ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆ: ಮೇ 21ರಂದು ಸಿದ್ದರಾಮಯ್ಯ, ಡಿಕೆಶಿ ದೆಹಲಿಗೆ

 

ಬೆಂಗಳೂರು, ಮೇ 20: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂಬಂಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇ 21ರಂದು ದೆಹಲಿಯತ್ತ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರನ್ನು ಕಣಕ್ಕಿಳಿಸಬೇಕು ಹಾಗೂ ರಾಜ್ಯಸಭೆಯಲ್ಲಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಚರ್ಚಿಸಲು ಹೈಕಮಾಂಡ್‌ನಿಂದ ಬುಲಾವ್ ಬಂದಿದೆ. ಹೀಗಾಗಿ ಶನಿವಾರ ದೆಹಲಿಗೆ ಹೋಗುತ್ತೇವೆ,” ಎಂದು ಹೇಳಿದ್ದಾರೆ.

ಇತ್ತ ಉಡುಪಿಯಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, “ಮೇಲ್ಮನೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇಂದು ಅಥವಾ ನಾಳೆ ಅಂತಿಮವಾಗಬೇಕಾಗಿದ್ದು, ನಾನು ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ,” ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸಬೆಯಲ್ಲಿ ಕಾಂಗ್ರೆಸ್‌ನಿಂದ 70 ಜನ ಶಾಸಕರು ಇದ್ದಾರೆ. ಒಂದು ರಾಜ್ಯಸಭಾ ಸ್ಥಾನ ಸುಲಭದ ತುತ್ತಾಗುತ್ತದೆ. ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾದರೆ ಜೆಡಿಎಸ್ ಬೆಂಬಲ ಆಗತ್ಯವಾಗುತ್ತದೆ. ಈ ಮಧ್ಯೆ ಜೆಡಿಎಸ್ ಸಹ ಕಾಂಗ್ರೆಸ್ ಅಥವಾ ಬಿಜೆಪಿಗೆ ನಮ್ಮ ಬೆಂಬಲ ಇಲ್ಲ. ಬೇರೆ ಪಕ್ಷಗಳನ್ನು ಬೆಂಬಲಿಸುವುದಿಲ್ಲ. ನಮಗೆ ಮತಗಳ ಕೊರತೆ ಇದ್ದರೂ ಸಹ ನಾವು ಅಭ್ಯರ್ಥಿಯನ್ನು ಹಾಕುತ್ತೇವೆ ಎಂದು ಹೇಳಿದ್ದಾರೆ. ಹೀಗಿರುವಾಗ ಎರಡನೆ ಅಭ್ಯರ್ಥಿಯ ಗೆಲುವಿಗೆ ಯಾವ ಕಾರ್ಯತಂತ್ರ ರೂಪಿಸಬಹುದು ಎಂದು ಚರ್ಚಿಸಲಾಗುತ್ತದೆ.

ಇದಲ್ಲದೆ, ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 7 ಸ್ಥಾನಗಳಿಗೆ ಹಾಗೂ ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಜೂ 13ರಂದು ಮತದಾನ ನಡೆಯುತ್ತದೆ. ಈ ಎಲ್ಲಾ ಕ್ಷೇತ್ರಗಳನ್ನೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.

ಇನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಬೇಕು ಎಂದು, ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷ ಬೆಳವಣಿಗೆಯತ್ತ ಗಮನ ವಹಿಸಬೇಕು ಎಂದು ಡಿ.ಕೆ. ಶಿವಕುಮಾರ್ ಈ ಹಿಂದೆ ಪ್ರಸ್ತಾಪ ಇಟ್ಟಿದ್ದರು. ದೆಹಲಿ ಭೇಟಿ ಸಂದರ್ಭದಲ್ಲಿ ಇದೂ ಸಹ ಚರ್ಚೆಗೆ ಬರುವ ಸಾಧ್ಯತೆ ಇದೆ.

ಪ್ರಮೋದ್ ಮದ್ವರಾಜ್ ಅವರಿಗೆ ಪಶ್ಚಾತ್ತಾಪ ಆಗುತ್ತದೆ:

