮೂಲೆಗಳಿಂದ ಜೆಡಿಎಸ್ ಕಾರ್ಯಕರ್ತರು (Activist) ಆಗಮಿಸಿದ್ದಾರೆ. ಹಾಸನದಿಂದ ಅತಿ ಹೆಚ್ಚು ಕಾರ್ಯಕರ್ತಯರು ಆಗಮಿಸುತ್ತಿದ್ದು, ಸಾರಿಗೆ ಬಸ್​ 547 ಹಾಗೂ 600 ಖಾಸಗಿ ವಾಹನಗಳಲ್ಲಿ (Private Vehicle) ಕಾರ್ಯಕರ್ತರ ದಂಡೇ ಹರಿದು ಬಂದಿದೆ. ಕಾರ್ಯಕ್ರಮಕ್ಕೆ ಬರುವುದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (H.D […]

Advertisement

Wordpress Social Share Plugin powered by Ultimatelysocial