ಹಿಂದೆ ಐದು ವರ್ಷ ವಿರೋಧ ಪಕ್ಷದಲ್ಲಿ ಇರಲಿಲ್ಲವೇ? ಆಗ ಯಾಕೆ ಈ ಭ್ರಷ್ಟಾಚಾರದ ಮಾತು ಹೇಳಲಿಲ್ಲ.

ಮೈಸೂರು: ಕಾಂಗ್ರೆಸ್ ನಾಯಕರ ಭ್ರಷ್ಟಾಚಾರದ ಕಡತ ತೆಗೆಯುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯವರು ಇಲ್ಲಿವರೆಗೆ ಕಡ್ಲೆಪುರಿ ತಿನ್ನುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದು ಇಷ್ಟು ವರ್ಷವಾಯ್ತು.

ಹಿಂದೆ ಐದು ವರ್ಷ ವಿರೋಧ ಪಕ್ಷದಲ್ಲಿ ಇರಲಿಲ್ಲವೇ? ಆಗ ಯಾಕೆ ಈ ಭ್ರಷ್ಟಾಚಾರದ ಮಾತು ಹೇಳಲಿಲ್ಲ. ಈಗ ನಾವು ನಿಮ್ಮ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಈ ಮಾತುಗಳನ್ನು ಹೇಳಿದರೆ ಜನ ನಂಬುವುದಿಲ್ಲ. ಭ್ರಷ್ಟಾಚಾರ ವಿಚಾರ ಗೊತ್ತಿದ್ದರೂ ಅದನ್ನ ಮುಚ್ವಿಡುವುದೂ ಕೂಡ ಅಪರಾಧ. ಇದು ಸರ್ಕಾರಕ್ಕೆ ಗೊತ್ತಿಲ್ಲವೇ? ಜನರಿಗೆ ಇದೆಲ್ಲವೂ ಅರ್ಥವಾಗುತ್ತಿದೆ ಎಂದರು.

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ವಿಚಾರವಾಗಿ ಮಾತನಾಡಿದ ಅವರು, ಅಕ್ರಮ ನಡೆದಿದೆ ಎಂದು ನನ್ನ ಬಳಿ ಕೂಡ ಬಂದು ಹೇಳಿದ್ದರು. ನಾನು ಸಂಬಂಧ ಪಟ್ಟವರಿಗೆ ತನಿಖೆಗೆ ಹೇಳಿದ್ದೆ. ತನಿಖೆ ನಡೆಯುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದರು.

ಮಠಕ್ಕೆ ನೀಡುವ ಅನುದಾನ ಪಡೆಯಲು ಕಮಿಷನ್ ಕೊಡಬೇಕು ಎಂಬ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಯೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದರ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿಯಲ್ಲಿ ಗಲಭೆ ನಡೆಸಿದವರನ್ನು ಕಾಂಗ್ರೆಸ್ ರಕ್ಷಣೆ ಮಾಡುತ್ತಿದೆ.‌ ಬಿ.ಸಿ.ಪಾಟೀಲ

Mon Apr 18 , 2022
ಚಿತ್ರದುರ್ಗ: ಹುಬ್ಬಳ್ಳಿಯಲ್ಲಿ ಗಲಭೆ ನಡೆಸಿದವರನ್ನು ಕಾಂಗ್ರೆಸ್ ರಕ್ಷಣೆ ಮಾಡುತ್ತಿದೆ.‌ ಸುಟ್ಟ ಮನೆಯಲ್ಲಿ ಬೆಂಕಿ ಕಾಯಿಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ‌. ಅಲ್ಪಸಂಖ್ಯಾತರು ಠಾಣೆಗೆ ಮುತ್ತಿಗೆ ಹಾಕಿ ಗಲಾಟೆ ಮಾಡಿದ್ದಾರೆ. ಗಲಭೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆ ಹೊರತು ರಕ್ಷಣೆ ಅಲ್ಲ. ಗಲಭೆಕೋರರ […]

Advertisement

Wordpress Social Share Plugin powered by Ultimatelysocial