“ಬಿಜೆಪಿಯವರು ಪ್ರಮೋದ್ ಅವರನ್ನು ಪಕ್ಷಕ್ಕೆ ಕರೆದೋಯ್ದಿದ್ದಾರೆ. ನನ್ನ ಪ್ರಕಾರ ಆದಷ್ಟು ಬೇಗ ಪ್ರಮೋದ್ ಅವರು ತಮ್ಮ ತಪ್ಪಿನ ಬಗ್ಗೆ ಅರಿವಾಗಿ ಪಶ್ಚಾತ್ತಾಪ ಪಡೆಲಿದ್ದಾರೆ. ಪಕ್ಷ ಅವರಿಗೆ, ಅವರ ಕುಟುಂಬ ಸದಸ್ಯರಿಗೆ ಎಲ್ಲ ರೀತಿಯ ಅವಕಾಶ, ಅಧಿಕಾರ ನೀಡಿತ್ತು. ಕಾಂಗ್ರೆಸ್ ಪಕ್ಷದಲ್ಲಿ ಅವರು ನನ್ನ ಪಕ್ಕ ಕೂರುತ್ತಿದ್ದರೂ ಈಗ ಅಲ್ಲಿ ಕೆಳಗೆ ಕೂರುವ ಸ್ಥಿತಿ ಬಂದಿದೆ. ಅವರ ಫೋಟೋ ನೋಡಿ ನನಗೆ ಬಹಳ ಬೇಸರವಾಯಿತು. ಅವರು ತಮ್ಮ ಸ್ವಇಚ್ಛೆಯಿಂದ ಈ ತೀರ್ಮಾನ ಕೈಗೊಂಡಿದ್ದಾರೆ. ಆದರೆ ನಮ್ಮ ಪಕ್ಷದ ನಾಯಕರು ಬಹಳಷ್ಟು ಬಿಜೆಪಿ ಕಾರ್ಯಕರ್ತರು ಪಕ್ಷಕ್ಕೆ ಸೇರಲು ಇಚ್ಛೆ ವ್ಯಕ್ತಪಡಿಸಿದ್ದು, ಅವರನ್ನು ಸ್ವಾಗತಿಸಲು ನಾನು ಸಜ್ಜಾಗುತ್ತಿದ್ದೇನೆ,” ಎಂದು ಡಿ.ಕೆ. ಶಿವಕುಮಾರ್ ಉಡುಪಿಯಲ್ಲಿ ಹೇಳಿದ್ದಾರೆ.

ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಅನೇಕ ಮುಖಂಡರು, ಯುವಕರು ಉತ್ಸುಕತೆಯಿಂದ ಕಾಂಗ್ರೆಸ್ ಪಕ್ಷದ ಸದಸ್ಯತ್ವ ತೆಗೆದುಕೊಂಡಿದ್ದಾರೆ ಎಂದು ನಮ್ಮ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರುಗಳು ಮಾಹಿತಿ ನೀಡಿದ್ದಾರೆ. ಇದು ಬಹಳ ಉತ್ತಮ ವಿಚಾರ. ನಾವು ಮತ್ತೆ ಸದಸ್ಯತ್ವ ನೋಂದಣಿ ಆರಂಭಿಸುತ್ತೇವೆ. ಇನ್ನು ಯುವಕರು ಹಾಗೂ ಮಹಿಳೆಯರಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅವಕಾಶ ನೀಡಲು ಉದಯಪುರದಲ್ಲಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆ ಸಭೆಯಲ್ಲಿನ ಯೋಜನೆಗಳನ್ನು ಜಾರಿಗೊಳಿಸಲು ಒಂದು ಸಮಿತಿ ರಚಿಸಲಾಗುವುದು. ಆ ಸಭೆ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಿಸುತ್ತೇನೆ. ಎಲ್ಲ ವರ್ಗದ ಜನರಿಗೆ ಅಧಿಕಾರ ನೀಡಲು ಪಕ್ಷ ಸಜ್ಜಾಗಿದೆ .’

150 ಕ್ಷೇತ್ರಗಳನ್ನು ಗೆಲ್ಲಬಹುದು ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೇವಲ 150 ಮಾತ್ರವಲ್ಲ, 224 ಕ್ಷೇತ್ರಗಳಲ್ಲೂ ಗೆಲ್ಲಬಹುದು’ ಎಂದು ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ: ಎಚ್. ವಿಶ್ವನಾಥ್

Sat May 21 , 2022
ಮೈಸೂರು: ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯ ಸಂಘರ್ಷವಲ್ಲ. ನಾವೆಲ್ಲ ಸೇರಿ ಶಿಕ್ಷಣ ಹಾಳು ಮಾಡುತ್ತಿದ್ದೇವೆ. ರೋಹಿತ್ ಚಕ್ರತೀರ್ಥ ಯಾರಪ್ಪ? ಸಂಘ ಪರಿವಾರದ ಕಾರ್ಯಕರ್ತ ಅವರು. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ತಯಾರಿಯ ಅಧ್ಯಕ್ಷರಾಗಿರುವುದು ದುರಂತ ಎಂದು ಮೈಸೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ ಪಠ್ಯ ಯಾವುದೇ ಕಾರಣಕ್ಕೂ ಬೇಡ. ಯಜ್ಞ ಕುಂಡ ಯಾವ ಕಡೆ […]

Advertisement

Wordpress Social Share Plugin powered by Ultimatelysocial