ಈ ಎರಡೂ ಬಣಗಳ ನಡುವೆ ದೆಹಲಿಯ ನಕಲಿ ಗಾಂಧಿಗಳ ಬಣ ಮೂಕ ಪ್ರೇಕ್ಷಕರಷ್ಟೇ!

ಬೆಂಗಳೂರು:ಕಾಂಗ್ರೆಸ್ ನಾಯಕರಾದ ಮಾಜಿ ಸಿಎಂ  ವಿರುದ್ಧ ಬಿಜೆಪಿ ಟ್ಟಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ವರಿಷ್ಠರೀಗ ನೀರಲ್ಲಿ ಮುಳುಗಿ ಬಂದ ಬೆಕ್ಕಿನಂತಾಗಿದ್ದಾರೆ ಎಂದು ಲೇವಡಿ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ, ನಿಮಗಿದೋ ಎಚ್ಚರಿಕೆ. ಸಿದ್ದರಾಮೋತ್ಸವದ ಬಳಿಕ ನಿಮ್ಮ ಪರಿಸ್ಥಿತಿ ಇದೇ ರೀತಿ ಆಗಲಿದೆ, ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಅಕ್ಕಪಕ್ಕ‌ ಕುಳ್ಳಿರಿಸಿ

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸಮಾವೇಶ ಆಯೋಜಿಸಿದ್ದಾರೆ ಎಂದರೆ ಬಂಡಾಯದ ಬಾವುಟ ಹಾರಿಸಿದ್ದಾರೆಂದೇ ಅರ್ಥ! ಪರಮೇಶ್ವರ್‌ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗಲೂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಸಮಾವೇಶ ನಡೆಸಿ ವರಿಷ್ಠರಿಗೆ ಭರತನಾಟ್ಯ ಮಾಡಿಸಿದ್ದರು. ಸಿದ್ದರಾಮಯ್ಯನವರೇ, ಇದೆಲ್ಲವೂ ಸ್ವಾರ್ಥಕ್ಕಾಗಿ ಅಲ್ವೇ ಎಂದು ಬಿಜೆಪಿ ಪ್ರಶ್ನಿಸಿದೆ.

ಕಾಂಗ್ರೆಸ್ಸಿಗರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ. ಮತವೇ ಇಲ್ಲದವರು ಬಹುಮತ ಗಳಿಸಲು ಹೇಗೆ ಸಾಧ್ಯ? 2023 ರಲ್ಲಿ ಕಾಂಗ್ರೆಸ್ ಸೋಲು ಖಚಿತ. ಟವಲ್ ಈಗಲೇ ಹಾಕಬೇಡಿ, ನಾಳೆಯ ದಿನ ಮುಖಭಂಗವಾದಾಗ ಒರೆಸಿಕೊಳ್ಳಲು ತುಂಡು ಬಟ್ಟೆಯೂ ಲಭಿಸದು! ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲೆತ್ತಲು ಸಿದ್ದರಾಮೊತ್ಸವ ಮೂಲಕ ವೇದಿಕೆ ಸಜ್ಜುಗೊಳಿಸುತ್ತಿರುವ ಸಿದ್ದರಾಮಯ್ಯ ಬಣದ ನಾಯಕರು ಒಂದೆಡೆಯಾದರೆ, ಇದೇ ಸಿದ್ದರಾಮಯ್ಯರನ್ನು ಕೆಡವಲು ಖೆಡ್ಡಾ ತೋಡುತ್ತಿರುವ ಡಿಕೆ ಶಿವಕುಮಾರ್ ಬಣದ ನಾಯಕರು ಮತ್ತೊಂದೆಡೆ. ಈ 2 ಬಣಗಳ ನಡುವೆ ದೆಹಲಿಯ ನಕಲಿ ಗಾಂಧಿಗಳ ಬಣ ಮೂಕ ಪ್ರೇಕ್ಷಕರಷ್ಟೇ! ಎಂದು ಕೆಣಕಿದೆ.

ನಕಲಿ ಗಾಂಧಿ ಕುಟುಂಬಸ್ಥರು ಪ್ರತಿಬಾರಿಯೂ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಒಂದಾಗಿರಬೇಕೆಂದು ಸೂಚನೆ ನೀಡುತ್ತಾರೆ. ದೆಹಲಿಯಲ್ಲಿ ಹೂಂಗುಟ್ಟಿ ಬರುವ ಕಾಂಗ್ರೆಸ್ಸಿಗರು ಬೆಂಗಳೂರಿಗೆ ಬಂದ ಕೂಡಲೇ ಒಬ್ಬರ ವಿರುದ್ಧ ಇನ್ನೊಬ್ಬರು ಕತ್ತಿ ಮಸೆಯುತ್ತಾರೆ. ತಾಳಮೇಳ ಇಲ್ಲದ ಕೈ ನಾಯಕರಿಂದಾಗಿಯೇ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ.

ಮುಖ್ಯಮಂತ್ರಿ ಪದವಿಯ ಆಸೆಗಾಗಿ ಸಿದ್ದರಾಮಯ್ಯ ತಮ್ಮ ಹಳೆಯ ಅಹಿಂದ ಕಾರ್ಡ್ ಬಳಸುತ್ತಿದ್ದಾರೆ. ಅಹಿಂದ ಕಾರ್ಡ್‌ ಎಕ್ಸ್‌ಪೈರ್‌ ಆಗಿದೆ. ಕಳೆದ ಬಾರಿ ಇದೇ ಕಾರ್ಡ್ ತೋರಿಸಿ ಮೋಸ ಮಾಡಿದ್ದನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ. ಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ! ಎಂದು ಬಿಜೆಪಿ ಟಾಂಗ್ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಪೂರಕ ಪೌಷ್ಠಿಕಾಂಶ'ಕ್ಕಾಗಿ ಮಕ್ಕಳಿಗೆ 'ಆಧಾರ್ ಕಡ್ಡಾಯವಲ್ಲ' :

Thu Jun 30 , 2022
  ನವದೆಹಲಿ : ಪೂರಕ ಪೌಷ್ಠಿಕಾಂಶಕ್ಕಾಗಿ ಮಕ್ಕಳ ಆಧಾರ್ ಕಡ್ಡಾಯವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಜೂನ್ 30ರಂದು ಘೋಷಿಸಿದೆ. ಆದಾಗ್ಯೂ, ಫಲಾನುಭವಿಗೆ ಪೌಷ್ಠಿಕಾಂಶ ವಿತರಣೆಯನ್ನ ಖಚಿತಪಡಿಸಿಕೊಳ್ಳಲು ತಾಯಿ ಅಥವಾ ಪೋಷಕರ ಆಧಾರ್ʼನ್ನ ಪೋಷನ್ ಟ್ರ್ಯಾಕರ್ನಲ್ಲಿ ನಮೂದಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಸಚಿವಾಲಯ ಹೇಳಿದೆ. ಈ ಮಾಹಿತಿಯನ್ನು ಹಂಚಿಕೊಂಡ ಎಂಒಡಬ್ಲ್ಯುಸಿಡಿ, ‘ಪೂರಕ ಪೌಷ್ಠಿಕಾಂಶಕ್ಕಾಗಿ ಮಕ್ಕಳ ಆಧಾರ್ ಕಡ್ಡಾಯವಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಫಲಾನುಭವಿಗೆ ಪೌಷ್ಠಿಕಾಂಶದ […]

Advertisement

Wordpress Social Share Plugin powered by Ultimatelysocial